ಹತ್ತು ಕೆಜಿ ಅಕ್ಕಿ ನೀಡಲು ಈಗಲೂ ಬದ್ಧ: ಸಚಿವ ಆರ್.ಬಿ ತಿಮ್ಮಾಪುರ
Team Udayavani, Jun 22, 2023, 1:26 PM IST
ದಾವಣಗೆರೆ: ರಾಜ್ಯ ಸರ್ಕಾರ ಹತ್ತು ಕೆಜಿ ಅಕ್ಕಿ ನೀಡಲು ಈಗಲೂ ಬದ್ದ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ನಡೆಯಲು ಬದ್ಧವಿದೆ. ಆದರೆ, ಕೇಂದ್ರದ ಅಸಹಕಾರ ನೀತಿಯಿಂದ ಕೊಡಲು ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಧಾನಿಯವರು ನಮ್ಮ ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಅವರಿಗೆ ಭೇಟಿಗೆ ಅವಕಾಶ ನೀಡದಿರುವುದು ಖಂಡನೀಯ. ರಾಜ್ಯದಲ್ಲಿ ತೊಂದರೆಯಾಗಿದೆ. ಕೇಂದ್ರದ ಗೋದಾಮಿನಲ್ಲಿ ಅಕ್ಕಿ ದಾಸ್ತಾನಿದ್ದರೂ ರಾಜ್ಯಕ್ಕೆ ಕೊಡುತ್ತಿಲ್ಲ. ಪುಕ್ಕಟೆ ಕೇಳುತ್ತಿಲ್ಲ, ದುಡ್ಡು ಕೊಡುತ್ತೇವೆ ಎಂದರೂ ಕೇಳುತ್ತಿಲ್ಲ. ಬಡವರ ಅನ್ನದ ಜೊತೆ ಆಟವಾಡುತ್ತಿರುವ ಪ್ರವೃತ್ತಿಯನ್ನು ಖಂಡಿಸುತ್ತೇನೆ ಎಂದು ದೂರಿದರು.
ಸರ್ಕಾರ ಹೇಗೆ ನಡೆಸಿಕೊಳ್ಳಬೇಕು ಎನ್ನುವುದು ನಮಗೆ ಗೊತ್ತಿದೆ. ಈಗ ಅಕ್ಕಿ ಕೊಡುತ್ತಿರುವುದು ನಮ್ಮ ಪಾಲು. ಕೇಂದ್ರದವರು ಕೊಡುತ್ತಾರೆ. ನಾವು ಸೇರಿಸಿ ಹತ್ತು ಕೆಜಿ ಕೊಡ್ತಿವಿ. ಆದರೆ, ಕೇಂದ್ರ ಸರ್ಕಾರ ಪುಕ್ಕಟೆ ಕೊಡುವ ರೀತಿ ಮಾಡುತ್ತಾ ಇರುವುದು ಸರಿಯಲ್ಲ. ಕೇಂದ್ರದ ಕೆಲವು ಸಚಿವರುಗಳು ಅದಾನಿ, ಅಂಬಾನಿ ಜೊತೆ ಬೆಳೆದವರು, ಬಡವರ ಕಷ್ಟ ಗೊತ್ತಾಗುತ್ತಿಲ್ಲ ಎಂದರು.
ಹಾಲಿನ ದರ ಹೆಚ್ಚಳಕ್ಕೆ ಪ್ರಸ್ತಾವನೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ದರ ಏರಿಕೆ ಬಗ್ಗೆ ಅದು ಏರಿಕೆಯಾದ ನಂತರ ಮಾತನಾಡೋಣ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದಾರೆ. ಅದು ಚರ್ಚೆಯಾಗುತ್ತದೆ. ಮುಂಚಿತವಾಗಿಯೇ ನಾವು ಏನನ್ನು ಹೇಳುವುದಿಲ್ಲ ಎಂದರು.
ಇದನ್ನೂ ಓದಿ:ಹಸಿರು ವಜ್ರ, ಉಪನಿಷತ್ ಪುಸ್ತಕ, ದಶ ದಾನ..: ಬಿಡೆನ್ ದಂಪತಿಗೆ ಮೋದಿ ಕೊಟ್ಟ ಉಡುಗೊರೆಗಳೇನು?
ಕೈಗಾರಿಕಾ ಗಳ ಬಂದ್ ಘೋಷಣೆ ವಿಚಾರದ ಬಗ್ಗೆ ಮಾತನಾಡಿದ ಸಚಿವರು, ಸಹಜವಾಗಿ ತೆರಿಗೆ ತೆಗೆದುಕೊಳ್ಳಲೇಬೇಕು. ಕೆಲವು ವಿಚಾರವಾಗಿ ಟ್ಯಾಕ್ಸ್ ಕಡಿಮೆ ಮಾಡುವುದು ಜಾಸ್ತಿ ಇದ್ದೇ ಇರುತ್ತದೆ. ಒಂದು ಕೈಯಲ್ಲಿ ಕೊಟ್ಟು ಒಂದು ಕೈಯಲ್ಲಿ ಕಿತ್ತುಕೊಳ್ಳುತ್ತಾರೆ ಎಂದು ಅವರರವ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ನಾವು ಮದ್ಯ ದರ ಏರಿಕೆ ಮಾಡಿಲ್ಲ ಎಂದರು.
ಸಿಎಂ ಸಿದ್ದರಾಮಯ್ಯನವರು ಪೂರ್ಣವಧಿ ಅಧಿಕಾರ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಶಾಸಕಾಂಗ ಸಭೆ ಇದೆ, ಹೈಕಮಾಂಡ್ ಇದೆ ಅಲ್ಲಿ ನಿರ್ಧಾರವಾಗುತ್ತದೆ. ಈಗ ಏನು ಹೇಳುತ್ತಾ ಇದರೋ ಅದು ಅವರ ವೈಯಕ್ತಿಕ. ನಾನು ವೈಯಕ್ತಿಕ ಅಭಿಪ್ರಾಯ ನಾನು ಹೇಳುವುದಿಲ್ಲ ಎಂದರು
ಬಿಜೆಪಿ ವಿರೋಧ ಪಕ್ಷ ಆಯ್ಕೆ ಮಾಡದ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯವರು ಗೊಂದಲದಲ್ಲಿ ಇದ್ದಾರೆ ಸೋಲಿನಿಂದ ಹತಾಶರಾಗಿದ್ದಾರೆ. ಯಡಿಯೂರಪ್ಪ ನವರು ಒತ್ತಡದಲ್ಲಿ ಇದ್ದಾರೆ, ಈ ವಯಸ್ಸಿನಲ್ಲಿ ಅವರಿಗೆ ಒತ್ತಡ ಇದೆ. ಬಿಜೆಪಿ ಪಕ್ಷದಲ್ಲಿ ಬಹಳ ಜನರನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ. ಯಡಿಯೂರಪ್ಪನವರನ್ನು ಏಕೆ ತೆಗೆದರು ಈಗ ಏಕೆ ಪ್ರವಾಸ ಮಾಡುವಂತೆ ಹೇಳುತ್ತಿದಾರೆ ಗೊತ್ತಾಗುತ್ತಿಲ್ಲ. ಯಡಿಯೂರಪ್ಪನವರನ್ನು ಇಕ್ಕಟ್ಟಿನಲ್ಲಿ ಸಿಲುಕಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಬಿಜೆಪಿಯವರು 600 ಭರವಸೆಗಳಲ್ಲಿ 50 ಕೂಡ ಈಡೇರಿಕೆ ಮಾಡಿಲ್ಲ. ಯೋಗ್ಯತೆ ಇಲ್ಲದವರು. ಈಗ ಮಾತನಾಡುತ್ತಿದ್ದಾರೆ. ಅವರು ಎಷ್ಟು ಭರವಸೆಗಳನ್ನು ಈಡೇರಿಕೆ ಮಾಡಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.