ಬಾಣಸಿಗರಿಗೂ ಸೌಲಭ್ಯ ಕಲ್ಪಿಸಿ: ಶಂಕರರಾವ್ ಆಗ್ರಹ
Team Udayavani, Jun 24, 2017, 12:12 PM IST
ದಾವಣಗೆರೆ: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮಾದರಿ ಅಡುಗೆ ಕಾರ್ಮಿಕರಿಗಾಗಿಯೇ ಪ್ರತ್ಯೇಕ ಮಂಡಳಿ ಪ್ರಾರಂಭ, ಆರೋಗ್ಯ ವಿಮೆ ಇತರೆ ಸೌಲಭ್ಯ ಒದಗಿಸಬೇಕು ಎಂದು ಸರ್ಕಾರಕ್ಕೆ ಅಡುಗೆ ಕೆಲಸ ಮಾಡುವವರ ಮತ್ತು ಸಹಾಯಕರ ಅಸಂಘಟಿತ ಕಾರ್ಮಿಕರ ಸಂಘ ರಾಜ್ಯ ಅಧ್ಯಕ್ಷ ಬಿ.ಜಿ. ಶಂಕರ್‌ರಾವ್ ಒತ್ತಾಯಿಸಿದ್ದಾರೆ.
ಶುಕ್ರವಾರ ರೋಟರಿ ಭಾಲಭವನದಲ್ಲಿ ರಾಜ್ಯ ಮಟ್ಟದ ಕಾರ್ಮಿಕರ ವಿಶೇಷ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಟ್ಟಡ ಕಾರ್ಮಿಕರಂತೆ ಸರ್ಕಾರದ ವಿವಿಧ ಸೌಲಭ್ಯ ಪಡೆಯುವ ನಿಟ್ಟಿನಲ್ಲಿ ಅಡುಗೆ ಕೆಲಸ ಮಾಡುವವರು ಮತ್ತು ಸಹಾಯಕರು ಎಲ್ಲೆಡೆ ಸಂಘಟಿತರಾಗಬೇಕು. ಎಲ್ಲರೂ ಒಗ್ಗಟ್ಟಾಗಿ ಬೇಡಿಕೆ ಈಡೇರಿಕೆಗೆ ಒತ್ತಾಯಿಸಬೇಕು ಎಂದರು.
ಯಾವುದೇ ಸಭೆ, ಸಮಾರಂಭ, ಶುಭ ಕಾರ್ಯವೇ ಇರಲಿ ಅಡುಗೆ ಮಾಡುವರು ಮತ್ತು ಸಹಾಯಕರು ಬೇಕೇ ಬೇಕು. ಇಡೀ ಕಾರ್ಯಕ್ರಮದ ಯಶಸ್ಸಿಗೆ ಬಹು ಮುಖ್ಯ ಕಾರಣವಾಗುವ ಈ ಕೆಲಸಗಾರರಿಗೆ ಸರ್ಕಾರದ ಯಾವುದೇ ಸೌಲಭ್ಯ ದೊರೆಯುತ್ತಿಲ್ಲ. ಅದಕ್ಕೆ ಮುಖ್ಯ ಕಾರಣ ಸಂಘಟನೆ ಕೊರತೆ ಎಂದು ಹೇಳಿದರು.
ಸರ್ಕಾರದ ಸೌಲಭ್ಯ ಪಡೆಯಲು ಸಂಘಟಿತರಾಗಬೇಕು. ಸಂಘಟನೆಯನ್ನೇ ನೋಡಿ ಯಾರೇ ಆಗಲಿ ನಮ್ಮ ಬೇಡಿಕೆ, ಒತ್ತಾಯ ಕೇಳುತ್ತಾರೆ. ಹಾಗಾಗಿ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಸಂಘಟನೆ ವಿಸ್ತರಿಸಲಾಗುವುದು. ರಾಜ್ಯ ಮಟ್ಟದ ಸಮಾವೇಶ ಮೂಲಕ ಅಡುಗೆ ಕೆಲಸ ಮಾಡುವವರು ಮತ್ತು ಸಹಾಯಕರ ಬೇಡಿಕೆ ಈಡೇರಿಕೆಗೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸದಾ ಅಪಾಯದಲ್ಲಿ ಕೆಲಸ ಮಾಡುವಂತಹ ಅಡುಗೆ ಕೆಲಸ ಮಾಡುವವರು ಮತ್ತು ಸಹಾಯಕರಿಗೆ ತೀರಾ ಅಗತ್ಯವಾದ ಕಡ್ಡಾಯವಾಗಿ ಆರೋಗ್ಯ ವಿಮೆ, ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು, ಪಿಂಚಣಿ ಮತ್ತಿತರ ಸೌಲಭ್ಯ ಬೇಕು. ಈ ಸೌಲಭ್ಯ ಪಡೆಯುವಂತಾಗಲು ಜಿಲ್ಲಾ, ತಾಲೂಕು, ಹೋಬಳಿ, ಗ್ರಾಮಗಳಲ್ಲಿನ ಅಡುಗೆ ಕೆಲಸ ಮಾಡುವರು ಮತ್ತು ಸಹಾಯಕರು ಸಂಘಟನೆಯೊಂದಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಪ್ರಾಸ್ತಾವಿಕ ಮಾತುಗಳಾಡಿದ ಕೆ.ಎನ್. ರವಿಕುಮಾರ್, ಅಡುಗೆ ಕೆಲಸ ಮಾಡುವವರು ಮತ್ತು ಸಹಾಯಕರ ಸಮಗ್ರ ಅಭಿವೃದ್ಧಿಗೆ ತೀರಾ ಅತ್ಯಗತ್ಯವಾಗಿರುವ ಕಲ್ಯಾಣ ಮಂಡಳಿ, ವಿಮೆ ಹಾಗೂ ಸರ್ಕಾರದ ಇತರೆ ಸೌಲಭ್ಯ ಪಡೆಯಲು ಸಂಘಟನೆ ಅತೀ ಮುಖ್ಯ. ಹಾಗಾಗಿ ಅಡುಗೆ ಮಾಡುವವರು ಮತ್ತು ಸಹಾಯಕರು ಸಂಘಟಿತರಾಗಬೇಕು.
ಪ್ರಬಲವಾಗಿ ಸಂಘಟಿತರಾಗುವ ಮೂಲಕ ಹೋರಾಟದ ಮೂಲಕ ಬೇಡಿಕೆ ಈಡೇರಿಸಿಕೊಳ್ಳಬೇಕು ಎಂದು ತಿಳಿಸಿದರು. ಮುಖಂಡ ಪೂಜಾರ್ ಬಸವರಾಜಪ್ಪ ಮಾತನಾಡಿ, ಅತಿ ಪವಿತ್ರ ಮತ್ತು ಮುಖ್ಯವಾಗ ಅಡುಗೆ ಕೆಲಸ ಮಾಡುವರು ಮತ್ತು ಅವರ ಸಹಾಯಕರಿಗೆ ಕಚೇರಿಗೆ ಅಗತ್ಯ ನಿವೇಶನ ಒಳಗೊಂಡಂತೆ ಇತರೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷ ಆನಂದರಾವ್, ರೈತ ಮುಖಂಡ ಕೆ.ಎನ್. ವೆಂಕಟೇಶ್, ಪ್ರವೀಣ್ ಪವಾರ್, ಶ್ರೀನಿವಾಸ್, ನ್ಯೂ ಇಂಡಿಯಾ ಅಷ್ಯುರೆನ್ಸ್ ಕಂಪನಿ ವಿಭಾಗೀಯ ವ್ಯವಸ್ಥಾಪಕ ನಾಗರಾಜ್, ಅಭಿವೃದ್ಧಿ ಅಧಿಕಾರಿ ಆರ್.ಟಿ. ಮೃತ್ಯುಂಜಯ, ಎಂ.ಜಿ. ಶ್ರೀಕಾಂತ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.