ಕೆಲವೊಮ್ಮೆ ನಿರೀಕ್ಷೆ ತಪ್ಪಾಗುತ್ತೆ, ಎಲ್ಲದೈವಿಚ್ಛೆ: ಬಿಎಸ್‌ವೈ
Team Udayavani, May 22, 2018, 3:36 PM IST
ದಾವಣಗೆರೆ: ಚುನಾವಣೆಯಲ್ಲಿ ಕೆಲವೊಮ್ಮೆ ನಿರೀಕ್ಷೆಗಳು ತಪ್ಪಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನುಡಿದರು.
ವಿಶ್ವಾಸ ಮತಯಾಚನೆಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ್ದರಿಂದ ತೀವ್ರ ಮನನೊಂದು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದ ಎಚ್. ಚನ್ನಬಸಪ್ಪ ಎಂಬುವವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲು ಸೋಮವಾರ ಆಗಮಿಸಿದ್ದ ಸಂದರ್ಭದಲ್ಲಿ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಬಿಜೆಪಿಯ ಮಿಷನ್ 150+ ವಿಫಲಕ್ಕೆ ಕಾರಣದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ 118 ಸ್ಥಾನದವರೆಗೆ ಬಂದು ಕೊನೆಗೆ 104 ಸ್ಥಾನ ಲಭಿಸಿದವು. ಬಹುಮತಕ್ಕೆ 8 ಸ್ಥಾನ ಕಡಿಮೆ ಹೊಂದಿದ್ದೇವೆ. ನಾವು 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಡಿಮೆ ಅಂತರದಲ್ಲಿ ಸೋತಿದ್ದೇವೆ. 15ಕ್ಕೂ ಹೆಚ್ಚು ಕಡೆ ಅತಿ ಕಡಿಮೆ ಅಂತರದಲ್ಲಿ ಸೋತಿದ್ದೇವೆ.
ಚುನಾವಣೆಯಲ್ಲಿ ಇದೆಲ್ಲ ಸಾಮಾನ್ಯ. ನಿರೀಕ್ಷೆ ತಪ್ಪಾಗುತ್ತೆ. ನಮಗೆ 135 ಸ್ಥಾನ ಬರಬಹುದು ಎಂಬ ನಿರೀಕ್ಷೆ ಇತ್ತು. 118ಕ್ಕೆ ಹತ್ತಿರ ಹತ್ತಿರ ಬಂದಿದ್ದೆವು. ಯಾಕೋ ಆಗಲಿಲ್ಲ. ಎಲ್ಲವೂ ದೈವಿಚ್ಛೆ ಎಂದರು. ಸಮ್ಮಿಶ್ರ ಸರ್ಕಾರದ ಪ್ರಾರಂಭದಲ್ಲೇ ಮಂತ್ರಿ ಸ್ಥಾನಕ್ಕೆ ಕಿತ್ತಾಟ ಪ್ರಾರಂಭವಾಗಿದೆಯೆಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ಈಗಲೇ ಟೀಕೆ-ಟಿಪ್ಪಣಿ ಮಾಡುವುದಿಲ್ಲ ಎಂದಷ್ಟೆ ಪ್ರತಿಕ್ರಿಯಿಸಿದರು. ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕರಾದ ಕೆ. ಮಾಡಾಳ್ ವಿರುಪಾಕ್ಷಪ್ಪ, ಮುರುಗೇಶ್ ನಿರಾಣಿ, ಪ್ರೊ| ಎನ್. ಲಿಂಗಣ್ಣ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.