ಕಾವಲುಗಾರರ ಮೇಲಿನ ಪ್ರೀತಿಗೆ ವಿದ್ಯಾರ್ಥಿಗಳ ಪ್ರತಿಭಟನೆ !
Team Udayavani, Jun 29, 2018, 3:36 PM IST
ಚನ್ನಗಿರಿ: ಹಾಸ್ಟೆಲ್ ರಾತ್ರಿ ಪಾಳಿಯ ಕಾವಲುಗಾರರನ್ನು ಕೆಲಸದಿಂದ ತೆಗೆಯಲಾಗಿದೆ ಎಂದು ಯಾರೋ ಹೇಳಿದ ಮಾತು ಕೇಳಿ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ರಾತ್ರಿ ಊಟವನ್ನು ತ್ಯಜಿಸಿ ಪ್ರತಿಭಟನೆ ಮಾಡಲು ಮುಂದಾದ ಘಟನೆ ತಾಲೂಕಿನ ಕೆರೆಬಿಳಚಿ ಗ್ರಾಮದಲ್ಲಿರುವ ಬಿಸಿಎಂ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ರಾತ್ರಿ ನಡೆದಿದೆ.
ಕೆರೆಬಿಳಚಿ ಗ್ರಾಮದಲ್ಲಿರುವ ವಿದ್ಯಾರ್ಥಿ ನಿಲಯದಲ್ಲಿ 5ನೇ ತರಗತಿಯಿಂದ 10 ನೇ ತರಗತಿಯವರೆಗಿನ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಸತಿ ನಿಲಯದಲ್ಲಿ ಜ್ಯೋತಿ ಮತ್ತು ಭಾರತಿ ಎಂಬ ಇಬ್ಬರು ಕಾವಲುಗಾರರು ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದಾರೆ.
ಅವರನ್ನು ತೆಗೆದು ಹಾಕಲಾಗಿದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಮಕ್ಕಳು ಊಟ ತ್ಯಜಿಸಿ ಅದೇ ಕಾವಲುಗಾರರು ನಮಗೆ
ಬೇಕು. ಇಲ್ಲವಾದರೆ ನಾವು ಊಟವನ್ನು ಮಾಡುವುದಿಲ್ಲ ಎಂದು ಪ್ರತಿಭಟನೆಗೆ ಮುಂದಾಗಿದ್ದಾರೆ.
ನಂತರ ಹಾಸ್ಟೆಲ್ ವಾರ್ಡ್‌ನ್ ದೂರವಾಣಿ ಮೂಲಕ ಮಾತನಾಡಿ ಯಾರನ್ನೂ ಕೆಲಸದಿಂದ ತೆಗೆದುಹಾಕಿಲ್ಲ
ಎಂದು ಸ್ಪಷ್ಟಪಡಿಸಿದ ನಂತರ ಮಕ್ಕಳು ಊಟ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಹಾಸ್ಟೆಲ್‌ನಲ್ಲಿ ಜ್ಯೋತಿ ಮತ್ತು ಭಾರತಿ ಎಂಬುವರು ಕಾವಲುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು
ತೆಗೆದುಹಾಕಲಾಗಿದೆ ಎಂದು ಯಾರೋ ಹೇಳಿದ ಮಾತನ್ನು ಕೇಳಿ ಮಕ್ಕಳು ಈ ರೀತಿ ಮಾಡಿದ್ದಾರೆ. ಯಾರನ್ನೂ ತೆಗೆದುಹಾಕಿಲ್ಲ. ಮಕ್ಕಳಿಗೆ ವಿಷಯವನ್ನು ತಿಳಿಸಿದ್ದು ಮಕ್ಕಳು ಊಟ ಮಾಡಲು ಮುಂದಾಗಿದ್ದಾರೆ.
ಮಮತ, ಹಾಸ್ಟೆಲ್‌ವಾರ್ಡನ್.
ಜ್ಯೋತಿ, ಮತ್ತು ಭಾರತಿ ಮೇಡಮ್ ನಮ್ಮನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಾರೆ. ಇವರನ್ನು ಹಾಸ್ಟೆಲ್‌ನಿಂದ ತೆಗೆದುಹಾಕಿದ್ದಾರೆ ಎಂದು ಅವರೇ ಹೇಳಿದ್ದರು. ಅವರನ್ನು ಕೆಲಸದಿಂದ ತೆಗೆದರೆ ನಾವ್ಯಾರೂ ಮಕ್ಕಳು ಹಾಸ್ಟೆಲ್‌ನಲ್ಲಿ ಇರುವುದಿಲ್ಲ.
ತಸ್ಮಿಯಾ, ಹಾಸ್ಟೆಲ್ ವಿದ್ಯಾರ್ಥಿನಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.