ದಸರಾ ನಿಮಿತ್ತ ದಾವಣಗೆರೆಯಲ್ಲಿ ಶೋಭಾಯಾತ್ರೆ
Team Udayavani, Oct 15, 2021, 3:21 PM IST
ದಾವಣಗೆರೆ: ನಾಡಹಬ್ಬ ದಸರಾ ಅಂಗವಾಗಿ ವಿಶ್ವ ಹಿಂದು ಪರಿಷದ್, ಸಾರ್ವಜನಿಕ ವಿಜಯದಶಮಿ ಮಹೋತ್ಸವ ಸಮಿತಿ ಆಶ್ರಯದಲ್ಲಿ ಬೇತೂರು ರಸ್ತೆಯ ವೆಂಕಟೇಶ್ವರ ವೃತ್ತದಿಂದ ಬೃಹತ್ ಶೋಭಾಯಾತ್ರೆ ಪ್ರಾರಂಭವಾಯಿತು.
ರಾಣೆಬೆನ್ನೂರು ತಾಲೂಕಿನ ತಪೋಕ್ಷೇತ್ರ ಪುಣ್ಯಕೋಟಿ ಮಠದ ಶ್ರೀ ಬಾಲಯೋಗಿ ಶ್ರೀ ಜಗದೀಶ್ವರ ಸ್ವಾಮೀಜಿ, ಹಿರೇಹಡಗಲಿಯ ಹಾಲಸ್ವಾಮಿಮಠದ ಶ್ರೀ ಅಭಿನವ ಹಾಲಶ್ರೀಗಳು, ದಾವಣಗೆರೆಯ ವಿನೋಬ ನಗರದ ಶ್ರೀ ಜಡೇಸಿದ್ದ ಶಿವಯೋಗೀಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿ, ಸಂಸದ ಡಾ.ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್, ಮೇಯರ್ ಎಸ್.ಟಿ. ವೀರೇಶ್, ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನೆ ಶಿವಕುಮಾರ್, ನಗರಪಾಲಿಕೆ ಸದಸ್ಯರಾದ ಕೆ.ಪ್ರಸನ್ನ ಕುಮಾರ್, ಆರ್.ಎಲ್.ಶಿವಪ್ರಕಾಶ್,ಸೋಗಿ ಶಾಂತಕುಮಾರ್, ಆರ್. ಶಿವಾನಂದ್, ಎಸ್. ಮಂಜುನಾಥ್, ಕೆ.ಎಂ. ವೀರೇಶ್, ಮಾಜಿ ಸದಸ್ಯ ಸಂಕೋಳ್ ಚಂದ್ರಶೇಖರ, ಬಿಜೆಪಿ ಜಿಲ್ಲಾ ಅಧ್ಯಕ್ಷ ವೀರೇಶ್ ಹನಗವಾಡಿ, ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್ ಇತರರು ಭಾಗವಹಿಸಿದ್ದರು.
ಮುಸ್ಲಿಂ ಸಮಾಜದ ಮುಖಂಡ ಜೆ. ಅಮಾನುಲ್ಲಾ ಖಾನ್ ಇತರರು ಶೋಭಾಯಾತ್ರೆ ಚಾಲನಾ ಸಂದರ್ಭದಲ್ಲಿ ಹಾಜರಿದ್ದರು. ಮುಸ್ಲಿಂ ಮುಖಂಡರು ನಾಡಹಬ್ಬ ದಸರಾ ಶುಭಾಶಯ ಕೋರುವ ಜೊತೆಗೆ ಸಿಹಿ ಹಂಚುವ ಮೂಲಕ ಭಾವೈಕ್ಯ ತೆಗೆ ಸಾಕ್ಷಿಯಾದರು. ಮುಸ್ಲಿಂ ಸಮಾಜದ ಮುಖಂಡರನ್ನು ಸನ್ಮಾನಿಸಲಾಯಿತು.
ವೆಂಕಟೇಶ್ವರ ವೃತ್ತದಿಂದ ಪ್ರಾರಂಭದ ಬೃಹತ್ ಶೋಭಾಯಾತ್ರೆ ಚೌಕಿಪೇಟೆ, ಹೊಂಡದ ವೃತ್ತ, ಅರುಣಾ ಚಿತ್ರಮಂದಿರ ವೃತ್ತದ ಮೂಲಕ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಮೈದಾನ ತಲುಪಲಿದೆ. ವಿಶೇಷವಾಗಿ ಸಮಾಳ, ನಂದಿಕೋಲು, ಡೊಳ್ಳು, ಗೊರವರ ಕುಣಿತ, ಕೊಂಬು, ಕಹಳೆ, ಡೊಳ್ಳು ಇತ್ಯಾದಿ ಸಾಂಪ್ರದಾಯಿಕ ವಾದ್ಯಗಳು, ಸ್ತಬ್ದಚಿತ್ರಗಳೊಂದಿಗೆ ಶೋಭಾಯಾತ್ರೆ ಸಾಗಿತು. ಕೊರೊನಾ ಮಾರ್ಗಸೂಚಿ ಅನ್ವಯ ಅಗತ್ಯ ಮುಂಜಾಗ್ರತಾ ಕ್ರಮ ಕಂಡು ಬರಲಿಲ್ಲ. ಯುವಕರು, ಕಿರಿಯರು, ಹಿರಿಯರಾದಿಯಾಗಿ ಹೆಜ್ಜೆ ಹಾಕುವ ಮೂಲಕ ಸಂಭ್ರಮಿಸಿದರು.
ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಹಿಂದೂ ಸಮಾಜದ ಹಿರಿಯ ಮುಖಂಡ ಕೆ.ಬಿ. ಶಂಕರನಾರಾಯಣ, ಸತೀಶ್ ಪೂಜಾರಿ, ಡಿ. ಬಸವರಾಜ್ ಗುಬ್ಬಿ, ಜೊಳ್ಳಿ ಗುರು ಇತರರು ನೃತ್ಯ ಮಾಡುವ ಮೂಲಕ ಗಮನ ಸೆಳದರು.
ಶೋಭಾಯಾತ್ರೆ ನೋಡಲು ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಜನರು ನೆರೆದಿದ್ದರು. ಶೋಭಾಯಾತ್ರೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.