ಮೃದು ಧೋರಣೆಯಿಂದ ಕನ್ನಡ ಭಾಷೆಗೆ ಧಕ್ಕೆ


Team Udayavani, Feb 24, 2017, 12:44 PM IST

dvg7.jpg

ಹೊನ್ನಾಳಿ: ದತ್ತಿ ಉಪನ್ಯಾಸಗಳ ಮೂಲಕ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕನ್ನಡ ಸಾಹಿತ್ಯದ ಬಗ್ಗೆ ಒಲವು ಮೂಡಿಸುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಕತ್ತಿಗೆ ಗಂಗಾಧರಪ್ಪ ಹೇಳಿದರು. 

ತಾಲೂಕಿನ ಕತ್ತಿಗೆ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಂಡ ತಗ್ಗಿಹಳ್ಳಿ ನಾಗಮ್ಮ ಅಂಗಡಿ ಕೆಂಚಪ್ಪ, ಎಚ್‌.ಪಿ. ಪ್ರಭಾವತಿ ಹಾಗೂ ಬೋರ್‌ಪಾಯಿಂಟ್‌ ಬೀರಪ್ಪ ಸರೋಜಮ್ಮ ದತ್ತಿ ಉಪನ್ಯಾಸ ಮತ್ತು 2016-17ನೇ ಸಾಲಿನ ದತ್ತಿ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಕನ್ನಡ ನಾಡು-ನುಡಿಯ ಮೇಲೆ ಅನಾದಿ ಕಾಲದಿಂದಲೂ ಆಕ್ರಮಣ ನಡೆಯುತ್ತಿದೆ. ನಾಡಿನ ವಿವಿಧ ಪ್ರಾಂತ್ಯಗಳಲ್ಲಿ ಕನ್ನಡ ಭಾಷೆಗೆ ಆತಂಕ ಎದುರಾಗಿದೆ. ಕನ್ನಡಿಗರ ಮೃದು ಧೋರಣೆಯಿಂದ ಕನ್ನಡ ಭಾಷೆಗೆ ಧಕ್ಕೆ ಉಂಟಾಗಿದೆ. ಇದನ್ನು ಸಮರ್ಥವಾಗಿ ಎದುರಿಸಬೇಕು ಎಂದು ತಿಳಿಸಿದರು. 

ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ. ತೀರ್ಥಲಿಂಗಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡ ಭಾಷೆಗೆ ಹಿಂದೆಂದಿಗಿಂತ ಇಂದು ಹೆಚ್ಚಿನ ಆತಂಕ ಎದುರಾಗಿದೆ. ಇದನ್ನು ಎದುರಿಸಲು ನಾವೆಲ್ಲರೂ ಸಿದ್ಧರಾಗಬೇಕು ಎಂದು ತಿಳಿಸಿದರು.  

ಕರ್ನಾಟಕದಲ್ಲಿ ಕುರುಬರ ಇತಿಹಾಸ ಎಂಬ ವಿಷಯದ ಬಗ್ಗೆ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಎಂ.ಎಸ್‌. ರೇವಣಪ್ಪ ಮತ್ತು ಕನಕದಾಸರು ಮತ್ತು ಅವರ ಸಾಹಿತ್ಯ-ಸಂದೇಶ ಎಂಬ ವಿಷಯದ ಬಗ್ಗೆ ಸಾಹಿತಿ ರಾಮಗಿರಿ ಎಸ್‌. ಕರಿಸಿದಪ್ಪ ಕುಂಬಾರ್‌ ಉಪನ್ಯಾಸ ನೀಡಿದರು. ಕತ್ತಿಗೆ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜೆ. ಹುಚ್ಚಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕತ್ತಿಗೆ ಗ್ರಾಮದ ಬಿ. ರುದ್ರಮ್ಮ ಮತ್ತು ಬಿ. ಜಯಮ್ಮ ಸೋಬಾನೆ ಪದ ಹಾಡಿದರು.

ಎಸ್‌ಡಿಎಂಸಿ ಅಧ್ಯಕ್ಷ ಕೆ.ಪಿ. ಗಂಗನಗೌಡ, ಕಸಾಪ ಉಪಾಧ್ಯಕ್ಷ ಜಿ. ಶಂಕರಪ್ಪ, ಕಾರ್ಯದರ್ಶಿ ಕೆ. ಶೇಖರಪ್ಪ, ಚುಟುಕು ಸಾಹಿತಿ ಮತ್ತು ಕಸಾಪ ಗೌರವ ಸದಸ್ಯ ಬಿ. ತಿಮ್ಮನಗೌಡ, ಮುಖಂಡರಾದ ಜಿ. ಮಹೇಶ್ವರಪ್ಪ, ಎಸ್‌. ನಾಗರಾಜ್‌, ಶಿಕ್ಷಕರಾದ ಕೆ.ಎಸ್‌. ಪರಮೇಶ್ವರಪ್ಪ, ಪ್ರೇಮಾಬಾಯಿ, ರಾಜಶೇಖರ್‌, ಮಲ್ಲಪ್ಪ, ಬಸವರಾಜ್‌ ಮತ್ತಿತರರು ಉಪಸ್ಥಿತರಿದ್ದರು.  

ಟಾಪ್ ನ್ಯೂಸ್

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.