ನೀರು ಘಟಕ ನಿರ್ವಹಣೆಗೆ ಪ್ರಸ್ತಾವನೆ ಸಲ್ಲಿಸಿ
Team Udayavani, Jun 23, 2018, 9:38 AM IST
ದಾವಣಗೆರೆ: ಗ್ರಾಮೀಣ ಭಾಗದಲ್ಲಿ ಅಳವಡಿಸುವ ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣಾ ವೆಚ್ಚ ಕೋರಿ
ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಸಂಬಂಧಿತ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.
ಶುಕ್ರವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ವಹಣೆ ಕೊರತೆಯಿಂದ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾಗುವ ಶುದ್ಧ ಕುಡಿಯುವ ನೀರು ಘಟಕಗಳು 6 ತಿಂಗಳನಿಂದ ಒಂದು ವರ್ಷದಲ್ಲಿ ಹಾಳಾಗುತ್ತವೆ. ಘಟಕಗಳ ಮೂಲ ಉದ್ದೇಶ ಈಡೇರಿದಂತಾಗುವುದೇ ಇಲ್ಲ.
ಇತರೆ ಕುಡಿಯುವ ನೀರು ಯೋಜನೆ ಮಾದರಿಯಲ್ಲೇ ಸರ್ಕಾರವೇ ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣಾ
ವೆಚ್ಚ ಭರಿಸುವಂತಾಗಬೇಕು ಎಂದು ದಾವಣಗೆರೆ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕಾಧಿಕಾರಿ ಎಲ್.ಎಸ್.
ಪ್ರಭುದೇವ್ ಕೋರಿದರು.
ಶುದ್ಧ ಕುಡಿಯುವ ನೀರು ಘಟಕ ನಿರ್ಮಾಣ ಜವಾಬ್ದಾರಿ ಹೊಂದಿರುವ ಕೆಆರ್‌ಐಡಿಎಲ್ ಘಟಕ ನಿರ್ಮಿಸಿ, ಗ್ರಾಮ ಪಂಚಾಯತ್‌ಗೆ ವಹಿಸಿದರೆ ಮುಗಿಯಿತು. ಆ ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣೆ ಗ್ರಾಮ ಪಂಚಾಯತಿಗಳ ಜವಾಬ್ದಾರಿಯಾಗಲಿದೆ. ಶುದ್ಧ ಕುಡಿಯುವ ನೀರು ಘಟಕಗಳಿಂದ ಹೆಚ್ಚು ಆದಾಯ ದೊರೆಯುವುದಿಲ್ಲ.
ಮೇಲಾಗಿ ಗ್ರಾಪಂ ಆದಾಯವೂ ಕಡಿಮೆ ಇರುತ್ತದೆ. ಹಾಗಾಗಿ ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣೆ ಕಷ್ಟ
ಆಗುತ್ತದೆ. ಪ್ರಾಯೋಗಿಕವಾಗಿಯೂ ತೊಂದರೆ ಎಂಬುದು ಕುಕ್ಕುವಾಡ ಗ್ರಾಮ ಪಂಚಾಯತಿಯಲ್ಲಿ ಗೊತ್ತಾಗಿದೆ.
ಸರ್ಕಾರವೇ ನಿರ್ವಹಣಾ ವೆಚ್ಚ ಭರಿಸದೇ ಹೋದಲ್ಲಿ ಶುದ್ಧ ಕುಡಿಯುವ ನೀರು ಘಟಕಗಳು ಕೆಲವೇ ದಿನಗಳಲ್ಲಿ ಹಾಳಾಗಿ ಹೋಗುತ್ತವೆ. ಜನರಿಗೆ ಕುಡಿಯುವ ನೀರಿಗೆ ತೊಂದರೆ ಆಗುತ್ತದೆ.
ಲಕ್ಷಾಂತರ ಅನುದಾನ ನಷ್ಟವಾಗುತ್ತದೆ ಎಂದು ಪ್ರಭುದೇವ್ ಸಭೆ ಗಮನಕ್ಕೆ ತಂದರು. ಈ ವಿಚಾರವಾಗಿ ಸಾಕಷ್ಟು ಚರ್ಚೆ ನಡೆದ ನಂತರ ಶುದ್ಧ ಕುಡಿಯುವ ನೀರು ಘಟಕಗಳ ಪ್ರಾರಂಭದಿಂದ ಜನಾರೋಗ್ಯದಲ್ಲಿ ಸುಧಾರಣೆ ಕಂಡು
ಬಂದಿರುವ ಅಂಶ ಒಳಗೊಂಡಂತೆ ಇತರೆ ಅಗತ್ಯ ಮಾಹಿತಿಗಳೊಂದಿಗೆ ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣಾ ವೆಚ್ಚ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಉಮಾಶಂಕರ್ ಸೂಚಿಸಿ, ಈ ಬಾರಿಯ ಬಜೆಟ್ ಸಿದ್ಧತೆ ಮುಗಿದಿದೆ.
ಹಾಗಾಗಿ ಮುಂದಿನ ಬಜೆಟ್‌ನಲ್ಲಾದರೂ ನಿರ್ವಹಣಾ ವೆಚ್ಚ ಒದಗಿಸುವ ಬಗ್ಗೆ ಪ್ರಸ್ತಾಪಿಸಬಹುದು. ನಿರ್ವಹಣಾ ವೆಚ್ಚದ
ಬಗ್ಗೆ ಸಂಬಂಧಿತ ಅಧಿಕಾರಿಗಳ ಜೊತೆ ಚರ್ಚಿಸುವುದಾಗಿಯೂ ತಿಳಿಸಿದರು. ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ಅಶ್ವತಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು
ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.