ಮತದಾರ ಪಟ್ಟಿ ಪರಿಷ್ಕರಣೆಗೆ ನಿಯಮಾನುಸಾರ ಕ್ರಮ ಕೈಗೊಳ್ಳಿ
Team Udayavani, Aug 25, 2020, 6:13 PM IST
ದಾವಣಗೆರೆ: ಚುನಾವಣಾ ಆಯೋಗ ಜಿಲ್ಲೆಯ ಮತದಾರರ ಪಟ್ಟಿ ಸಮಗ್ರ ಸ್ವರೂಪದ ಪರಿಷ್ಕರಣೆ ಕಾರ್ಯದ ವೇಳಾಪಟ್ಟಿ ಪ್ರಕಟಿಸಿದ್ದು ಈ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, 10-08-2020 ರಿಂದ 31-08-2020 ವರೆಗೆ ಪೂರ್ವ ಪರಿಷ್ಕರಣೆ ಚಟುವಟಿಕೆ ಕೈಗೊಳ್ಳಬೇಕು. ದಿ: 16-11-2020 ಕ್ಕೆ ಸಮಗ್ರ ಮತದಾರ ಪಟ್ಟಿಯನ್ನು ಪ್ರಕಟಿಸಬೇಕು. 16-11-2020 ರಿಂದ 15-12-2020 ರವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸುವ ಅವಧಿಯಾಗಿದೆ ಎಂದು ತಿಳಿಸಿದರು..
ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ಎರಡು ಶನಿವಾರ ಮತ್ತು ಭಾನುವಾರಗಳಂದು ವಿಶೇಷ ಪ್ರಚಾರ ಕೈಗೊಳ್ಳಬೇಕು. 15-01-2021 ಕ್ಕೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಬೇಕಾಗಿದ್ದು ಈ ನಿಟ್ಟಿನಲ್ಲಿ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳು ನಿಯಮಾನುಸಾರ ಕ್ರಮಗಳನ್ನು ಕೈಗೊಂಡು ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಸಮಗ್ರ ಸ್ವರೂಪದ ಪರಿಷ್ಕರಣೆ ಕಾರ್ಯವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಬೇಕು. ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿದ್ದು ಪ್ರತಿಯೊಬ್ಬ ಮತದಾರನು ಕರಡು ಮತದಾರರ ಪಟ್ಟಿಯಲ್ಲಿ ತನ್ನ ಹೆಸರಿನ ನೋಂದಣಿ ಕುರಿತು ಪರಿಶೀಲನೆಗೆ ಅವಕಾಶ ಕಲ್ಪಿಸಲಾಗಿದೆ. ಎಪಿಕ್ ಹೊಂದಿರದ ಮತದಾರರು ಹಾಗೂ ಹಿಂದಿನ ಸಾಲಿನ ಮತದಾರರ ಪಟ್ಟಿಯಲ್ಲಿ ಹೆಸರಿದ್ದ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವ ಬಗ್ಗೆ ಮತ್ತೂಮ್ಮೆ ಪರಿಶೀಲನೆ ನಡೆಸಿ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ದೃಢಪಡಿಸಿಕೊಳ್ಳಬೇಕಾಗುತ್ತದೆ ಎಂದರು.
ಒಂದು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಮಾತ್ರ ಹೆಸರು ನೋಂದಾಯಿಸಿಕೊಂಡಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು. ಮತದಾರರ ಪಟ್ಟಿಯಲ್ಲಿ ಈವರೆಗೆ ನೋಂದಣಿಯಾಗದ ಹಾಗೂ 01-01-2020 ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವ ಮತದಾರರು ತಮ್ಮ ಹೆಸರನ್ನು ನೋಂದಾಯಿಸಲು ನಿರ್ದಿಷ್ಟಪಡಿಸಿದ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು ಎಂದರು.
ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಎಲ್ಲ ವಿಧಾನ ಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.