ಕಟ್ಟುನಿಟ್ಟಾಗಿ ಮತದಾರರ ಪಟ್ಟಿ ಪರಿಷ್ಕರಿಸಿ: ಡಿಸಿ ಸೂಚನೆ


Team Udayavani, Jan 11, 2018, 2:28 PM IST

11-28.jpg

ದಾವಣಗೆರೆ: ಬೂತ್‌ ಮಟ್ಟದ ಅಧಿಕಾರಿಗಳು ಮತದಾರರ ಪಟ್ಟಿ ತಯಾರಿಕೆಯಲ್ಲಿ ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಖಡಕ್‌ ಸೂಚನೆ ನೀಡಿದ್ದಾರೆ. ಬುಧವಾರ, ಜಿಲ್ಲಾಡಳಿತ ಭವನದಲ್ಲಿ ಮಾಯಕೊಂಡ ಕ್ಷೇತ್ರದ ಮತಗಟ್ಟೆ ಮಟ್ಟದ ಅಧಿಕಾರಿಗಳ ವಿಶೇಷ ಸಮಗ್ರ ಪರಿಷ್ಕರಣೆ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಮತಗಟ್ಟೆ ಮಟ್ಟದ ಅಧಿ ಕಾರಿಗಳು ಸೇರಿದಂತೆ ಎಲ್ಲರೂ ಪಕ್ಷಾತೀತವಾಗಿ, ಸರ್ಕಾರದ ಪ್ರತಿನಿಧಿ ಗಳಂತೆ, ನಿಷ್ಠೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಚುನವಣಾ ಆಯೊಗ ಚುನಾವಣೆ ಕುರಿತು ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ. ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪದೋಷ ಕಂಡು ಬಂದಲ್ಲಿ ನೇರವಾಗಿ ಬೂತ್‌ ಮಟ್ಟದ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಅವರು ಎಚ್ಚರಿಸಿದರು. ಮಾಯಕೊಂಡ ಕ್ಷೇತ್ರದಲ್ಲಿ 1,896 ಮತಗಟ್ಟೆಗಳಿದ್ದು, ಪ್ರಸ್ತುತ 8 ಮತಗಟ್ಟೆಗಳನ್ನು ಹೆಚ್ಚುವರಿಯಾಗಿ ಸೇರಿಸಲಾಗಿದೆ. ಕಳೆದ 2 ವರ್ಷಗಳಿಂದ 284 ಮತಗಟ್ಟೆಗಳಲ್ಲಿನ ಮತದಾರರ ಸಂಖ್ಯೆಯಲ್ಲಿ ಹೆಚ್ಚು ಕಡಿಮೆ ಆಗಿಲ್ಲ. ಅಂದರೆ ವರ್ಗಾವಣೆ, ಯಾವ ಮತದಾರರೂ ಮರಣ ಹೊಂದಿಲ್ಲ ಎಂಬುದು ಅಸಾಧ್ಯ. ಬೂತ್‌ ಮಟ್ಟದ ಅಧಿಕಾರಿಗಳು ಇದನ್ನು ಮನಗಂಡು ಪರಿಷ್ಕರಣೆ ಮಾಡಿ. ನಿಮಗೆ ಅನುಮಾನ ಬಂದಲ್ಲಿ ತಕ್ಷಣ ಮೇಲಾಧಿಕಾರಿಗಳ ಸಹಾಯ ಪಡೆಯಿರಿ. ಆದರೆ, ಯಾವುದೇ ಕಾರಣಕ್ಕೂ ಲೋಪ ಆಗದಂತೆ ನೋಡಿಕೊಳ್ಳಿ ಎಂದು ಅವರು ಸೂಚಿಸಿದರು.

ಇಲ್ಲಿವರೆಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ಒಟ್ಟು 33 ಸಾವಿರ ಅರ್ಜಿಗಳು ಬಂದಿವೆ. ಅದರಲ್ಲಿ 262 ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಪರಿಷ್ಕರಣೆ ಮಾಡಿ ಸಿದ್ಧಗೊಳಿಸಲಾಗಿದೆ. ಉಳಿದ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಸರಿಯಾಗಿ ಪರಿಷ್ಕರಿಸಿ, ಫೆ. 20ರೊಳಗೆ ಚುನಾವಣಾ ಗುರುತಿನ ಚೀಟಿ ಸಿದ್ಧಪಡಿಸಿ ಎಂದರು. ಆಯೋಗ ಈ ಬಾರಿ ಆಕ್ಸೆಸ್‌ ಟು ಎವರಿಒನ್‌ ಎಂಬ ಘೋಷವಾಕ್ಯದಡಿ ಚುನಾವಣೆಗೆ ಸಿದ್ಧತೆ ನಡೆಸಿದೆ. ಅದರಂತೆ ಪ್ರತಿಯೊಬ್ಬರೂ ಕೂಡ ಮತದಾನ ಮಾಡಬೇಕು. ಇದರಲ್ಲಿ ಬೂತ್‌ ಮಟ್ಟದ ಅಧಿಕಾರಿಗಳು, ಮೇಲ್ವಿಚಾರಕರ ಪಾತ್ರ ಮುಖ್ಯವಾಗುತ್ತದೆ ಎಂದ ಅವರು, ಜಿಲ್ಲೆಯಲ್ಲಿ 35 ಸಾವಿರ ವಿಶೇಷ ಚೇತನರು ಇದ್ದು, ಅವರೂ ಸಹ ಮತದಾನ ಮಾಡುವಂತಾಗಬೇಕು. ಪ್ರತಿ ಬೂತ್‌ ಮಟ್ಟದಲ್ಲಿ ಎಷ್ಟು ಜನ ವಿಶೇಷ ಚೇತನರಿದ್ದಾರೆ ಎಂಬುದನ್ನು ಮೊದಲೇ ಗುರುತಿಸಿರಬೇಕು. ದೈಹಿಕವಾಗಿ ತೀರಾ ದುರ್ಬಲರಾದ ಅಥವಾ ನಡೆಯದೇ ಇರುವಂತಹ ವಿಶೇಷ ಚೇತನರು ಮತದಾನ ಮಾಡಲು ಸಹಾಯಕವಾಗುವಂತೆ ವ್ಹೀಲ್‌ಚೇರ್‌ ವ್ಯವಸ್ಥೆ ಮಾಡುವುದು ಕಡ್ಡಾಯ ಎಂದು ಅವರು ಹೇಳಿದರು.

ಎಲ್ಲ ಮತಗಟ್ಟೆಗಳಲ್ಲಿ ನೀರು, ರಸ್ತೆ, ವಿದ್ಯುತ್‌, ಸೂಚನಾಫಲಕ, ಕಟ್ಟಡ ವ್ಯವಸ್ಥೆ ಮತ್ತು ಭದ್ರತೆ ಇರುವಂತೆ ನೋಡಿಕೊಳ್ಳಬೇಕು. ಒಂದು ವೇಳೆ
ಅಂತಹ ಸೌಲಭ್ಯಗಳಿಲ್ಲದೇ ಇರುವಂತಹ ಮತಗಟ್ಟೆಗಳ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.  

2018 ರ ಚುನಾವಣೆಯಲ್ಲಿ ಚುನಾವಣಾ ಆಯೋಗ ಇವಿಎಂ ಜೊತೆಗೆ ವಿವಿ ಪ್ಯಾಟ್‌ (ವೋಟರ್‌ ವೆರಿಫೈಬಲ್‌ ಪೇಪರ್‌ ಆಡಿಟ್‌ ಟ್ರಯಲ್‌) ತಂತ್ರಜ್ಞಾನ ಅಳವಡಿಸಿದ್ದು, ಈ ತಂತ್ರಜ್ಞಾನದಡಿ ಮತದಾರ ಯಾರಿಗೆ ಮತ ಹಾಕಿದ್ದಾನೆ ಎಂಬುದನ್ನು ಖಚಿತಪಡಿಸಿಕೊಳ್ಳಲು 7 ಸೆಕೆಂಡ್‌ಗಳ ಕಾಲ ಅವಕಾಶವಿರುತ್ತದೆ. ಬ್ಯಾಲೆಟ್‌ ಯೂನಿಟ್‌ಗಳನ್ನು 3 ಹಂತಗಳಲ್ಲಿ ಪರಿಶೀಲನೆಗೊಳಪಡಿಸಲಾಗುತ್ತದೆ. ಇವಿಎಂ ಮತ್ತು ವಿವಿ ಪ್ಯಾಟ್‌ ತಂತ್ರಜ್ಞಾನಗಳನ್ನು ಹ್ಯಾಕ್‌ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಉಪವಿಭಾಗಾಧಿಕಾರಿ ಎನ್‌. ಸಿದ್ದೇಶ್ವರ್‌, ತಹಶೀಲ್ದಾರ್‌ ಸಂತೋಷ್‌ಕುಮಾರ್‌, ಚುನಾವಣಾ ತಹಶೀಲ್ದಾರ್‌ ಎಸ್‌.ಎ. ಪ್ರಸಾದ್‌, ಚುನಾವಣೆ ಶಿರಸ್ತೇದಾರ್‌ ರಾಜೇಶ್‌ ಕುಮಾರ್‌, ಇತರೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.