ಗುಳೆ ನಿಲ್ಲಿಸಿ, ಗೋಶಾಲೆ ತೆರೆಯಿರಿ

•ಜನ-ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಎಸ್‌.ಆರ್‌. ಶ್ರೀನಿವಾಸ್‌ ಸೂಚನೆ

Team Udayavani, May 14, 2019, 2:14 PM IST

dg-tdy-1..

ದಾವಣಗೆರೆ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಆರ್‌.ಶ್ರೀನಿವಾಸ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆ

ದಾವಣಗೆರೆ: ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ನೀರಿನ ಹಾಹಾಕಾರ ಆಗದಂತೆ ಕ್ರಮ ಕೈಗೊಳ್ಳಬೇಕು. ಬರ ನಿರ್ವಹಣೆಗೆ ಅಗತ್ಯ ಪರಿಹಾರೋಪಾಯ ಮಾರ್ಗ ಸಿದ್ಧಪಡಿಸಿ, ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಆರ್‌. ಶ್ರೀನಿವಾಸ್‌ ಸೂಚಿಸಿದ್ದಾರೆ.

ಸೋಮವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿನ ಬರ ಪರಿಸ್ಥಿತಿ, ಅದರ ನಿರ್ವಹಣೆ ಹಾಗೂ ಪರಿಹಾರೋಪಾಯ ಮಾರ್ಗಗಳ ಕುರಿತ ಪರಿಶೀಲನಾ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಹಳ್ಳಿಗಳಲ್ಲಿ ಶಾಶ್ವತ ಪರಿಹಾರದ ಬಗ್ಗೆ ಯೋಜನೆ ರೂಪಿಸಬೇಕು. ಸದ್ಯದ ಪರಿಸ್ಥಿತಿ ನಿರ್ವಹಣೆಗೆ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ತಿಂಗಳಲ್ಲಿ ಮೂರ್‍ನಾಲ್ಕು ಬಾರಿ ಆಯಾ ತಾಲೂಕಿನ ತಹಶೀಲ್ದಾರ್‌, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಇಂಜಿನಿಯರ್‌ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆ ನಡೆಸಿ, ಅನುಪಾಲನಾ ವರದಿಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಸಲ್ಲಿಸುವಂತೆ ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅತಿ ಬೇಡಿಕೆ ಇರುವ ಕಡೆಯಲ್ಲಿ ಬೋರ್‌ವೆಲ್ ಕೊರೆಯಿಸಿ, ಜನರಿಗೆ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು. ತಕ್ಷಣ ಅವಶ್ಯವಿರುವೆಡೆ ಜಾನುವಾರುಗಳಿಗೆ ಗೋಶಾಲೆ ತೆರೆಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.

108 ಗ್ರಾಮಗಳಲ್ಲಿ ಸಮಸ್ಯೆ: ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಅಭಿಯಂತರ ರಾಜು ಮಾತನಾಡಿ, ಜಿಲ್ಲೆಯ ಒಟ್ಟು 108 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಇವುಗಳಲ್ಲಿ 67 ಗ್ರಾಮಗಳಿಗೆ 106 ಟ್ಯಾಂಕರ್‌ಗಳ ಮೂಲಕ ಹಾಗೂ ಉಳಿದ 41 ಗ್ರಾಮಗಳಿಗೆ 63 ಖಾಸಗಿ ಬೋರ್‌ವೆಲ್ಗಳ ಮುಖಾಂತರ ನೀರಿನ ಸರಬರಾಜು ಮಾಡಲಾಗುತ್ತಿದೆ. ಜಗಳೂರು ತಾಲೂಕಿನಲ್ಲೇ ನೀರಿನ ಸಮಸ್ಯೆ ಹೆಚ್ಚಾಗಿದೆ. 87 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಅಲ್ಲದೇ ಹಲವಾರು ಗ್ರಾಮಗಳಲ್ಲಿ ಸಾವಿರ ಅಡಿ ಕೊರೆದರೂ ನೀರು ಸಿಗದ ಕಾರಣ ಟ್ಯಾಂಕರ್‌ ಮೂಲಕವೇ ನೀರು ಪೂರೈಸಲಾಗುತ್ತಿದೆ ಎಂದು ಸಭೆ ಗಮನಕ್ಕೆ ತಂದರು.

ಆಗ, ಜಿಲ್ಲಾ ಉಸ್ತುವಾರಿ ಸಚಿವರು, ಜಗಳೂರು ತಾಲೂಕಿನ ತಹಶೀಲ್ದಾರ್‌, ಇಓ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ತರಾಟೆಗೆ ತೆಗೆದುಕೊಂಡು, ಇಷ್ಟೆಲ್ಲಾ ಸಮಸ್ಯೆ ಉದ್ಭವಿಸಿದ್ದು ಯಾಕೆ? ನೀವು ಯಾವುದೇ ರೀತಿಯ ಸಮರ್ಪಕ ಪರಿಹಾರೋಪಾಯ ಕ್ರಮ ಕೈಗೊಂಡಿಲ್ಲ. ಈ ಕೂಡಲೇ ತಾಲೂಕಿನಲ್ಲಿ ನೀರು ಹಾಗೂ ಮೇವಿನ ಸಮಸ್ಯೆ ಇರುವ ಕಡೆ ಭೇಟಿ ನೀಡಿ ಸೂಕ್ತ ಪರಿಹಾರ ಒದಗಿಸುವಂತೆ ಸೂಚಿಸಿದರು.

ತಾಲೂಕಿನಲ್ಲಿ 153 ಬೋರ್‌ವೆಲ್ ಕೊರೆಸಲಾಗಿದೆ. ಆದರೆ, ಬಹುತೇಕ ಬೋರವೆಲ್ಗಳಲ್ಲಿ ನೀರು ಸಿಕ್ಕಿಲ್ಲ. ಸಿಕ್ಕ ಅಲ್ಪ ಪ್ರಮಾನದ ನೀರನ್ನು ಟ್ಯಾಂಕರ್‌ ಮೂಲಕ ಗ್ರಾಮೀಣ ಪ್ರದೇಶಗಳಿಗೆ ಸರಬರಾಜು ಮಾಡಲಾಗುತ್ತಿದೆ. ಈಗಾಗಲೇ ತಾಲೂಕಿನ ಗುರುಸಿದ್ದಾಪುರ ಮತ್ತು ಕಲ್ಲದೇವಪುರದಲ್ಲಿ ಗೋಶಾಲೆಗಳನ್ನು ತೆರೆಯಲಾಗಿದೆ ಎಂದು ಉಪ ವಿಭಾಗಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಸೂಚನೆ ಪಾಲಿಸದಕ್ಕೆ ಬೇಸರ: ಈ ಹಿಂದೆ ಕೆಡಿಪಿ ಸಭೆ ಸಂದರ್ಭದಲ್ಲೇ ಜಗಳೂರು ತಾಲೂಕಿನಲ್ಲಿನ ನೀರಿನ ಸಮಸ್ಯೆ ಕುರಿತು ಹೆಚ್ಚಿನ ಕಾಳಜಿ ವಹಿಸುವಂತೆ ಸೂಚನೆ ನೀಡಿದ್ದೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಂದು ಬಹುತೇಕ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಅಲ್ಲದೇ ಜನರ ಬೇಡಿಕೆಯಂತೆ ಜಗಳೂರು ಅರಣ್ಯ ಪ್ರದೇಶದಲ್ಲಿ ಒಂದು ಬೋರ್‌ವೆಲ್ ಕೊಯಿರೆಸಿ ಅಲ್ಲಿನ ಪ್ರಾಣಿಗಳಿಗೆ ನೀರು ಕುಡಿಯಲು ವ್ಯವಸ್ಥೆ ಮಾಡುವಂತೆ ಹೇಳಿ, ನನ್ನ ಗಮನಕ್ಕೆ ತರಬೇಕೆಂದು ಸೂಚಿಸಿದ್ದರೂ ಈ ಕುರಿತಂತೆ ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಈ ಕೂಡಲೇ ನೀರಿನ ಸಮಸ್ಯೆ ಇರುವ ಪ್ರತಿ ಗ್ರಾಮದಲ್ಲಿ ಒಂದೊಂದು ಬೋರ್‌ವೆಲ್ ಕೊರೆಸಬೇಕು. 1000-1200 ಅಡಿ ಕೊರೆಯಿಸಿದರೂ ಅಡ್ಡಿಇಲ್ಲ. ಒಟ್ಟಿನಲ್ಲಿ ನೀರು ಒದಗಿಲು ಎಲ್ಲಾ ಪ್ರಯತ್ನ ಮಾಡಬೇಕು. ಸರ್ಕಾರದಲ್ಲಿ ಹಣಕ್ಕೆ ಕೊರತೆ ಇಲ್ಲ. ಜಿಲ್ಲಾಧಿಕಾರಿ ಖಾತೆಯಲ್ಲೂ ಕುಡಿಯುವ ನೀರು ಸಮಸ್ಯೆ ಪರಿಹಾರಕ್ಕೆ ಹಣ ಇದೆ. ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕೆಲಸ ಮಾಡಬೇಕು ಎಂದು ಸಚಿವರು ಖಡಕ್‌ ಆಗಿ ತಿಳಿಸಿದರು.

ಚನ್ನಗಿರಿಯಲ್ಲಿ 10 ಗ್ರಾಮಗಳಲ್ಲಿ ನೀರಿನ ಸಮಸ್ಯೆಯಿತ್ತು. ಅದನ್ನು ಖಾಸಗಿ ಬೋರ್‌ವೆಲ್ನಿಂದ ನೀರು ಕೊಡುವ ಮೂಲಕ ಬಗೆಹರಿಸಲಾಗಿದೆ. ಹೊನ್ನಾಳಿಯ 5 ಗ್ರಾಮಗಳಲ್ಲಿದ್ದ ನೀರಿನ ಸಮಸ್ಯೆಯನ್ನೂ ಸಹ ಬಗೆಹರಿಸಲಾಗಿದೆ. ನ್ಯಾಮತಿ ಹಾಗೂ ಹರಿಹರ ತಾಲೂಕಿನಲ್ಲಿ ನೀರಿನ ಸಮಸ್ಯೆಯಿಲ್ಲ. ಸಮಸ್ಯೆ ಎದುರಾದರೆ ಅದಕ್ಕೆ ಬೇಕಾದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

ದಾವಣಗೆರೆ ನಗರದಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತ ವೀರೇಂದ್ರ ಕುಂದಗೋಳ ಮಾತನಾಡಿ, 41 ವಾರ್ಡ್‌ಗಳಿಗೆ ವಾರಕೊಮ್ಮೆ 3 ತಾಸುಗಳ ಕಾಲ ನೀರು ಬಿಡಲಾಗುತ್ತಿದೆ. ನಗರದಲ್ಲಿನ 162 ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. ಸದ್ಯಕ್ಕೆ ನೀರಿನ ಸಮಸ್ಯೆಯಂತೂ ಇಲ್ಲ. ಟಿವಿ ಸ್ಟೇಷನ್‌ ಕೆರೆಯಲ್ಲಿ 70 ದಿನಗಳಿಗೆ ಆಗುವಷ್ಟು ನೀರಿದೆ. ಈಗ ಕುಂದವಾಡ ಕೆರೆಗೆ ನೀರು ತುಂಬಿಸಿಕೊಂಡಲ್ಲಿ 2 ರಿಂದ 3 ತಿಂಗಳು ನೀರಿನ ಸಮಸ್ಯೆ ಎದುರಾಗದು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಜಿಲ್ಲೆಯಲ್ಲಿ ಮೊದಲು ಕುಡಿಯುವ ನೀರಿನ ಸಂಗ್ರಹಣಾ ಕೇಂದ್ರಗಳು ಎಲ್ಲೆಲ್ಲಿ ಇವೆಯೋ ಅಲ್ಲಲ್ಲಿ ನೀರನ್ನು ಸಮರ್ಪಕವಾಗಿ ಸಂಗ್ರಹಿಸಿಟ್ಟುಕೊಳ್ಳಬೇಕು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಹರಿಹರ ತಾಲೂಕಿನಲ್ಲಿ ನೀರಿನ ಸಮಸ್ಯೆಯಿಲ್ಲ. ತಾಲೂಕಿನಲ್ಲಿ 340 ಬೋರ್‌ವೆಲ್ಗಳಿವೆ. ಅದರಲ್ಲಿ 60 ಬೋರ್‌ವೆಲ್ ಅಂತರ್ಜಲ ಬತ್ತಿದ್ದು, ಉಳಿದ ಬೋರವೆಲ್ಗಳಲ್ಲಿ ನೀರಿದೆ. ಚನ್ನಗಿರಿ ಪಟ್ಟಣದ 23 ವಾರ್ಡ್‌ಗಳಿಗೆ ಶಾಂತಿ ಸಾಗರದಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಸದ್ಯಕ್ಕೆ ನೀರಿನ ಸಮಸ್ಯೆಯಿಲ್ಲ ಅಧಿಕಾರಿಗಳು ಮಾಹಿತಿ ನೀಡಿದರು.

ಜಗಳೂರಿನಲ್ಲಿ ಮೊದಲು 17 ಟ್ಯಾಂಕರ್‌ಗಳಲ್ಲಿ ನೀರು ಸರಬರಾಜು ಮಾಡಲಾಗುತ್ತಿದ್ದು, ಈಗ ಶಾಂತಿ ಸಾಗರದಿಂದ ನೀರು ಸರಬರಾಜು ಆರಂಭವಾದ ನಂತರ 6 ಟ್ಯಾಂಕರ್‌ಗಳಲ್ಲಿ ನೀರು ಪೂರೈಸಲಾಗುತ್ತಿದೆ. ಪಟ್ಟಣದಲ್ಲಿ ನೀರಿನ ಸಮಸ್ಯೆ ಇಲ್ಲ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಭೆಗೆ ತಿಳಿಸಿದರು.

ಅಗತ್ಯ ಇರುವೆಡೆ ಗೋಶಾಲೆ: ಜಿಲ್ಲೆಯಲ್ಲಿ 26 ವಾರಗಳಿಗೆ ಆಗುವಷ್ಟು ಮೇವಿನ ಲಭ್ಯತೆಯಿದ್ದು, ಜಗಳೂರು ತಾಲೂಕಿನಲ್ಲಿ ಮಾತ್ರ ಕೇವಲ ಹತ್ತು ವಾರಗಳಿಗೆ ಆಗುವಷ್ಟು ಮೇವು ಇರುವ ಕಾರಣ ಅಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಎರಡು ಕಡೆ ಗೋಶಾಲೆ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎನ್‌. ಶಿವಮೂರ್ತಿ ಹೇಳಿದಾಗ, ಸಚಿವ ಶ್ರೀನಿವಾಸ್‌, ಗೋಶಾಲೆಯಲ್ಲಿ ಜಾನುವಾರುಗಳಿಗೆ ಸಮರ್ಪಕ ಹಾಗೂ ಕ್ರಮಬದ್ಧವಾಗಿ ಮೇವು ಒದಗಿಸಬೇಕು. ಮೇವಿನ ಲೆಕ್ಕ ಸರಿಯಾಗಿ ಇಡಬೇಕು. ಅವಶ್ಯವಿದ್ದರೆ ಇತರೆ ಕಡೆಗಳಲ್ಲಿ ಗೋಶಾಲೆ ತೆರೆಯಿರಿ ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಅದರಲ್ಲೂ ಜಗಳೂರು ತಾಲೂಕಿನಲ್ಲಿ ಜನರು ಯಾವುದೇ ಕಾರಣಕ್ಕೂ ಕೆಲಸ ಅರಸಿ ಬೇರೆಡೆ ಗುಳೆ ಹೋಗದಂತೆ ತಡೆಯಲು ಅವರಿಗೆ ಸೂಕ್ತ ಕೆಲಸ ಹಾಗೂ ಸಕಾಲಕ್ಕೆ ಕೂಲಿ ಹಣ ನೀಡಬೇಕು ಎಂದು ಸಚಿವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಸಿಇಒ ಎಚ್. ಬಸವರಾಜೇಂದ್ರ, ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಜಿ.ಪಂ. ಉಪಕಾರ್ಯದರ್ಶಿ ಎಲ್. ಭೀಮಾನಾಯ್ಕ, ಉಪವಿಭಾಗಾಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಕಾರಿ ನಜ್ಮಾ, ತೋಟಗಾರಿಕೆ ಉಪನಿರ್ದೇಶಕ ಲಕ್ಷ್ಮೀಕಾಂತ್‌ ಬೊಮ್ಮಣ್ಣನವರ್‌, ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್, ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

ಜಗಳೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಆರ್‌.ಶ್ರೀನಿವಾಸ್‌, ನೀನು ಕೇಂದ್ರ ಸ್ಥಾನದಲ್ಲೇ ಇರುವುದಿಲ್ಲ. ಮಧ್ಯಾಹ್ನವೇ ಚಿತ್ರದುರ್ಗಕ್ಕೆ ಹೋಗುತ್ತಿದ್ದೀಯ. ನಾನೇ ಪೋನ್‌ ಮಾಡಿದರೂ ಲಿಫ್ಟ್‌ ಮಾಡಿಲ್ಲ. ನಿನ್ನ ಬಗ್ಗೆ ಸಾರ್ವಜನಿಕರಿಂದ ನನಗೆ ಸಾಕಷ್ಟು ದೂರು ಬಂದಿವೆ. ನಿನ್ನಂತಹ ಬೇಜವಾಬ್ದಾರಿ ಅಧಿಕಾರಿ ಬೇಡ. ನೀನೇ ಟ್ರಾನ್ಸ್‌ಫರ್‌ ಮಾಡಿಸಿಕೊಂಡು ಬೇರೆಡೆ ಹೋಗು. ಇಲ್ಲದಿದ್ದರೆ ನಿನ್ನನ್ನು ಸಸ್ಪೆಂಡ್‌ ಮಾಡಿಸುವೆ. ಯಾವುದು ಬೇಕೋ ಅದನ್ನ ಆಯ್ಕೆ ಮಾಡಿಕೊ ಎಂದು ಎಚ್ಚರಿಸಿದರಲ್ಲದೆ, ಇತನಿಗೆ ನೋಟೀಸ್‌ ಕೊಡಿ ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು.

ಟಾಪ್ ನ್ಯೂಸ್

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.