‘ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗುತ್ತೇವೆ’:ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಯರ ಪ್ರತಿಭಟನೆ
Team Udayavani, Feb 15, 2022, 4:16 PM IST
ದಾವಣಗೆರೆ: ಪಿಯು, ಪದವಿ ಕಾಲೇಜುಗಳಿಗೆ ಮಾತ್ರ ಸೀಮಿತವಾಗಿದ್ದ ಹಿಜಾಬ್ ವಿವಾದ ಈಗ ಪ್ರೌಢಶಾಲಾ ಹಂತಕ್ಕೂ ವಿಸ್ತರಿಸಿದೆ.
ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲಾಯ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಶಾಲೆಗೆ ಬಂದಿದ್ದರು. ಹೈಕೋರ್ಟ್ ನ ಮೌಖಿಕ ಆದೇಶ ಮತ್ತು ಸರ್ಕಾರದ ಸೂಚನೆಯಂತೆ ಹಿಜಾಬ್ ಧರಿಸಿ ಶಾಲೆಗೆ ಬರುವಂತಿಲ್ಲ ಎಂದು ಮುಖ್ಯ ಶಿಕ್ಷಕರಾದಿಯಾಗಿ ಎಲ್ಲರೂ ವಿದ್ಯಾರ್ಥಿನಿಯರಿಗೆ ಮನವರಿಕೆ ಮಾಡಿಕೊಟ್ಟರು. ಹಿಜಾಬ್ ತೆಗೆದಿರಿಸಿ ತರಗತಿಗಳಿಗೆ ಹಾಜರಾಗುವಂತೆ ಮನವೊಲಿಸಿದರು.
ಆದರೆ, ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ತರಗತಿಗಳಿಗೆ ಹಾಜರಾಗುತ್ತೇವೆ. ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು. ಆದರೆ, ಅನುಮತಿ ನೀಡಲಾಗಲಿಲ್ಲ. ಹಿಜಾಬ್ ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಎಲ್ಲ ವಿದ್ಯಾರ್ಥಿನಿಯರು ಶಾಲಾ ಆವರಣದಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
ಹೊನ್ನಾಳಿ ತಹಶೀಲ್ದಾರ್ ಬಸವರಾಜ್ ಕೋಟೂರು, ಪಿಎಸ್ ಐ ಬಸವನಗೌಡ ಬಿರಾದಾರ್ ಇತರರು ಶಾಲೆಗೆ ತೆರಳಿ ವಿದ್ಯಾರ್ಥಿನಿಯರ ಮನವೊಲಿಕೆಗೆ ಸಾಕಷ್ಟು ಪ್ರಯತ್ನ ಪಟ್ಟರೂ ವಿದ್ಯಾರ್ಥಿನಿಯರು ಪಟ್ಟು ಸಡಿಸಲಿಲ್ಲ. ಶಾಲಾ ಆವರಣದಲ್ಲೇ ಹೊರಗೆ ಕುಳಿತಿದ್ದಾರೆ. ಕೆಲ ವಿದ್ಯಾರ್ಥಿಗಳು ಸಹ ವಿದ್ಯಾರ್ಥಿನಿಯರಿಗೆ ಸಾಥ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.