ಸೀಲ್‌ಡೌನ್ ಪ್ರದೇಶದಲ್ಲಿ ಅಗತ್ಯ ವಸ್ತುಗಳಿಗಾಗಿ ಜನರ ಪರದಾಟ
Team Udayavani, May 13, 2020, 6:19 AM IST
ದಾವಣಗೆರೆ: ಸೀಲ್‌ಡೌನ್ ಪ್ರದೇಶದಲ್ಲಿ ಅಗತ್ಯ ವಸ್ತುಗಳ ವ್ಯವಸ್ಥೆ ಮಾಡುವಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮುಂದಾಗುತ್ತಿಲ್ಲ ಎಂದು ಸೋಮವಾರ ಎಸ್.ಪಿ.ಎಸ್. ನಗರದ ನಿವಾಸಿಗಳು ಪ್ರತಿಭಟಿಸಿದ್ದಾರೆ.
ಸೀಲ್‌ಡೌನ್ ಪ್ರದೇಶದಲ್ಲಿ ಅಗತ್ಯ ವಸ್ತುಗಳಿಗಾಗಿ ಜನರ ಪರದಾಡುತ್ತಿದ್ದಾರೆ. ಎಸ್‌ಪಿಎಸ್ ನಗರದ 2ನೇ ಹಂತದಲ್ಲಿ ಕಳೆದ 4 ದಿನದಿಂದ ಹಾಲು, ತರಕಾರಿ, ಆಹಾರ ಸಾಮಾಗ್ರಿಗಳು ದೊರೆಯುತ್ತಿಲ್ಲ. ಹೊರಗಡೆ ಹೋಗಲು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳಿಲ್ಲದೇ ವಯೋವೃದ್ದರು ಹಾಗೂ ಮಕ್ಕಳು ಪರದಾಡುತ್ತಿದ್ದಾರೆ. ಮಕ್ಕಳಿಗೆ ಹಾಲು ಸಿಗದ ಪರಿಸ್ಥಿತಿ ಎದುರಾಗಿದೆ. ನಮಗೆ ಅಗತ್ಯ ವಸ್ತುಗಳನ್ನು ನೀಡಿ, ಇಲ್ಲದಿದ್ದಲ್ಲಿ ಲಾಕ್‌ಡೌನ್ ತೆರವು ಮಾಡಿ ಹೊರ ಹೋಗಲು ಬಿಡಬೇಕೆಂದು ಆಗ್ರಹಿಸಿದರು.
ತಮ್ಮ ಪ್ರದೇಶದಲ್ಲಿನ ಅಂಗಡಿಗಳನ್ನು ಸಹ ಬಂದ್ ಮಾಡಲಾಗಿದೆ. ಸ್ಥಳೀಯ ಪಾಲಿಕೆ ಸದಸ್ಯರು ಕಿಟ್ ನೀಡುತ್ತಿಲ್ಲ. ಶಾಸಕರು ಹಾಗೂ ಸಂಸದರು ನಮ್ಮ ಕಷ್ಟ ಆಲಿಸಬೇಕು.ನಮಗೆ ನೆರವು ನೀಡಬೇಕು. ಜಿಲ್ಲಾಡಳಿತ ಈ ಕೂಡಲೇ ಅಗತ್ಯವಿರುವ ಆಹಾರ ಸಾಮಗ್ರಿಗಳ ವಿತರಣೆಗೆ ಮುಂದಾಗಬೇಕೆಂದು ಎಸ್ ಪಿಎಸ್ ನಗರದ ನಿವಾಸಿಗಳು ಒತ್ತಾಯಿಸಿದರು. ಎಸ್.ಪಿ.ಎಸ್ ನಗರ, ಜಾಲಿ ನಗರ, ಬಾಷಾ ನಗರ, ಇಮಾಂ ನಗರ, ಕೆಟಿಜೆ ನಗರ, ಇತರೆಡೆ ಸೇರಿ 7 ಏರಿಯಾಗಳು ಈಗ ಕಂಟೈನ್‌ಮೆಂಟ್ ಝೋನ್‌ಗಳಾಗಿವೆ.
ಕಾಂಗ್ರೆಸ್ ಮನವಿ: ದಾವಣಗೆರೆಯಲ್ಲಿ ಕೋವಿಡ್ ಪಾಸಿಟಿವ್ ಬಂದಿರುವ ಪ್ರದೇಶಗಳಲ್ಲಿ ಅತ್ಯಂತ ಬಡ ಕುಟುಂಬಗಳು ವಾಸಿಸುತ್ತಿದ್ದಾರೆ.ಆದ್ದರಿಂದ ಕಂಟೈನ್‌ಮೆಂಟ್ ಝೋನ್‌ನಲ್ಲಿ ಜನರಿಗೆ ಜಿಲ್ಲಾಡಳಿತದಿಂದ ದವಸಧಾನ್ಯ ಪೂರೈಕೆ ಮಾಡಬೇಕೆಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ. ಎಲ್.ಹರೀಶ್ ಬಸಾಪುರ ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.