ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ
Team Udayavani, Jul 10, 2021, 2:14 PM IST
ಜಗಳೂರು: ನಿಯಮ ಬಾಹಿರವಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಆದೇಶ ನೀಡಿರುವ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಅಂಗಡಿ ಪರವಾನಗಿ ರದ್ದುಗೊಳಿಸಿ ಹೊಸ ನೇಮಕಾತಿ ಮಾಡಬೇಕು ಎಂದು ತಾಲೂಕು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಡಿ.ಎಸ್.ಎಸ್ ಸಂಚಾಲಕಮಲೆಮಾಚಿಕೆರೆ ಸತೀಶ್ ಮಾತನಾಡಿ, ಹೊಸಕೆರೆ ಗ್ರಾಮದಲ್ಲಿ ಇತ್ತೀಚೆಗೆ ನೂತನ ನ್ಯಾಯಬೆಲೆ ಅಂಗಡಿ ತೆರೆಯಲು ಪರವಾನಗಿ ನೀಡಿದ್ದು, ನ್ಯಾಯಬೆಲೆ ಅಂಗಡಿ ನಿರ್ವಹಣೆಗೆ ಸಂಬಂಧಿಸಿದಂತೆ ಸಿಬ್ಬಂದಿ ನೇಮಕಾತಿಯಲ್ಲಿ ಅಂಗವಿಕಲರ ಮೀಸಲಾತಿಯಲ್ಲಿ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಅರ್ಹತೆ ಇಲ್ಲದವರನ್ನು ನಿಯಮ ಬಾಹಿರವಾಗಿ ನೇಮಕ ಮಾಡಿದ್ದು, ಕೂಡಲೇ ಈ ನೇಮಕಾತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ನ್ಯಾಯಬೆಲೆ ಅಂಗಡಿ ಪರವಾನಗಿ ಕೋರಿ ಒಟ್ಟು 12 ಅರ್ಜಿಗಳು ಸಲ್ಲಿಕೆಯಾಗಿದ್ದು, ಅದರಲ್ಲಿ ಐವರು ಅಂಗವಿಕಲರು ಇದ್ದಾರೆ. ಇವರ ಪೈಕಿ ಅರ್ಹತೆ ಇರುವವರ ಅರ್ಜಿ ಪರಿಗಣಿಸದೆ ಅರ್ಹತೆ ಇಲ್ಲದವರ ಅರ್ಜಿ ಮಾನ್ಯ ಮಾಡಲಾಗಿದೆ. ಸೂಕ್ತ ಗೋದಾಮು ಮತ್ತು ಅಗತ್ಯ ಸಂಗ್ರಹ ಸ್ಥಳ ಪರಿಶೀಲನೆ ಮಾಡದೆ ಅಧಿಕಾರಿಗಳು ಅರ್ಜಿ ಪರಿಗಣಿಸಿರುವುದರ ಹಿಂದೆ ರಾಜಕೀಯ ಒತ್ತಡ ಮತ್ತು ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಮೇಲ್ನೊಟಕ್ಕೆ ಕಂಡು ಬರುತ್ತಿದೆ. ಈ ಬಗ್ಗೆ ತಹಶೀಲ್ದಾರರು ಖುದ್ದು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಂಡು ಸೂಕ್ತಅಭ್ಯರ್ಥಿಗೆ ಪರವಾನಗಿ ನೀಡಬೇಕು ಎಂದು ಒತ್ತಾಯಿಸಿದರು
ಡಿ.ಎಸ್.ಎಸ್ ಪದಾಧಿಕಾರಿಗಳಾದ ಹನುಮಂತಪ್ಪ ಕರಿಬಸಪ್ಪ ಹೊಸಕೆರೆ, ರುದ್ರೇಶ್, ಪ್ರವೀಣ, ಸತೀಶ್, ಬಸವರಾಜ, ಮಂಜುನಾಥ, ಮಹಾಂತೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.