ಶರಣ ಸಂಸ್ಕೃತಿ ಉತ್ಸವ-ಜನಜಾಗೃತಿ ಪಾದಯಾತ್ರೆ

Team Udayavani, Jan 16, 2019, 8:52 AM IST

dvg-2.jpg

ದಾವಣಗೆರೆ: ಸರ್ವರನ್ನು ಸಮಾನತೆಯಿಂದ ಕಾಣುವ ಮೂಲಕ ಎಲ್ಲರನ್ನು ಒಂದು ಮಾಡುವ ಶಕ್ತಿ ಶರಣ ಸಂಸ್ಕೃತಿಗಿದೆ ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.

ಜಯದೇವ ಜಗದ್ಗುರುಗಳ 62ನೇ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಮಂಗಳವಾರ ವಿನೋಬನಗರದ ಶಂಭುಲಿಂಗೇಶ್ವರ ದೇವಸ್ಥಾನದಿಂದ ವಿವಿಧೆಡೆ ಹಮ್ಮಿಕೊಂಡಿದ್ದ ಜನಜಾಗೃತಿ ಪಾದಯಾತ್ರೆ ನೇತೃತ್ವ ವಹಿಸಿ ಮಾತನಾಡಿದರು.

ಶರಣ ಸಂಸ್ಕೃತಿ ಬೇರೆ ಅಲ್ಲ. ಅದು ವಿಶ್ವ ಸಂಸ್ಕೃತಿಯಾಗಿದೆ. ಎಲ್ಲರನ್ನು ಒಂದು ಮಾಡುವ ಸಂಸ್ಕೃತಿ ಇದಾಗಿದೆ. ಈ ಸಂಸ್ಕೃತಿಯನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಂಡರೆ ಎಲ್ಲಾ ರೀತಿಯ ಸುಖ, ಶಾಂತಿ, ನೆಮ್ಮದಿ ದೊರಕುತ್ತದೆ ಎಂದರು.

ಬಸವಾದಿ ಶರಣರು ನೀಡಿರುವ ಕಾಯಕ, ದಾಸೋಹ, ಸಮಾನತೆ, ಶಿವಯೋಗ ತತ್ವಗಳು ಎಲ್ಲರ ಬದುಕಿಗೆ ಜಾಗತಿಕ ತತ್ವಗಳಾಗಿವೆ. ಅವರ ಆದರ್ಶಗಳು ಪ್ರತಿಯೊಬ್ಬರ ಬದುಕಿನ ಪ್ರೀತಿಯ ಸಂಕೇತ. ಮಾನವೀಯತೆಯ ಸಂಸ್ಕೃತಿ, ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ಸಂಸ್ಕೃತಿ ಇದಾಗಿದೆ ಎಂದು ಹೇಳಿದರು. ಮನುಷ್ಯ ಇಂದು ಎಷ್ಟೇ ಗಳಿಸಿದ್ದರೂ ಕೂಡ ಇನ್ನೂ ಬಯಕೆಗಳ ಬೆನ್ನೇರಿ ಹೊರಟಿದ್ದಾನೆ. ಹಾಗಾಗಿ ಮನಸಿನಲ್ಲಿ ಶಾಂತಿ, ನೆಮ್ಮದಿ ಎನ್ನುವುದು ಕಣ್ಮರೆಯಾಗಿದೆ. ಮನುಷ್ಯ ತನ್ನ ಬಯಕೆಗಳಿಗೆ ಬ್ರೇಕ್‌ ಹಾಕಿದಾಗ ಮಾತ್ರ ಉತ್ತಮ ಜೀವನ ನಡೆಸಲು ಸಾಧ್ಯ ಎಂದರಲ್ಲದೇ, ಮನುಷ್ಯನಿಗೆ ಅತ್ಯವಶ್ಯವಿರುವ ನೆಮ್ಮದಿಯ ಗುಟ್ಟನ್ನು ಚಿತ್ರದುರ್ಗ ಬೃಹನ್ಮಠದ ಶ್ರೀ ಡಾ| ಮುರುಘಾಶರಣರು ಜ.18ರಿಂದ 20ರವರೆಗೆ ಶಿವಯೋಗ್ರಾಮದಲ್ಲಿ ನಡೆಯುವ ಶ್ರೀ ಜಯದೇವ ಜಗದ್ಗುರುಗಳ 62ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ಸಹಜ ಶಿವಯೋಗದಲ್ಲಿ ತಿಳಿಸಲಿದ್ದಾರೆ ಎಂದರು.

ವಿನೋಬನಗರದ ಎ. ನಾಗರಾಜ್‌ ಅಭಿಮಾನಿಗಳ ಬಳಗದ ಸೋಮಶೇಖರ್‌, ಲಕ್ಷ್ಮಣ್‌, ಶಿವಾಜಿರಾವ್‌, ಕಾಳಿಂಗರಾಜು, ಯೋಗೀಶ್‌, ಯುವರಾಜ್‌, ಚನ್ನಬಸವ ಶೀಲವಂತ್‌, ಎಂ.ಎಸ್‌. ಪ್ರೇರಣಾ, ನಿಂಗಪ್ಪ, ಕೊಟ್ರೇಶ್‌ ಹಿರೇಮs್, ಮಂಜಣ್ಣ, ಶಿವರಾಜ್‌, ವಾಗೀಶ್‌, ಬೆಳವಾಗಿ ಚನ್ನಬಸಪ್ಪ, ಶರಣಪ್ಪ ಇತರರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಬಸವಕಲಾಲೋಕದ ಕಲಾವಿದರು ದಾರಿಯುದ್ದಕ್ಕೂ ವಚನ ಗಾಯನ ನಡೆಸಿಕೊಟ್ಟರು.

ಟಾಪ್ ನ್ಯೂಸ್

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

2-davangere

Davangere: ಮಹಿಳೆಯ ಮೇಲೆ ಕರಡಿ ದಾಳಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.