ಸಿರಿಗೆರೆ ಗ್ರಾಪಂ ವ್ಯಾಪ್ತಿಯ ಹಳ್ಳಿಗಳು ಲಾಕ್‌ಡೌನ್
Team Udayavani, May 22, 2021, 10:00 AM IST
ಸಿರಿಗೆರೆ: ಗ್ರಾಪಂಗೆ ಸೇರುವ ಜಮ್ಮೇನಹಳ್ಳಿ, ಸಿದ್ದಾಪುರ, ಹಳೇರಂಗಾಪುರ, ಸೀಗೇಹಳ್ಳಿ, ಹೊಸ ರಂಗಾಪುರ ಗ್ರಾಮಗಳಲ್ಲಿ ವಾರದ ಐದು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಮಾಡುವಂತಹ ಕಠಿಣ ಕ್ರಮವನ್ನು ಸಿರಿಗೆರೆ ಗ್ರಾಪಂ ಆಡಳಿತ ವರ್ಗಕೈಗೊಂಡಿದೆ. ಈ ಕುರಿತು ನಡೆದ ತುರ್ತು ಸಭೆಯಲ್ಲಿಸುತ್ತಲಿನ ಹಳ್ಳಿಗಳಲ್ಲಿ ಕೊರೊನಾ ಸೋಂಕುವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿದ್ದು, ಗ್ರಾಮಸ್ಥರು ಲಾಕ್‌ಡೌನ್ ನಿಬಂಧನೆ ಪಾಲಿಸಬೇಕೆಂದು ಕೋರಲಾಗಿದೆ.
ಸ್ಥಳೀಯ ಸರ್ಕಾರಿ ಆರೋಗ್ಯ ಕೇಂದ್ರದ ವೈದ್ಯಾ ಧಿಕಾರಿ ಡಾ.ರೂಪಾ, ಗ್ರಾಪಂ ಅಧ್ಯಕ್ಷ ಕೆ.ಬಿ. ಮೋಹನ್, ಸದಸ್ಯರಾದ ಸಿದ್ದೇಶ್, ನಾಗರಾಜ್, ನಿರ್ಮಲ, ವೀರಣ್ಣ, ಕಂದಾಯ ಇಲಾಖೆಯ ರಮೇಶ್, ಪೊಲೀಸ್ ಇಲಾಖೆಯಮಲ್ಲಿಕಾರ್ಜುನ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದ ಸಭೆಯಲ್ಲಿ ಈ ತೀರ್ಮಾನ ಪ್ರಕಟಿಸಲಾಯಿತು.
ಸೋಮವಾರ ಮತ್ತು ಮಂಗಳವಾರ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದಿರುತ್ತವೆ. ಸರ್ಕಾರಿ ಕಚೇರಿಗಳು, ಆಸ್ಪತ್ರೆ ಹಾಗೂ ಮೆಡಿಕಲ್ ಶಾಪ್‌ಗಳು ಎಂದಿನಂತೆ ಕೆಲಸ ನಿರ್ವಹಿಸಲಿವೆ. ಹೋಟೆಲ್‌ಗಳ ಪಾರ್ಸಲ್ ಸೇವೆ ಈ ಎರಡು ದಿನ ಇರುತ್ತದೆ. ಉಳಿದಂತೆ ಬುಧವಾರದಿಂದ ಭಾನುವಾರದ ತನಕ ಯಾವುದೇ ಅಂಗಡಿಗಳು ತೆರೆಯಲು ಅವಕಾಶವಿರುವುದಿಲ್ಲ ಎಂದು ಪಿಡಿಒ ಲೋಕೇಶ್ ತಿಳಿಸಿದರು.
ಹಳ್ಳಿಗಳಲ್ಲಿ ಕಾರ್ಯಪಡೆ ರಚನೆ: ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಕೊರೊನಾ ನಿಬಂಧನೆಗಳನ್ನುಕಟ್ಟುನಿಟ್ಟಾಗಿ ಜಾರಿಗೆ ತರಲು ಹಾಗೂ ಜನರಿಗೆ ಸೂಕ್ತ ಮಾರ್ಗದರ್ಶನ ಮಾಡಲು ಅನುಕೂಲವಾಗುವಂತೆ ಗ್ರಾಮಮಟ್ಟದ ಕಾರ್ಯಪಡೆ ರಚಿಸಲಾಗಿದೆ.
ಸಿರಿಗೆರೆಯಲ್ಲಿ ಕೋವಿಡ್ ಆಸ್ಪತ್ರೆ: ಸಿರಿಗೆರೆ 10 ಬೆಡ್‌ಗಳ ಕೋವಿಡ್ ಆಸ್ಪತ್ರೆ ಆರಂಭಿಸುವ ಕೆಲಸ ನಡೆಯುತ್ತಿದ್ದು, ಅದು ಮಂಗಳವಾರದ ಹೊತ್ತಿಗೆ ಕೆಲಸ ಆರಂಭಿಸಲಿದೆ. ಆಸ್ಪತ್ರೆಯಲ್ಲಿ ಸೋಂಕಿತರ ಅನುಕೂಲಕ್ಕೆ ಆಕ್ಸಿಜನ್ ವ್ಯವಸ್ಥೆಯೂ ಇರುತ್ತದೆ. ರೋಗಿಗಳಿಗೆ ಅಗತ್ಯವಾದ ಬಿಸಿನೀರಿನ ಸೌಲಭ್ಯಕ್ಕೆ ಬಾಯಲರ್ ಒದಗಿಸಲು ಕೋರಲಾಗಿದೆ.
ಸಿರಿಗೆರೆ ಭಾಗದಲ್ಲಿ ಹಲವು ಸೋಂಕಿತರ ವರದಿಗಳು ಬರುತ್ತಿವೆ. ಅವರು ಜಾಗ್ರತೆ ವಹಿಸಿ ಕೋವಿಡ್ ಕೇರ್ ಕೇಂದ್ರಗಳಲ್ಲಿ ಆರೈಕೆ ಪಡೆದುಕೊಳ್ಳಬೇಕು. ಮನೆಯಲ್ಲಿಯೇ ಸೌಲಭ್ಯ ಇದ್ದಲ್ಲಿ ವೈದ್ಯರ ಮಾರ್ಗದರ್ಶನ ಪಡೆದುಕೊಂಡು ಐಸೋಲೇಟ್ ಆಗಬಹುದು. ಸೋಂಕಿತರು ಬಿಸಿನೀರು ಕುಡಿಯುವುದಲ್ಲದೆ ಶುದ್ಧ ಆಹಾರ ಸೇವಿಸಬೇಕು. ಮಾಸ್ಕ್ ಕಡ್ಡಾಯವಾಗಿ ಧರಿಸಲೇಬೇಕು ಎಂದು ಪಿಡಿಒ ಲೋಕೇಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.