ಬೇಡಿಕೆ ಈಡೇರುವವರೆಗೂ ಸೇವೆ ಸ್ಥಗಿತ
Team Udayavani, Jul 11, 2020, 11:53 AM IST
ಹರಿಹರ: ಕೇಂದ್ರ, ರಾಜ್ಯ ಸರ್ಕಾರಗಳು ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವರೆಗೂ ಸೇವೆ ಸ್ಥಗಿತಗೊಳಿಸುವುದಾಗಿ ಆಶಾ ಕಾರ್ಯಕರ್ತೆಯರ ತಾಲೂಕು ಸಂಘಟನೆ ಮುಖಂಡರು ಘೋಷಿಸಿದ್ದಾರೆ.
ತಾಲೂಕು ಆರೋಗ್ಯಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು ವಿವಿಧ ಬೇಡಿಕೆ ಈಡೇರಿಕೆಗೆ ಕಳೆದ ಹಲವು ತಿಂಗಳಿನಿಂದ ಒತ್ತಾಯಿಸಿದರೂ ಸರ್ಕಾರ ಸ್ಪಂದಿಸದ ಕಾರಣ ಅನಿರ್ಧಿಷ್ಟಾವವರೆಗೆ ಸೇವೆ ಸ್ಥಗಿತಗೊಳಿಸಿರುವುದಾಗಿ ತಿಳಿಸಿದರು. ಆಶಾ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಕೋವಿಡ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಸರ್ಕಾರ ಸ್ಯಾನಿಟೈಸರ್, ಉತ್ತಮ ದರ್ಜೆಯ ಮಾಸ್ಕ್, ಗ್ಲೌಸ್, ಫೇಸ್ ಶೀಲ್ಡ್ ಒದಗಿಸುತ್ತಿಲ್ಲ, ಕನಿಷ್ಠ ಗೌರವಧನ ನೀಡುತ್ತಿಲ್ಲ. ಸರ್ಕಾರದ ಚಪ್ಪಾಳೆ, ಹೂಮಳೆ ನಮಗೆ ಬೇಕಿಲ್ಲ, ಅಗತ್ಯ ಸೌಕರ್ಯಗಳು ಬೇಕು, ಕನಿಷ್ಠ ಗೌರವಧನ ಬೇಕೆಂದು ಆಗ್ರಹಿಸಿದರು.
ಕಳೆದ ಮಾರ್ಚ್‌ನಿಂದ ಹತ್ತಕ್ಕೂ ಹೆಚ್ಚು ಬಾರಿ ಸಿಎಂ, ಆರೋಗ್ಯ ಸಚಿವರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದ್ದರೂ ಸಹ ಯಾವುದೇ ಪ್ರತಿಕ್ರಿಯೆ ನೀಡದ ಅನಿವಾರ್ಯವಾಗಿ ಸೇವೆ ಸ್ಥಗಿತಗೊಳಿಸುತ್ತಿದ್ದೇವೆ. ಗೌರವಧನ ಎರಡನ್ನೂ ಸೇರಿ ಮಾಸಿಕ ಕನಿಷ್ಠ 12 ಸಾವಿರ ರೂ. ಗೌರವಧನ ನೀಡುವುದು, ಸೇರಿದಂತೆ ಬೇಡಿಕೆ ಈಡೇರಿಸುವವರೆಗೂ ತಾಲೂಕಿನ ಯಾವುದೇ ಆಶಾ ಕಾರ್ಯಕರ್ತೆಯರು ಸೇವೆಗೆ ಹಾಜರಾಗುವುದಿಲ್ಲ ಎಂದರು. ವೇದಾವತಿ, ಯಶೋದಾ, ರೇಣುಕಾ.ಕೆ, ಜಯಶೀಲಾ, ಹೊನ್ನಮ್ಮ, ಲಕ್ಷ್ಮೀ ಎನ್., ಶಾಂತಾ, ಉಮಾದೇವಿ, ಶೃತಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.