ಕಾವೇರಿ ನೀರು ಹರಿಸುವುದು ತಕ್ಷಣ ನಿಲ್ಲಿಸಿ
Team Udayavani, Jul 25, 2017, 3:15 PM IST
ದಾವಣಗೆರೆ: ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಕೂಡಲೇ
ನಿಲ್ಲಿಸಲು ಒತ್ತಾಯಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟಿಸಿದ್ದಾರೆ.
ಶ್ರೀ ಜಯದೇವ ವೃತ್ತದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಮಳೆಗಾಲದಲ್ಲೇ ಕರ್ನಾಟಕದಲ್ಲಿ ಕುಡಿಯುವ ನೀರಿಗೆ ಪರಿತಪಿಸುವ ಪರಿಸ್ಥಿತಿ ಇದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದು ಸಮಂಜಸವಲ್ಲ. ಕೂಡಲೇ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು.
ಕರ್ನಾಟಕದಲ್ಲೇ ಹುಟ್ಟುವ ಕಾವೇರಿ ನೀರು ನಮ್ಮ ನಾಡಿನ ರೈತರು, ಜನರಿಗೇ ಲಭ್ಯವಾಗದಂತಾಗಿದೆ. ರಾಜ್ಯದಲ್ಲಿ 4 ಲಕ್ಷ
ಹೆಕ್ಟೇರ್ ಪ್ರದೇಶಕ್ಕೆ ನೀರೇ ಕೊಡಲಾಗುತ್ತಿಲ್ಲ. ಎರಡು ವರ್ಷದಿಂದ ಬರದಿಂದಾಗಿ ರೈತರು ತತ್ತರಿಸಿದ್ದಾರೆ. ಹೇಗೋ ಜಲಾಶಯಕ್ಕೆ ಬಂದಿರುವ ಒಂದಷ್ಟು ನೀರು ನೋಡಿ ನೆಮ್ಮದಿಯಿಂದ ಇರುವಾಗ ರಾಜ್ಯ ಸರ್ಕಾರ ತಮಿಳುನಾಡಿನ 7 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ ಎಂದು ಪ್ರತಿಭಟನಾ ಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಯಾವುದೋ ಕಾಲದಲ್ಲಿ ಮಾಡಿಕೊಂಡ ಒಪ್ಪಂದದಿಂದ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿದೆ. ಕಾವೇರಿ ವಿಷಯದಲ್ಲಿ ಎಲ್ಲಾ ಸರ್ಕಾರಗಳು ರೈತರಿಗೆ, ಜನರಿಗೆ ಅನ್ಯಾಯ ಮಾಡುತ್ತಿವೆ. ಕೇಂದ್ರ ಸರ್ಕಾರ ಸಹ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ತಕ್ಷಣ ನೀರು ಹರಿಸುವುದನ್ನ ನಿಲ್ಲಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ವೇದಿಕೆ ರಾಜ್ಯ ಅಧ್ಯಕ್ಷ ಕೆ.ಜಿ. ಯಲ್ಲಪ್ಪ, ಜಿಲ್ಲಾ ಅಧ್ಯಕ್ಷ ನಾಗರಾಜ್ ಜಮ್ನಳ್ಳಿ, ಅಮ್ಜದ್ ಅಲಿ, ಸಿಕಂದರ್, ರಾಮಣ್ಣ ತೆಲಗಿ, ನಾಗರಾಜಗೌಡ, ಸಂತೋಷ್ ದೊಡ್ಮನಿ, ಖಲೀಲ್, ಮಹಬೂಬ್, ಗಿರೀಶ್, ನಜೀರ್ ಇತರರು ಇದ್ದರು.
ಬಾರ್ ಪ್ರಾರಂಭಕ್ಕೆ ವಿರೋಧ…
ಮಹಾನಗರಪಾಲಿಕೆ 32ನೇ ವಾರ್ಡ್ ಎಂಸಿಸಿ ಬಿ ಬ್ಲಾಕ್‌ನ 7ನೇ ಮುಖ್ಯ ರಸ್ತೆ 3ನೇ ಕ್ರಾಸ್‌ನಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಪ್ರಾರಂಭ ವಿರೋಧಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಖಾಸಗಿ ಆಸ್ಪತ್ರೆ, ಸಾರ್ವಜನಿಕ ಉದ್ಯಾನವನ, ಈಜುಕೊಳ, ಮುಖ್ಯವಾಗಿ ಜನವಸತಿ ಪ್ರದೇಶಕ್ಕೆ ಬಾರ್ ಅಂಡ್ ರೆಸ್ಟೋರೆಂಟ್ ಸ್ಥಳಾಂತರಿಸಲು ಅನುಮತಿ ನೀಡಲಾಗಿದೆ. ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸದಾ ಸಂಚರಿಸುವ ಪ್ರಮುಖ ಸಂಪರ್ಕ ರಸ್ತೆಯಲ್ಲೇ ಬಾರ್ ಅಂಡ್ ರೆಸ್ಟೋರೆಂಟ್ ಪ್ರಾರಂಭ ಸರಿಯಲ್ಲ. ಯಾವುದೇ ಕಾರಣಕ್ಕೂ ಬಾರ್ ಅಂಡ್ ರೆಸ್ಟೋರಂಟ್‌ಗೆ ಪರವಾನಗಿ ನೀಡಬಾರದೆಂದು ವೇದಿಕೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.