ಮಣ್ಣು ಫಲವತ್ತತೆ ಹೆಚ್ಚಿಸಿ-ಬರಗಾಲ ಮೆಟ್ಟಿ ನಿಲ್ಲಿ
Team Udayavani, Mar 14, 2019, 10:35 AM IST
ದಾವಣಗೆರೆ: ಅಡಕೆ ತೋಟದಲ್ಲಿನ ಮಣ್ಣಿನ ಫಲವತ್ತತೆ ಹೆಚ್ಚಿಸಿಕೊಳ್ಳುವ ಮೂಲಕ ಬರಗಾಲವನ್ನು ಸಮರ್ಥವಾಗಿ ಮೆಟ್ಟಿ ನಿಲ್ಲಬಹುದು ಎಂದು ಸಾವಯವ ಕೃಷಿ ತಜ್ಞ ಡಾ| ಕೆ.ಆರ್. ಹುಲ್ಲುನಾಚೇಗೌಡ ತಿಳಿಸಿದ್ದಾರೆ.
ದಾವಣಗೆರೆಯ ಸಾವಯವ ಕೃಷಿ ಮತ್ತು ತರಬೇತಿ ಕೇಂದ್ರ, ಬೆಂಗಳೂರಿನ ಕೃಷಿ ಅಭಿಯಾನ ಟ್ರಸ್ಟ್ ಸಹಯೋಗದಲ್ಲಿ ಕಕ್ಕರಗೊಳ್ಳ, ಅವರಗೊಳ್ಳ, ಮಳ್ಳೆಕಟ್ಟೆ, ಅಣಜಿ, ಕರೇಕಟ್ಟೆ, ಕಂಚುಗಾರನಹಳ್ಳಿ, ದಾಗಿನಕಟ್ಟೆ, ರಾಮತೀರ್ಥ ಗ್ರಾಮಗಳ ರೈತರ ಅಡಕೆ, ತೆಂಗು ಹಾಗು ಎಲೆಬಳ್ಳಿ ತೋಟಗಳಲ್ಲಿ ಪ್ರಾತ್ಯಕ್ಷಿಕೆ, ಮಾಹಿತಿ ನೀಡಿದ ಅವರು, ಅಡಕೆ ತೋಟದಲ್ಲಿ ಕನಿಷ್ಟ 200 ರಿಂದ 250 ಗ್ಲಿರಿಸಿಡಿಯಾ (ಗೊಬ್ಬರದ ಗಿಡ) ಬೆಳೆಸುವುದರಿಂದ ಸಾರಜನಕವನ್ನು ಸ್ಥಿರೀಕರಣ ಮಾಡಿಕೊಳ್ಳುವ ಸಾಮರ್ಥ್ಯ ಅಡಕೆ ಗಿಡಗಳಿಗೆ ಬರುತ್ತದೆ ಹಾಗೂ ಕಡಿಮೆ ನೀರನ್ನು ಬಳಸಿ ಯಾವುದೇ ರೋಗಗಳು ಬರದಂತೆ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.
ಅಡಕೆ ಗರಿಗಳಿಂದ ಬುಡದಲ್ಲಿ ಮುಚ್ಚುಗೆ ಮಾಡುವುದರಿಂದ ಮಣ್ಣಿನಲ್ಲಿರುವ ತ್ಯಾಜ್ಯಗಳು ಹ್ಯೂಮಸ್ ಆಗಿ ಪರಿವರ್ತನೆಗೊಂಡು ಬೆಳೆಗೆ ಬೇಕಾಗುವ ಎಲ್ಲಾ ಪೋಷಕಾಂಶಗಳನ್ನು ಒದಗಿಸುವುದರೊಂದಿಗೆ ಸಾವಯವ ಇಂಗಾಲವನ್ನು ಹೆಚ್ಚಿಸುತ್ತದೆ. ಸೂಕ್ಷ್ಮಾಣು ಜೀವಿಗಳು ಮಣ್ಣಿನಲ್ಲಿ ಪುನರುಜ್ಜಿವನಗೊಂಡು ಜೈವಿಕ ಪರಿಸರ ನಿರ್ಮಾಣವಾಗುವುದರಿಂದ ಮಣ್ಣಿಗೆ ರೋಗ ನಿರೋಧಕ ಶಕ್ತಿ ಜಾಸ್ತಿಯಾಗಿ ಮಣ್ಣಿನಲ್ಲಿ ಎರೆಹುಳುಗಳು ನೈಸರ್ಗಿಕವಾಗಿ ಉತ್ಪತ್ತಿಯಾಗುತ್ತವೆ ಮತ್ತು ಮಣ್ಣು ಫಲವತ್ತತೆಯೊಂದಿಗೆ ನೀರನ್ನು ಹಿಡಿದಿಟ್ಟುಕೊಳ್ಳಲು ಸಹಾಯಕವಾಗುತ್ತವೆ.
1ಕೆ.ಜಿ. ಹ್ಯೂಮಸ್ ಮಣ್ಣಿನಲ್ಲಿದ್ದರೆ ದಿನಕ್ಕೆ ಕನಿಷ್ಟ 6 ಲೀಟರ್ ನೀರನ್ನು ಭೂಮಿಯ ಆಳದಿಂದಾಗಲಿ ಅಥವಾ ವಾತಾವರಣದಲ್ಲಿರುವ ತೇವಾಂಶದಿಂದ ಶೇಖರಿಸಿಟ್ಟುಕೊಳ್ಳುತ್ತದೆ. ಅಡಕೆ ಉಷ್ಣ ವಲಯದ ಬೆಳೆಯಾಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ನೀರುಣಿಸಬಾರದು ಎಂದು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಕೃಷಿ ಅಭಿಯಾನ ಟ್ರಸ್ಟ್‌ನ ದಿದ್ದಿಗೆ ಮಹಾದೇವಪ್ಪ, ವಿಶ್ವನಾಥ್ ಕಕ್ಕರಗೊಳ್ಳ, ಬೆಂಗಳೂರಿನ ಚರಣ್ ನಾಯ್ಡು, ಮಣಿಕಂಠ, ಅಂಜನ್‌ಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.