ಉದ್ಯೋಗ ಖಾತ್ರಿಯೊಂದಿಗೆ ಅರೆ ವೈದ್ಯಕೀಯ ಅಲ್ಪಾವಧಿ ಕೋರ್ಸ್
ಸಮಾಜ ಕಲ್ಯಾಣ ಇಲಾಖೆಯಿಂದ ಹೊಸ ಯೋಜನೆ ; ಪರಿಶಿಷ್ಟ ನಿರುದ್ಯೋಗಿ ಯುವಜನತೆಗೆ ಇದೊಂದು ಸುವರ್ಣಾವಕಾಶ
Team Udayavani, Oct 25, 2022, 7:25 AM IST
ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ಇದೇ ಪ್ರಥಮ ಬಾರಿಗೆ ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಖಾತ್ರಿಯೊಂದಿಗೆ ಪ್ಯಾರಾಮೆಡಿಕಲ್ ಕೌಶಲ ತರಬೇತಿ ಮತ್ತು ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ತರಬೇತಿ ನೀಡಲು ನಿರ್ಧರಿಸಿದೆ.
ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ತರಬೇತಿ ನೀಡಲಾಗುತ್ತಿದೆ. ಪ್ರಸಕ್ತ ವರ್ಷ ರಾಜ್ಯದ 1,500 ನಿರುದ್ಯೋಗಿ ಯುವಕ-ಯುವತಿಯರಿಗೆ ಶೇ.75 ಉದ್ಯೋಗ ಖಾತ್ರಿಯೊಂದಿಗೆ ತರಬೇತಿ ನೀಡಲು ನಿರ್ಧರಿಸಲಾಗಿದ್ದು, 500ಕ್ಕಿಂತ ಹೆಚ್ಚು ಹಾಸಿಗೆ ಹೊಂದಿರುವ ಹಾಗೂ ರಾಷ್ಟ್ರೀಯ ಮಾನ್ಯತೆ ಪಡೆದ ಆಸ್ಪತ್ರೆಗಳ ಮೂಲಕ ವಸತಿ ಸಹಿತವಾಗಿ ತರಬೇತಿ ನೀಡಲು ತೀರ್ಮಾನಿಸಲಾಗಿದೆ.
ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಅಭ್ಯರ್ಥಿಗಳನ್ನು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾದ ಹಾಗೂ ಪ್ಯಾರಾಮೆಡಿಕಲ್ ಕೌಶಲ ತರಬೇತಿಗೆ ಅರೆವೈದ್ಯಕೀಯ ಕೋರ್ಸ್‌ಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ಯಾರಾಮೆಡಿಕಲ್ ಅಸಿಸ್ಟೆಂಟ್ (ನಾನ್ ಪ್ಯಾರಾಮೆಡಿಕಲ್) ತರಬೇತಿ ಮೂರು ತಿಂಗಳ ಅವಧಿಯದ್ದಾಗಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾಗಿರಬೇಕು. ಇದರಲ್ಲಿ ಮೂರು ರೀತಿಯ ತರಬೇತಿಗಳಿವೆ.
ಪ್ಯಾರಾಮೆಡಿಕಲ್ ಟೆಕ್ನೀಶಿಯನ್ (ಪ್ಯಾರಾಮೆಡಿಕಲ್ ಕೌಶಲ ತರಬೇತಿ) ತರಬೇತಿ ಸಹ ಮೂರು ತಿಂಗಳ ಅವಧಿಯದ್ದಾಗಿದ್ದು, ಪ್ಯಾರಾಮೆಡಿಕಲ್ ಡಿಪ್ಲೊಮಾ ಕೋರ್ಸ್ ಪೂರ್ಣಗೊಳಿಸಿರಬೇಕು. ಇದರಲ್ಲಿ ಐದು ರೀತಿಯ ತರಬೇತಿಗಳಿವೆ.
ಆಯ್ಕೆ ವಿಧಾನ ಹೇಗೆ?
ನಿಗದಿತ ಗುರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬಂದಾಗ ನಿಗದಿತ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ತರಬೇತಿಗೆ ನಿಯೋಜಿಸಲಾಗುತ್ತದೆ. ನಿಗದಿತ ಗುರಿಗೆ ಅನುಗುಣವಾಗಿ ಅರ್ಜಿಗಳು ಬಾರದಿದ್ದರೆ ಅರ್ಜಿಗಳನ್ನು ನೇರವಾಗಿ ಸ್ವೀಕರಿಸಿ, ಅರ್ಹತಾ ಮಾನದಂಡ ಪೂರೈಸಿದವರಿಗೆ ತರಬೇತಿಗೆ ನಿಯೋಜಿಸಲು ಇಲಾಖೆ ಯೋಜನೆ ಹಾಕಿಕೊಂಡಿದೆ. ಆಸಕ್ತ 18ರಿಂದ 40ವರ್ಷದೊಳಗಿನವರು ಅರ್ಜಿ ನಮೂನೆಯನ್ನು ವೆಬ್‌ಸೈಟ್: http://www.sw.kar. nic.in http://www.sw. kar.nic. in ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಸ್ಕ್ಯಾನ್ ಮಾಡಿ ಈ ಮೇಲ್ [email protected] ಮೂಲಕ ಸಲ್ಲಿಸಬೇಕು. ತಾಂತ್ರಿಕ ಸಮಸ್ಯೆ ಕಂಡು ಬಂದರೆ [email protected]ಗೆ ಸಲ್ಲಿಸಬಹುದು. ದೂರವಾಣಿ ಸಂಖ್ಯೆ 080-22207784 ಸಂರ್ಪಕಿಸಲು ಸೂಚಿಸಲಾಗಿದೆ. ಅರ್ಜಿ ಸಲ್ಲಿಸಲು ನ.15ರ ಸಂಜೆ 6 ಗಂಟೆವರೆಗೆ ಅವಕಾಶವಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ತಿಳಿಸಿದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅನುಕೂಲ ಕಲ್ಪಿಸುತ್ತ ಬಂದಿರುವ ಇಲಾಖೆ, ಇದೇ ಮೊದಲ ಬಾರಿಗೆ ಪರಿಶಿಷ್ಟ ಯುವಜನರಿಗೆ ಶೇ.75 ಉದ್ಯೋಗ ಖಾತ್ರಿಯೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ತರಬೇತಿ ನೀಡಿ, ಉದ್ಯೋಗ ಕಲ್ಪಿಸಲು ಯೋಜನೆ ರೂಪಿಸಿದೆ. ಪ.ಜಾತಿ, ಪಂಗಡದ ಯುವಜನತೆ ಆರೋಗ್ಯ ಕ್ಷೇತ್ರದಲ್ಲಿ ಉದ್ಯೋಗಸ್ಥರಾಗಲು ಇದು ಸುವರ್ಣಾವಕಾಶವಾಗಿದೆ.
-ರೇಷ್ಮಾ ಕೌಸರ್,
ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ
– ಎಚ್.ಕೆ.ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.