ಶಾಲಾ ಶಿಕ್ಷಕರ ಪ್ರತಿಭಟನೆ ನಾಡಿದ್ದು
Team Udayavani, Feb 14, 2019, 5:48 AM IST
ದಾವಣಗೆರೆ: ಮುಂದಿನ ಶೈಕ್ಷಣಿಕ ವರ್ಷಕ್ಕೆ ಅನುಕೂಲ ಆಗುವಂತೆ ಶಿಕ್ಷಕರ ವರ್ಗಾವಣೆ, ಪದವೀಧರರು ಮತ್ತು ಇತರೆ ಶಿಕ್ಷಕರಿಗೆ ಬಡ್ತಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಫೆ. 16ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಎನ್. ತಿಪ್ಪೇಶಪ್ಪ ತಿಳಿಸಿದ್ದಾರೆ.
ಶನಿವಾರ ಮಧ್ಯಾಹ್ನ 12ಕ್ಕೆ ನಡೆಯುವ ಪ್ರತಿಭಟನೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು, ಶಿಕ್ಷಕರು ಭಾಗವಹಿಸುವರು. ಹಲವಾರು ವರ್ಷಗಳ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಳೆದ ಮೂರು ವರ್ಷದಿಂದ ಒಟ್ಟಾರೆಯಾಗಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನೇ ನಿಲ್ಲಿಸಲಾಗಿದೆ. ವರ್ಗಾವಣೆಗೆ ಸಂಬಂಧಿಸಿದಂತೆ ಕೆಲವಾರು ತಾಂತ್ರಿಕ ಸಮಸ್ಯೆ, ಗೊಂದಲ ಎಲ್ಲವೂ ನಿವಾರಣೆ ಆಗಿವೆ. ಸರ್ಕಾರ ಆದಷ್ಟು ಬೇಗ ಮುಂದಿನ ಶೈಕ್ಷಣಿಕ ವರ್ಷಕ್ಕೆ ಅನುಕೂಲ ಆಗುವಂತೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ಪ್ರಾಥಮಿಕ ಶಾಲಾ ಹಂತದಲ್ಲಿ 6 ರಿಂದ 8ನೇ ತರಗತಿಯವರೆಗೆ ಪಾಠ ಮಾಡುತ್ತಿರುವ ಪದವೀಧರರು ಮತ್ತು ಇತರೆ ಶಿಕ್ಷಕರಿಗೆ ಬಡ್ತಿ ನೀಡಬೇಕು. ಹೊಸದಾಗಿ ನೇಮಕಾತಿ ಮಾಡಿಕೊಳ್ಳುವ ಬದಲಿಗೆ ಈಗಾಗಲೇ ಕೆಲಸ ಮಾಡುತ್ತಿರುವಂತಹ ಪದವೀಧರರು ಮತ್ತು ಇತರೆ ಶಿಕ್ಷಕರಿಗೆ ಬಡ್ತಿ ನೀಡುವ ಮೂಲಕ ಅನುಕೂಲ ಮಾಡಿಕೊಡಬೇಕು ಎಂಬುದು ಸಂಘದ ಒತ್ತಾಯ ಎಂದು ತಿಳಿಸಿದರು.
ರಾಜ್ಯದಲ್ಲೆಡೆ 28 ಸಾವಿರದಷ್ಟು ಮುಖ್ಯೋಪಾಧ್ಯಾಯರು, ಬಡ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ 10 ರಿಂದ 30 ವರ್ಷಗಳಲ್ಲಿ ಯಾವುದೇ ರೀತಿಯ ಆರ್ಥಿಕ ಸೌಲಭ್ಯವೇ ದೊರೆತಿಲ್ಲ. ಶಾಲಾ ಆಡಳಿತ ಎಲ್ಲಾ ಕೆಲಸದ ನಿರ್ವಹಣೆ ಮಾಡುತ್ತಿದ್ದರೂ ಆರ್ಥಿಕ ಸೌಲಭ್ಯ ಮಾತ್ರ ಮರೀಚಿಕೆ. ಅವರ ಜೊತೆ ಕೆಲಸ ಮಾಡುವಂತಹ ಸಹ ಶಿಕ್ಷಕರಿಗೆ ಎಲ್ಲಾ ರೀತಿಯ ಆರ್ಥಿಕ ಸೌಲಭ್ಯ ದೊರೆಯುತ್ತಿವೆ. ಮುಖ್ಯೋಪಾಧ್ಯಾಯರು, ಬಡ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಆರ್ಥಿಕ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮೀಣ ಕೃಪಾಂಕ ಶಿಕ್ಷಕರಲ್ಲಿ ಕೆಲವರು ಕೆಲಸ ಕಳೆದುಕೊಂಡಿದ್ದಾರೆ. ಇನ್ನೂ ಕೆಲವರ ಪುನರ್ ನೇಮಕಾತಿ ಬಾಕಿ ಇದೆ. ಅವರ ಸಮಸ್ಯೆ ಬಗೆಹರಿಸುವುದು, ಮರಣಶಾಸನದಂತಿರುವ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ, ಪುನಾಃ ಹಳೆಯ ಪಿಂಚಣಿ ಯೋಜನೆ ಮುಂದುವರೆಸುವ ನಿಟ್ಟಿನಲ್ಲಿ ಸರ್ಕಾರ ರಚಿಸಿರುವ ಸಮಿತಿಯ ವರದಿಯನ್ನು ಆದಷ್ಟು ಬೇಗ ಪಡೆದು, ಹಳೆಯ ಪಿಂಚಣಿ ಯೋಜನೆಯನ್ನೇ ಮುಂದುವರೆಸುವುದು, ಶಿಕ್ಷಕರನ್ನ ಬಿಎಲ್‌ಒ ಹಾಗೂ ಇನ್ನಿತರೆ ಶಿಕ್ಷಣೇತರ ಕಾರ್ಯಗಳಿಂದ ಮುಕ್ತಗೊಳಿಸುವ ಮುಖೇನ ಬೋಧನಾ ಕಾರ್ಯದಲ್ಲಿ ಹೆಚ್ಚಾಗಿ
ತೊಡಗಿಸಿಕೊಳ್ಳಲು ಅನುಕೂಲ ಮಾಡಿಕೊಡುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಎಂ. ಸಿದ್ದೇಶಿ, ಎಚ್. ಚಂದ್ರಪ್ಪ, ಕೆ.ಶಿವಮೂರ್ತಿ, ಖೈರುನ್ನಿಸಾ, ಎಸ್. ಓಂಕಾರಪ್ಪ, ಪ್ರಕಾಶ್ ಮಡಿವಾಳ್, ದೇವೇಂದ್ರಪ್ಪ, ಶಾಮಣ್ಣ. ಗಂಗಾಧರನಾಯ್ಕ, ಆರ್.ಜಿ. ಅಜ್ಜಯ್ಯ, ಕೆ.ಇ. ವೇದಮೂರ್ತಿ, ಸೈಯದ್ ನಜೀರ್ ಅಹಮ್ಮದ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.