ಕೈ ಟಿಕೆಟ್‌ಗೆ ಅರ್ಜಿ ಸಲ್ಲಿಸದ ಶಾಮನೂರು ಪುತ್ರ!

ನಿರೀಕ್ಷೆಗೂ ಮೀರಿ ಕಾರ್ಯಕ್ರಮ ಯಶಸ್ವಿಯಾದ ಮೇಲೆ ರಾಜಕೀಯ ಚಟುವಟಿಕೆಯಲ್ಲಿ ಮತ್ತೆ ತೊಡಗಿಸಿಕೊಂಡಿದ್ದರು.

Team Udayavani, Nov 23, 2022, 6:25 PM IST

ಕೈ ಟಿಕೆಟ್‌ಗೆ ಅರ್ಜಿ ಸಲ್ಲಿಸದ ಶಾಮನೂರು ಪುತ್ರ!

ದಾವಣಗೆರೆ: ಮುಂಬರುವ ಚುನಾವಣೆಯ ಕಾಂಗ್ರೆಸ್‌ ಸ್ಪರ್ಧಾಕಾಂಕ್ಷಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಅರ್ಜಿಯನ್ನೇ ಸಲ್ಲಿಸಿಲ್ಲ ಎಂಬ ಅಂಶ ಬೆಳಕಿಗೆ ಬಂದಿದ್ದು, ಮಧ್ಯಕರ್ನಾಟಕದ ರಾಜಕೀಯ ಪಡಸಾಲೆಯಲ್ಲಿ ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆದಿಯಾಗಿ ಬಹುತೇಕ ಎಲ್ಲಾ ಕಾಂಗ್ರೆಸ್‌ ಮುಖಂಡರೂ ಚುನಾವಣೆಯಲ್ಲಿ ಸ್ಪರ್ಧಿಸಲು “ಕೈ’ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಹುರಿಯಾಳಾಗುತ್ತಿದ್ದ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅರ್ಜಿಯನ್ನೇ ಸಲ್ಲಿಸಿಲ್ಲ. ಮಾಜಿ ಸಚಿವರ ನಿಗೂಢ ನಡೆ ಏನು ಎಂಬ ಪ್ರಶ್ನೆ ಕುತೂಹಲ ಮೂಡಿದೆ.

ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯ ಎಲ್ಲಾ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ರಣೋತ್ಸಾಹದಲ್ಲಿರುವ ಕಾಂಗ್ರೆಸ್‌ಗೆ, ಚುನಾವಣೆಯಲ್ಲಿ ಪಕ್ಷ ಮುನ್ನಡೆಸಬೇಕಾದ ನಾಯಕ ಟಿಕೆಟ್‌ಗೆ ಅರ್ಜಿ ಸಲ್ಲಿಸದೆ ಇರುವುದು ಚುನಾವಣೆಗೂ ಮುನ್ನವೇ ಆತಂಕ ಮೂಡಿಸಿದೆ.

ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಕಣಕ್ಕಿಳಿದು ಬಿಜೆಪಿಗೆ ದಾವಣಗೆರೆ ಉತ್ತರದಲ್ಲಿ ಮಾತ್ರವಲ್ಲ, ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಸೋಲಿನ ರುಚಿ ತೋರಿಸುತ್ತಾರೆ ಎಂಬ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್‌ಗೆ ಮಲ್ಲಿಕಾರ್ಜುನ್‌ ಟಿಕೆಟ್‌ ಕೋರಿ ಅರ್ಜಿ ಸಲ್ಲಿಸದೆ ಇರುವುದು ನುಂಗಲಾರದ ತುತ್ತಾಗಿದೆ. ದಾವಣಗೆರೆ ಜಿಲ್ಲಾ ಕಾಂಗ್ರೆಸ್‌ನ ಹೈಕಮಾಂಡ್‌ ಆಗಿರುವ ಶಾಸಕ ಡಾ|ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್‌ ಉಪಸ್ಥಿತಿಯೇ ಮುಖಂಡರು, ಕಾರ್ಯಕರ್ತರಿಗೆ ಭೀಮಬಲ. ಆದರೆ ಮಲ್ಲಿಕಾರ್ಜುನ್‌ ಅರ್ಜಿ ಸಲ್ಲಿಸದಿರುವುದು ಕಾಂಗ್ರೆಸ್‌ನಲ್ಲಿ ಕಸಿವಿಸಿಗೆ ಕಾರಣವಾಗಿದೆ.

ಇದು ಬಿಜೆಪಿ ಒಳಗೊಂಡಂತೆ ವಿಪಕ್ಷಗಳಿಗೆ ಚುನಾವಣೆಗೆ ಮುನ್ನವೇ ಪ್ರಬಲ ಅಸ್ತ್ರ ದೊರೆತಂತಾಗಿದೆ. ಟಿಕೆಟ್‌ ಕೋರಿ ಅರ್ಜಿ ಸಲ್ಲಿಸದ ವಿಚಾರವನ್ನೇ ಮುಂದಿಟ್ಟು ವಿಪಕ್ಷಗಳು ಅಪಪ್ರಚಾರ ಮಾಡುವ ಆತಂಕ ಎದುರಾಗಿದೆ.

ಸತತ ಸೋಲಿನಿಂದ ಬೇಸರ?: ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಸೋಲಿನ ಕಹಿ ಉಂಡಿರುವ ಮಲ್ಲಿಕಾರ್ಜುನ್‌, 2018ರ ವಿಧಾನಸಭಾ ಚುನಾವಣೆಯಲ್ಲೂ ಸೋಲು ಕಾಣುವಂತಾಗಿದ್ದು ಸ್ವತಃ ಅವರಿಗೆ ಅರಗಿಸಿಕೊಳ್ಳಲಾರದ ಆಘಾತಕ್ಕೆ ಕಾರಣವಾಗಿತ್ತು. ವಿಧಾನಸಭಾ ಚುನಾವಣೆಯ ಅನಿರೀಕ್ಷಿತ ಸೋಲಿನ ನಂತರ ಪಕ್ಷದ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ದಾವಣಗೆರೆಯಲ್ಲೇ ನಡೆದ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಕ್ರಿಯರಾಗಿದ್ದರು. ನಿರೀಕ್ಷೆಗೂ ಮೀರಿ ಕಾರ್ಯಕ್ರಮ ಯಶಸ್ವಿಯಾದ ಮೇಲೆ ರಾಜಕೀಯ ಚಟುವಟಿಕೆಯಲ್ಲಿ ಮತ್ತೆ ತೊಡಗಿಸಿಕೊಂಡಿದ್ದರು.

ಸೆ.22ರಂದು ಅಭಿಮಾನಿಗಳ ಬಳಗ ಆಯೋಜಿಸಿದ್ದ ತಮ್ಮ 55ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅತ್ಯಂತ ಉತ್ಸಾಹದಿಂದಲೇ ಭಾಗವಹಿಸಿದ್ದರು. ಆದರೆ ಈಗ ಟಿಕೆಟ್‌ಗೆ ಅರ್ಜಿ ಸಲ್ಲಿಸದೇ ಇರುವ ಅವರ ರಾಜಕೀಯ ಲೆಕ್ಕಾಚಾರವೇ ನಿಗೂಢವಾಗಿದೆ. ಕೈ ತಪ್ಪಿ ಹೋಗಿದ್ದ ಜಿಲ್ಲೆಯನ್ನು ಮತ್ತೆ ಹಿಡಿತಕ್ಕೆ ಪಡೆಯುವ ಇರಾದೆಯಲ್ಲಿರುವ ಕಾಂಗ್ರೆಸ್‌ ನಾಯಕರಿಗೆ ಮಾಜಿ ಸಚಿವರ ನಿರ್ಧಾರ ಬೇಸರ ಮೂಡಿಸಿದೆ. ಚುನಾವಣೆ ಹೊಸ್ತಿಲಲ್ಲಿ ಮಲ್ಲಿಕಾರ್ಜುನ್‌ ಅವರ ಧೋರಣೆ ಪಕ್ಷಕ್ಕೆ ಸದ್ಯದ ಮಟ್ಟಿಗೆ ಶುಭಸೂಚಕವಂತೂ ಅಲ್ಲ.

ಕೈ ತಪ್ಪಿ ಹೋಗಿತ್ತು ಟಿಕೆಟ್‌
2008ರಲ್ಲಿ ನಡೆದ ಕ್ಷೇತ್ರ ಮರು ವಿಂಗಡಣೆ ನಂತರ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಮೊದಲ ಚುನಾವಣೆಯಲ್ಲೇ ಮಲ್ಲಿಕಾರ್ಜುನ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ತಪ್ಪಿತ್ತು. ಟಿಕೆಟ್‌ ದೊರೆಯುವ ನಿರೀಕ್ಷೆಯೊಂದಿಗೆ ಮಲ್ಲಿಕಾರ್ಜುನ್‌ ಪ್ರಚಾರವನ್ನೂ ಕೈಗೊಂಡಿದ್ದರು. ಆದರೆ ಕಡೆ ಘಳಿಗೆಯಲ್ಲಿ ಬೇರೆಯವರ ಹೆಸರಲ್ಲಿ ಬಿ ಫಾರ್ಮ್ ಬಂದಿತ್ತು. ಹರಸಾಹಸ ಮಾಡಿ ನಾಮಪತ್ರ ಸಲ್ಲಿಸಿದ್ದರೂ ತಾಂತ್ರಿಕ ಕಾರಣದಿಂದ ಮಲ್ಲಿಕಾರ್ಜುನ್‌ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು.

ಮುಂದಿನ ನಡೆ ಏನು?
ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅರ್ಜಿ ಸಲ್ಲಿಸಿದರೆ ಮಾತ್ರ ಟಿಕೆಟ್‌ ಎಂಬ ಪರಿಸ್ಥಿತಿ ಏನಿಲ್ಲ. ಆದರೂ ಏಕೆ ಅರ್ಜಿ ಸಲ್ಲಿಸಲಿಲ್ಲ ಎಂಬ ಪ್ರಶ್ನೆ ಎಲ್ಲರನ್ನೂ ಕಾಡಲಾರಂಭಿಸಿದೆ. ಮಲ್ಲಿಕಾರ್ಜುನ್‌ ಅರ್ಜಿ ಸಲ್ಲಿಸದೆ ಇರುವುದಕ್ಕೆ ಕಳೆದ ಚುನಾವಣಾ ಫಲಿತಾಂಶದ ನಿರಾಸೆ ಕಾರಣವೋ ಅಥವಾ ಟಿಕೆಟ್‌ ಪಕ್ಕಾ ಎಂಬ ವಿಶ್ವಾಸವೋ ಎಂಬುದು ಕುತೂಹಲ ಮೂಡಿಸಿದೆ.

*ರಾ.ರವಿಬಾಬು

ಟಾಪ್ ನ್ಯೂಸ್

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.