ಸಾಮಾಜಿಕ ಅನಿಷ್ಠ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ: ಶ್ರೀದೇವಿ


Team Udayavani, Sep 14, 2017, 11:55 AM IST

14-DAV-2.jpg

ದಾವಣಗೆರೆ: ನ್ಯಾಯಾಧೀಶರು, ವಕೀಲರು ಬಾಲ್ಯವಿವಾಹ, ದೇವದಾಸಿಯಂತಹ ಸಾಮಾಜಿಕ ಅನಿಷ್ಠ ಪದ್ಧತಿ ನಿರ್ಮೂಲನೆಗೆ ಶ್ರಮಿಸಬೇಕಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಎಂ. ಶ್ರೀದೇವಿ ಹೇಳಿದ್ದಾರೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಬುಧವಾರ ವ್ಯಾಜ್ಯಗಳ ಪರ್ಯಾಯ ಪರಿಹಾರ ಕೇಂದ್ರ (ಎಡಿಆರ್‌)ದಲ್ಲಿ ಪಾನಲ್‌ ವಕೀಲರಿಗೆ ಆಯೋಜಿಸಿರುವ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜಕ್ಕೆ ವಿರುದ್ಧವಾದ ಪದ್ಧತಿ, ಆಚರಣೆಗಳ ಸಾಧಕ-ಬಾಧಕ, ನಿವಾರಣೆ, ಪರಿಹಾರದ ಬಗ್ಗೆ ಜನ ಸಾಮಾನ್ಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಸಮಾಜ ಸೇವೆಯಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿದ್ದವರು ತೊಡಗಿಸಿಕೊಳ್ಳಬೇಕು ಎಂದರು.

ಈ ಹಿಂದೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದ ನಂತರ ಪ್ಯಾನೆಲ್‌ ವಕೀಲರು ಕಾನೂನು ಅರಿವು, ಜಾಗೃತಿ ಮೂಡಿಸುವ ಮತ್ತು ಲೋಕ್‌ ಅದಾಲತ್‌ನಲ್ಲಿ ಹೆಚ್ಚು ಸಕ್ರಿಯವಾಗಿ ಭಾಗವಹಿಸುತ್ತಿರುವುದು ನಿಜಕ್ಕೂಹೆಚ್ಚಿನ ಸಂತೋಷದ ವಿಚಾರ. ಈ ತರಬೇತಿಯ ನಂತರ ಇನ್ನೂ ಹೆಚ್ಚು ಸಕ್ರಿಯರಾಗುವ ಮೂಲಕ ಸಾರ್ವಜನಿಕರಿಗೆ ಕಾನೂನು ಅರಿವು, ನೆರವು ತಲುಪಿಸಬೇಕು ಎಂದು ತಿಳಿಸಿದರು.

ಈಗಾಗಲೇ ನ್ಯಾಯಾಧೀಶರು, ವಕೀಲರಾಗಿ ಕೆಲಸ ಮಾಡುತ್ತಿರುವರಿಗೆ ತರಬೇತಿ ಅತ್ಯಗತ್ಯ.ಕಲಿಕೆ ಎನ್ನುವುದು ನಿರಂತರ. ಹಾಗಾಗಿ ಎಲ್ಲರೂ ಸದಾ ಕಲಿಯಬೇಕು. 2013ರ ನಂತರ ದಂಡ ಪ್ರಕ್ರಿಯೆ, ಅಧಿನಿಯಮಗಳಲ್ಲಿ ಸಾಕಷ್ಟು ತಿದ್ದುಪಡಿ, ಬದಲಾವಣೆ ಆಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಧೀಶರು, ವಕೀಲರು ಹೆಚ್ಚಿನ ತರಬೇತಿ ಪಡೆಯುವುದು ಸೂಕ್ತ. ತರಬೇತಿಯಲ್ಲಿ ಮಾಹಿತಿ, ವಿಚಾರವನ್ನ ಜನರಿಗೆ ಸಮರ್ಪಕ ವಾಗಿ ತಲುಪಿಸಬೇಕಿದೆ ಎಂದು
ತಿಳಿಸಿದರು.

ಸಣ್ಣ ಪುಟ್ಟ ತಪ್ಪುಗಳು ಸಹ ದೊಡ್ಡ ಪ್ರಮಾಣದ ಅವಘಡಕ್ಕೆ ಕಾರಣವಾಗುತ್ತವೆ.ಒಂದು ತಪ್ಪು ಅಮೂಲ್ಯ ಜೀವ ಹಾನಿಗೆ ಕಾರಣವಾಗಬಹುದು. ಹಾಗಾಗಿ ಸಣ್ಣ ಪುಟ್ಟ ಪ್ರಮಾಣದಲ್ಲಿ ಕಾನೂನು ಉಲ್ಲಂಘನೆ ಆಗಿರುವ ಬಗ್ಗೆ ಜಾಗೃತಿ ಮೂಡಿಸಬೇಕು.ಜಾಗೂರಕರಾಗದಿದ್ದಲ್ಲಿ ಕಾನೂನು ಪ್ರಕಾರ
ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ಎಲ್ಲಿ ಕ್ರಿಮಿನಲ್‌, ಮೋಟಾರ್‌ ಅಪಘಾತ ಪ್ರಕರಣ ಹೆಚ್ಚು ದಾಖಲಾಗುತ್ತವೆಯೋ ಅಲ್ಲಿ ಕಾನೂನು ಉಲ್ಲಂಘನೆ ಜಾಸ್ತಿಎಂಬುದನ್ನ ಮನಗಾಣಬೇಕು. ಹೊನ್ನಾಳಿ ನ್ಯಾಯಾಲಯದಲ್ಲಿ ಮೋಟಾರ್‌ ಅಪಘಾತಕ್ಕೆ ಸಂಬಂಧಿಸಿದಂತೆ 16 ಪ್ರಕರಣ ಮಾತ್ರ ಬಾಕಿ ಇರುವುದು ಅಭಿನಂದನೀಯ. ಹೊನ್ನಾಳಿಗಿಂತ ಕಡಿಮೆ ವ್ಯಾಪ್ತಿ ಹೊಂದಿರುವ ಹರಿಹರದಲ್ಲಿ 500ಕ್ಕೂ ಹೆಚ್ಚು ಪ್ರಕರಣ ಬಾಕಿ ಇವೆ ಎಂದು ತಿಳಿಸಿದರು.

ಕೌಟಂಬಿಕ ನ್ಯಾಯಾಲಯದ ನ್ಯಾಯಾಧೀಶ ಬಿ.ಎಲ್‌. ಜಿನರಾಲ್ಕರ್‌ ಮಾತನಾಡಿ, ಜ್ಞಾನಮಟ್ಟ ಹೆಚ್ಚಿಸಿಕೊಳ್ಳುವ ಜೊತೆಗೆ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುವ ನಿಟ್ಟಿನಲ್ಲಿ ಈ ರೀತಿಯ ತರಬೇತಿ ಅವಶ್ಯ. ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು
ಸಲಹೆ ನೀಡಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಲೋಕಿಕೆರೆ ಸಿದ್ದಪ್ಪ ಮಾತನಾಡಿ, ಮೊದಲ ಬಾರಿಗೆ ಜಿಲ್ಲಾ ನ್ಯಾಯಾಧೀಶರೊಬ್ಬರು ಗ್ರಾಮೀಣ ಪ್ರದೇಶಕ್ಕೆ
ತೆರಳಿ, ಸರ್ಕಾರದಿಂದ ನೀಡುವ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಿದ್ದು ಮರೆಯಲಿಕ್ಕೆ ಸಾಧ್ಯವೇ ಇಲ್ಲ ಎಂದರು.

ಅಧ್ಯಕ್ಷತೆ ವಹಿಸಿದ್ದ ಒಂದನೇ ಹೆಚ್ಚುವರಿ ಸತ್ರ ನ್ಯಾಯಾಲಯ ನ್ಯಾಯಾಧೀಶ ಎ.ಎಸ್‌. ಸದಲಗಿ ಮಾತನಾಡಿ, ಕಾನೂನು ಎಂಬುದು
ಸಾಗರ. ನಾವು ಏನೇ ತಿಳಿದುಕೊಂಡಿದ್ದರೂ ಒಂದೇ ಒಂದು ಹನಿಯಷ್ಟು ತಿಳಿದುಕೊಂಡಂತೆ. ಹಾಗಾಗಿ ದಿನ ಬಳಕೆಯ ಕಾನೂನು ಜೊತೆಗೆ
ಇತರೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಇಂತಹ ತರಬೇತಿ ಕಾರ್ಯಕ್ರಮ ಉಪಯುಕ್ತ.ನಾವೆಲ್ಲರೂ ಸಾಧ್ಯವಾದಷ್ಟು ಸಮಾಜ ಸೇವೆ
ಮಾಡಬೇಕಿದೆ ಎಂದರು.

ಸಂಪನ್ಮೂಲ ವ್ಯಕ್ತಿ ಜಿ. ರಮಾದೇವಿ ಇತರರು ಇದ್ದರು. ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆಂಗಬಾಲಯ್ಯಸ್ವಾಗತಿಸಿದರು.
ಎಲ್‌. ಶ್ಯಾಂ ನಿರೂಪಿಸಿದರು.ಬಿ.ಪಿ. ಬಸವರಾಜ್‌ ವಂದಿಸಿದರು.
 

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.