ಅಸ್ಪೃಶ್ಯತೆ ಮೂಲೋಚ್ಛಾಟನೆಗೆ ಶ್ರೀರಾಮಸೇನೆ ಸಂಕಲ್ಪ

ಅಸಮಾನತೆ ಹೋಗಲಾಡಿಸುವಲ್ಲಿ ರಾಜಕೀಯ ಪಕ್ಷಗಳು ವಿಫಲ: ಪ್ರಮೋದ್‌ ಮುತಾಲಿಕ್‌

Team Udayavani, Mar 14, 2022, 3:46 PM IST

9

ದಾವಣಗೆರೆ: ದೇಶದಲ್ಲಿ ಬೇರೂರಿರುವಂತಹ ಅಸ್ಪೃಶ್ಯತೆಯ ಮೂಲೋಚ್ಛಾಟನೆಗೆ ಮಹಾ ಆಂದೋಲನ ನಡೆಸುವ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ತಿಳಿಸಿದರು.

ಡಾ| ಸದ್ಯೋಜಾತ ಹಿರೇಮಠದಲ್ಲಿ ಭಾನುವಾರ ಆಯೋಜಿಸಿದ್ದ ಹಿಂದೂವಾದಿ, ರಾಷ್ಟ್ರವಾದಿ ಹಿಂದುಳಿದವರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಭಾರತದಲ್ಲಿ ಮನೆ ಮಾಡಿರುವ ಅಸ್ಪೃಶ್ಯತೆ ವಿರುದ್ಧ ದೊಡ್ಡ ಆಂದೋಲನ ನಡೆಸಲು ಶ್ರೀರಾಮ ಸೇನೆ ಸಂಕಲ್ಪ ಮಾಡಿದೆ ಎಂದರು.

ಹಿಂದೂ ಧರ್ಮದಲ್ಲಿರುವ ಮೇಲು-ಕೀಳು ಎಂಬ ಲೋಪ ಸರಿಪಡಿಸಿ, ಅಸ್ಪೃಶ್ಯತೆ ಹೋಗಲಾಡಿಸಿ ದಲಿತ ಸಮುದಾಯ ಬಾಂಧವರನ್ನು ಜೊತೆಯಾಗಿ ಕರೆದುಕೊಂಡು ಹೋಗಲು ಸಮಾವೇಶ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಭಾರತದಲ್ಲಿ ಸಾವಿರಾರು ವರ್ಷಗಳ ಹಿಂದೆ ಅಸ್ಪೃಶ್ಯತೆ ಇರಲಿಲ್ಲ. ದೇಶವನ್ನಾಳಿದ ಬ್ರಿಟಿಷರು, ಇತರರು ಹಿಂದೂಗಳಲ್ಲಿರುವ ಸಮಾನತೆ, ಏಕತೆಯ ಹೊಡೆಯಲು ಅಸ್ಪೃಶ್ಯತೆಯನ್ನು ಹುಟ್ಟು ಹಾಕಿದರು. ಜಗತ್ತಿನ ಎಲ್ಲ ದೇಶಗಳಲ್ಲೂ ಬೇರೆ ಬೇರೆ ಸ್ವರೂಪದಲ್ಲಿ ಅಸ್ಪೃಶ್ಯತೆ ಇದೆ. ಅಮೆರಿಕದಲ್ಲಿ ಕರಿಯರು, ಬಿಳಿಯರು ಬೇಧ-ಭಾವ ಇದೆ. ಆದರೆ, ಹಿಂದೂಗಳಲ್ಲಿ ಮಾತ್ರವೇ ಅಸ್ಪೃಶ್ಯತೆ ಇದೆ ಎಂಬುವುದು ತಪ್ಪು ಕಲ್ಪನೆ ಎಂದು ತಿಳಿಸಿದರು.

ಬ್ರಿಟಿಷರು ಇತರರು ಹುಟ್ಟು ಹಾಕಿದ ಅಸ್ಪೃಶ್ಯತೆಯನ್ನು ಸ್ವಾತಂತ್ರ್ಯ ನಂತರ ದೇಶವನ್ನಾಳಿದ ಯಾವುದೇ ರಾಜಕಾರಣಿಗಳು ಹೋಗಲಾಡಿಸಲು ಪ್ರಯತ್ನ ಪಡಲೇ ಇಲ್ಲ. ಕೇವಲ ಮತಗಳಿಗಾಗಿಯೇ ದಲಿತರು, ಹಿಂದುಳಿದ ವರ್ಗದವರನ್ನು ಪ್ರತ್ಯೇಕವಾಗಿ ಇಡುವ ಪ್ರಯತ್ನ ಮಾಡುತ್ತಲೇ ಬಂದಿದ್ದಾರೆ. ಅಸಮಾನತೆ ಹೋಗಲಾಡಿಸುವ ನಿಟ್ಟಿನಲ್ಲಿ ಎಲ್ಲ ರಾಜಕೀಯ ಪಕ್ಷಗಳು, ಹೋರಾಟಗಾರರು ವಿಫಲರಾಗಿದ್ದಾರೆ. ಹಾಗಾಗಿಯೇ ಇವತ್ತಿಗೂ ಅಸ್ಪೃಶ್ಯತೆ ಜೀವಂತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇಂದಿನ ಆಧುನಿಕ, ತಂತ್ರಜ್ಞಾನ ಯುಗದಲ್ಲೂ ನಗರ ಪ್ರದೇಶಗಳಲ್ಲಿ ದಲಿತರಿಗೆ, ಹಿಂದುಳಿದವರಿಗೆ ಬಾಡಿಗೆ ಮನೆ ಸಹ ಕೊಡುವುದಿಲ್ಲ. ಅಂಬೇಡ್ಕರ್‌ ಅವರೇ ಅಸ್ಪೃಶ್ಯತೆಯ ಕೌರ್ಯವನ್ನು ಅನುಭವಿಸಿದ್ದಾರೆ ನಾವೆಲ್ಲರೂ ಅಂಬೇಡ್ಕರ್‌ ಸ್ಥಾನದಲ್ಲಿ ನಿಂತು ಅಸ್ಪೃಶ್ಯತೆ ನೋಡಬೇಕು ಎಂದು ತಿಳಿಸಿದರು. ಒಂದು ವರ್ಗದವರು ಅಸ್ಪೃಶ್ಯತೆಯನ್ನ ದಾಳವನ್ನಾಗಿ ಬಳಕೆ ಮಾಡುತ್ತಿದ್ದಾರೆ. ಆ ವರ್ಗದ ಜನರನ್ನು ಮೇಲೇತ್ತುವ ಪ್ರಯತ್ನ ಮಾಡುತ್ತಿಲ್ಲ. ಹಾಗಾಗಿ ಶ್ರೀರಾಮ ಸೇನೆ ಅಸ್ಪೃಶ್ಯರನ್ನು ಜೊತೆಗೆ ಕೊಂಡೊಯ್ಯುವ ಸಂಕಲ್ಪ ಮಾಡಿದೆ ಎಂದು ತಿಳಿಸಿದರು.

ಒಂದು ಮನೆಯಲ್ಲಿರುವ ನಾಲ್ಕೈದು ಮಕ್ಕಳಲ್ಲಿ ಒಬ್ಬ ದುರ್ಬಲನಾಗಿದ್ದರೆ ತಾಯಿ ದುರ್ಬಲ ಇರುವ ಮಗುವಿನ ಮೇಲೆ ಹೆಚ್ಚು ಅಕ್ಕರೆ ತೋರಿಸುತ್ತಾಳೆ. ಅವರನ್ನು ಪ್ರತ್ಯೇಕವಾಗಿ ಇಡುವುದು ಸರಿಯಲ್ಲ. ನಾವೆಲ್ಲರೂ ಭಾರತಾಂಬೆಯ ಮಕ್ಕಳು. ಎಲ್ಲರೂ ಒಂದಾಗಿ ಸಾಗುವಂತಾಗಬೇಕು ಎಂದು ತಿಳಿಸಿದರು.

ಶ್ರೀರಾಮ ಸೇನೆ ರಾಜ್ಯ ಅಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಗೌರವ ಅಧ್ಯಕ್ಷ ಕಾಳಿಮಠದ ಶ್ರೀ ಋಷಿಕುಮಾರ ಸ್ವಾಮೀಜಿ, ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಸಂಘಟನಾ ಕಾರ್ಯದರ್ಶಿ ಆನಂದ್‌ ಅಡ್ಡಿಯಾರ್‌, ಪ್ರಮೋದ್‌, ಮಾಧ್ಯಮ ಪ್ರಮುಖ್‌ ಪರಶುರಾಮ್‌ ನಡುಮನಿ, ಜಿಲ್ಲಾಧ್ಯಕ್ಷ ಮಣಿ ಸರ್ಕಾರ್‌ ಇತರರು ಇದ್ದರು.

ಟಾಪ್ ನ್ಯೂಸ್

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.