ಆದರ್ಶ ಗ್ರಾಮಕ್ಕೆ ರಾಜ್ಯ ನಿರಾಸಕ್ತಿ

Team Udayavani, Jun 20, 2017, 1:14 PM IST

dvg2.jpg

ದಾವಣಗೆರೆ: ಕೇಂದ್ರ ಸರ್ಕಾರದಿಂದ 2.65 ಕೋಟಿ ರೂ. ಅನುದಾನ ಒದಗಿಸಿದ್ದರೂ ಸಂಸದರ ಆದರ್ಶ ಗ್ರಾಮದ ವಿಚಾರದಲ್ಲಿ ರಾಜ್ಯ ಸರ್ಕಾರ ಉದಾಸೀನತೆ ತೋರುತ್ತಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಸೋಮವಾರ ಜಿಎಂಐಟಿ ಆವರಣದ ತಮ್ಮ ಖಾಸಗಿ ಕಚೇರಿಯಲ್ಲಿ ಜನಸಂಪರ್ಕ ಸಭೆಯಲ್ಲಿ ಚನ್ನಗಿರಿ ತಾಲ್ಲೂಕಿನ ಮಲ್ಲಾಪುರ ಗ್ರಾಮ ಪಂಚಾಯತ್‌ ಸದಸ್ಯರ ನಿಯೋಗದೊಂದಿಗೆ ಮಾತನಾಡುವ ವೇಳೆ ತಮ್ಮ ಅಸಮಾಧಾನ ಹೊರಹಾಕಿರುವ ಸಿದ್ದೇಶ್ವರ್‌, ಕೇಂದ್ರದ ಬಹುತೇಕ ಯೋಜನೆಗಳಿಗೆ ರಾಜ್ಯ ಸರ್ಕಾರ ಆಸಕ್ತಿ ತೋರುತ್ತಿಲ್ಲ.

ಸಂಸದರ ಆದರ್ಶ ಗ್ರಾಮ ಯೋಜನೆಗೂ ಸಹಕಾರ ನೀಡುತ್ತಿಲ್ಲ ಎಂದರು. ನಾನು ಪ್ರಥಮಹಂತದಲ್ಲಿ ಆಯ್ಕೆ ಮಾಡಿಕೊಂಡ ಜಗಳೂರು ತಾಲ್ಲೂಕಿನ ಮುಸ್ಟೂರು ಗ್ರಾಮ ಪಂಚಾಯತಿಯ ಅಭಿವೃದ್ಧಿಗೆ ಸಾಮಾಜಿಕ ಹೊಣೆಗಾರಿಕೆ ನಿಧಿ ಅನುದಾನದಡಿ 2.65 ಕೋಟಿ ರೂ. ತಂದು ಸಿಮೆಂಟ್‌ ಕಾಂಕ್ರೀಟ್‌ ರಸ್ತೆ ನಿರ್ಮಾಣ ಮಾಡಿದೆ.

ಮೂರು ಶುದ್ದ ಕುಡಿಯುವ ನೀರಿನ ಘಟಕ, ಸೋಲಾರ್‌ ಬೀದಿ ದೀಪ ಅಳವಡಿಸಿದೆ. ಬಾಕ್ಸ್‌ ಚರಂಡಿಗಳ ನಿರ್ಮಾಣ, ಸೇರಿದಂತೆ ವಿವಿಧ ಕಾಮಗಾರಿ ಮಾಡಿಸಿದ್ದೇನೆ ಎಂದರು. ರಾಜ್ಯ ಸರ್ಕಾರ ಕೇವಲ 80 ಲಕ್ಷ ರೂ. ಅನುದಾನವನ್ನು ಮುಸ್ಟೂರು ಗ್ರಾಮಪಂಚಾಯತಿಗೆ ವಿನಿಯೋಗಿಸಿದೆ.

ಅದೇ ರೀತಿ 2ನೇ ಹಂತದಲ್ಲಿ ಚನ್ನಗಿರಿ ತಾಲ್ಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ಆಯ್ಕೆ ಮಾಡಿಕೊಂಡು ಒಂದುವರ್ಷ ಕಳೆದಿದ್ದರೂ ಕೂಡ ಸರ್ಕಾರ ಕೇವಲ 30 ಲಕ್ಷ ರೂ. ಮಾತ್ರ ಅನುದಾನ ವಿನಿಯೋಗಿಸಿದೆ ಎಂದರು. ಕೋಟಿಗಟ್ಟಲೇ ಕ್ರಿಯಾ ಯೋಜನೆ ಸಿದ್ದಪಡಿಸಿ, ರಾಜ್ಯ ಸರ್ಕಾರ ಅನುದಾನ ಹೊಂದಿಸದೇ ಇದ್ದರೆ ಇಚ್ಚಾಶಕ್ತಿಯ ಕೊರತೆಯಲ್ಲದೇ ಇನ್ನೇನು ಎಂದು ಅವರು ಪ್ರಶ್ನಿಸಿದರು. 

ನಾನು ಸ್ವತಃ ಎನ್‌ಜಿಓ ಮೂಲಕ ಈ ಎರಡೂ ಗ್ರಾಮಪಂಚಾಯತಿಗೆ ಒಳಪಡುವ ಗ್ರಾಮಗಳಲ್ಲಿ ಸಮಗ್ರ ಸಮೀಕ್ಷೆ ನಡೆಸಿ, ಕೇಂದ್ರ ಸರ್ಕಾರದ ವಿಮಾ ಯೋಜನೆಗಳನ್ನು ಪ್ರತಿಯೊಬ್ಬರೂ ನೋಂದಾಯಿಸುವಂತೆ ಮನವೊಲಿಸಲಾಗಿದೆ. ಪ್ರತಿಯೊಬ್ಬರೂ ಕೂಡ ಕಡ್ಡಾಯವಾಗಿ ವೈಯಕ್ತಿಕ ಶೌಚಾಲಯ ಕಟ್ಟಿಸಿಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ಹೇಳಿದರು. 

ಮಲ್ಲಾಪುರ ಗ್ರಾಮಪಂಚಾಯತಿಯ ಮಲ್ಲಾಪುರ ಮತ್ತು ಆಲೂರು ಗ್ರಾಮಗಳಲ್ಲಿ ಶಾಲಾ ಕೊಠಡಿ, ಬಸ್‌ ತಂಗುದಾಣ, ಶಾಲಾ ಕಾಂಪೌಂಡ್‌, ಕಾಂಕ್ರೀಟ್‌ ರಸ್ತೆಗಳ ನಿರ್ಮಾಣಕ್ಕೆ 51 ಲಕ್ಷ ರೂ.ಗಳನ್ನು ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಬಿಡುಗಡೆ ಮಾಡಿದ್ದೇನೆ ಎಂದು ಅವರು ತಿಳಿಸಿದರು. 

ನಗರದಂತೆ ಹಳ್ಳಿಗಳೂ ಕೂಡ ಅಭಿವೃದ್ದಿ ಹೊಂದಬೇಕು. ನಗರದ ಕಡೆ ಗ್ರಾಮೀಣರು ವಲಸೆ ಹೋಗುವುದನ್ನು ತಡೆಬೇಕು, ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂಬ ಕಾರಣದಿಂದ ಪ್ರಧಾನ ಮಂತ್ರಿಗಳು ಸಂಸದ ಆದರ್ಶಗ್ರಾಮ ಯೋಜನೆ ರೂಪಿಸಿದ್ದಾರೆ.

ಈ ಯೋಜನೆಯಡಿ ಸರ್ಕಾರಗಳಿಂದ ಮಂಜೂರಾಗುವ ಯೋಜನೆಗಳು ಸಂಸದ ಆದರ್ಶಗ್ರಾಮಗಳಿಗೆ ಮೊದಲು ದೊರೆಯಬೇಕು ಎಂದು ಮಾರ್ಗಸೂಚಿಯನ್ನು ರಚಿಸಲಾಗಿದ್ದರೂ ಕೂಡ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಈ ಬಗ್ಗೆ ಇಚ್ಚಾಶಕ್ತಿ ಹೊಂದಿಲ್ಲ ಎಂದು ದೂರಿದರು. 

ಮಾಜಿ ಶಾಸಕರಾದ ಬಿ.ಪಿ. ಹರೀಶ್‌, ಮುಖಂಡರಾದ ಮಹಾಬಲೇಶ್ವರ ಗೌಡ್ರು, ಜಿಪಂ ಸದಸ್ಯ ವಾಗೀಶ್‌ ಸ್ವಾಮಿ, ಮುಖಂಡರಾದ ಟಿ. ಮುಕುಂದ್‌, ಜಯಪ್ರಕಾಶ್‌ ಕೊಂಡಜ್ಜಿ, ಹಿಂಡಸಘಟ್ಟೆ ಪರಮೇಶ್ವರಪ್ಪ, ಗೋವಿನಾಳ್‌ ರಾಜಣ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಜಯ್ಯಮ್ಮ, ಜಿಪಂ ಮಾಜಿ ಅಧ್ಯಕ್ಷೆ ಜಯಲಕ್ಷ್ಮಿ ಮಹೇಶ್‌ ಇತರರು ಈ ವೇಳೆ ಹಾಜರಿದ್ದರು.  

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

suicide (2)

Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.