ಪ್ರಥಮ ಪಿಯು ಪರೀಕ್ಷಾ ವೇಳಾಪಟ್ಟಿಗೆ ಆಕ್ಷೇಪ
Team Udayavani, Dec 16, 2018, 3:24 PM IST
ದಾವಣಗೆರೆ: ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ಸಂಬಂಧ ಪಿ.ಯು ಮಂಡಳಿ ಕೈಗೊಂಡಿರುವ ನಿರ್ಧಾರ ಖಂಡಿಸಿ ಶನಿವಾರ ಎಐಡಿಎಸ್‌ಓ ಕಾರ್ಯಕರ್ತರು ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದಾರೆ.
ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಜ. 31ರಿಂದ ವಾರ್ಷಿಕ ಪರೀಕ್ಷೆ ಆರಂಭವಾಗಲಿದೆ ಎಂದು ಪಿಯು ಮಂಡಳಿ ಪ್ರಕಟಿಸಿದೆ. ಇದಕ್ಕೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೂ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಏಕೆಂದರೆ, ಅನೇಕ ಕಾಲೇಜುಗಳಲ್ಲಿ ಪಾಠ-ಪ್ರವಚನಗಳು ಪೂರ್ಣಗೊಂಡಿಲ್ಲ. ಮೇಲಾಗಿ ವಿಜ್ಞಾನ ವಿದ್ಯಾರ್ಥಿಗಳಿಗೆ ಪ್ರಯೋಗಾಲಯದ ಪರೀಕ್ಷೆ ಸಿದ್ಧತೆಗೆ ತೊಂದರೆಯಾಗುತ್ತದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.
ಎಸ್ಸೆಸ್ಸೆಲ್ಸಿ ಅನುತ್ತೀರ್ಣರಾದವರು ಜೂನ್‌ನಲ್ಲಿ ಸಪ್ಲಿಮೆಂಟರಿ ಪರೀಕ್ಷೆ ಬರೆದು ಆಗಸ್ಟ್ ತಿಂಗಳಲ್ಲಿ ಪ್ರಥಮ ಪಿ.ಯು.ಸಿ ಪ್ರವೇಶ ಪಡೆದಿರುತ್ತಾರೆ. ಆ ವಿದ್ಯಾರ್ಥಿಗಳು ಸೇರ್ಪಡೆಯಾದ ಕೇವಲ 5 ತಿಂಗಳ ಅಂತರದಲ್ಲೇ ಪಿ.ಯು.ಸಿ ವಾರ್ಷಿಕ ಪರೀಕ್ಷೆ ನಿಗದಿ ಪಡಿಸಿರುವುದು ನಿಜಕ್ಕೂ ಅಸಮಂಜಸ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಈ ಹಿಂದೆ ಫೆಬ್ರವರಿ ಮೂರನೇ ವಾರದಲ್ಲಿ ಪರೀಕ್ಷಾ ದಿನಾಂಕ ನಿಗದಿಪಡಿಸುತ್ತಿದ್ದಂತೆ, ಈ ಬಾರಿಯೂ ಅದೇ ರೀತಿ ಪರೀಕ್ಷಾ ವೇಳಾಪಟ್ಟಿ ನಿಗದಿಗೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಎಐಡಿಎಸ್‌ಓ ಸಂಘಟನೆಯ ಸಂಗೀತಾ, ಸಂತೋಷ್, ಸುಚಿತ್ರಾ, ರೇಣುಕಾ, ಪುಷ್ಪಾ, ಸೌಮ್ಯ, ಪೂಜಾ, ಶೃತಿ, ನಾಗಜ್ಯೋತಿ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.