ಸಹಾಯಧನ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದರೆ ದಾಖಲೆ ನೀಡಿ
Team Udayavani, Jun 27, 2020, 8:41 AM IST
ಜಗಳೂರು: ಮೆಕ್ಕೆಜೋಳ ಬೆಳೆದ ರೈತರ ಹೆಸರು ಪಟ್ಟಿಯಿಂದ ಬಿಟ್ಟು ಹೋಗಿದ್ದರೆ ಅಂತಹ ರೈತರು ಆಯಾ ಗ್ರಾಪಂ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳಿಗೆ ದಾಖಲೆ ನೀಡಿ 5 ಸಾವಿರ ರೂ ಪ್ರೋತ್ಸಾಹಧನ ಪಡೆದುಕೊಳ್ಳಬಹುದಾಗಿದೆ ತಾಪಂ ಇಒ ಬಿ.ಮಲ್ಲನಾಯ್ಕ ಹೇಳಿದರು.
ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲೂಕು ಪಂಚಾಯತಿ ಸಾಮಾನ್ಯ ಸಭೆ ನಡೆಯಿತು. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಲೊಕೇಶ್ ವರದಿ ಮಂಡಿಸಿ ತಾಲೂಕಿನ ಕೆಲವೆಡೆ ಕಳೆದ ಎರಡು ದಿನಗಳಿಂದ ಮಳೆ ಆರಂಭವಾಗಿದ್ದು ಮೆಕ್ಕೆಜೋಳ, ಶೇಂಗಾ ಬಿತ್ತನೆ ಕಾರ್ಯ ಬಿರುಸಿನಿಂದ ಸಾಗಿದೆ. ರೈತ ಸಂಪರ್ಕ ಕೇಂದ್ರದಲ್ಲಿ ಈಗಾಗಲೇ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದ್ದು ಕೆಲವೆಡೆ ಮೆಕ್ಕೆಜೊಳದ ಬೆಳೆಗೆ ಲದ್ದಿಹುಳು ಬಾಧೆ ಕಾಣಿಸಿಕೊಂಡಿದ್ದು ಮುಂಜಾಗ್ರತಾ ಕ್ರಮವಾಗಿ ಕೃಷಿ ಅಧಿಕಾರಿಗಳು ಸಲಹೆ ನೀಡಿದ ಕ್ರಿಮಿನಾಶಕ ಸಿಂಪರಣೆ ಮಾಡಬೇಕು ಎಂದರು.
ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಹೇಮೋಜಿನಾಯ್ಕ ವರದಿ ಮಂಡಿಸುತ್ತಿದ್ದಂತೆಯೇ ಈಗಾಗಲೇ ನಿಬಗೂರು ಚಿಕ್ಕಮ್ಮನಹಟ್ಟಿ, ಜಗಳೂರು ಗೊಲ್ಲರಹಟ್ಟಿ, ಬಸವನಕೋಟೆ, ಹುಚ್ಚವ್ವನಹಳ್ಳಿ, ಹನುಮಂತಾಪುರ ಸೇರಿದಂತೆ ಬಹುತೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದರೂ ಇಲಾಖೆಯವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸದಸ್ಯರು ಆರೋಪಿಸಿದರು.
ಖಾಸಗಿ ಬೋರ್‌ವೆಲ್ ಮೂಲಕ ಕೆಲವು ಹಳ್ಳಿಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ನೀರಿನ ಸಮಸ್ಯೆ ಇರುವ ಸೊಕ್ಕೆ, ಯರಲಕಟ್ಟೆ, ಚಿಕ್ಕಬಂಟನಹಳ್ಳಿ, ಗುರುಸಿದ್ಧಾಪುರ ಸೇರಿದಂತೆ ಮತ್ತಿತರೆ ಗ್ರಾಮಗಳಲ್ಲಿ ಸಹ ತೀವ್ರ ನೀರಿನ ಸಮಸ್ಯೆ ಉಂಟಾಗಿದ್ದರಿಂದ ಬೋರ್ ವೆಲ್ ಕೊರೆಸಿ ಪೈಪ್‌ಲೈನ್ ಅಳವಡಿಸಲಾಗುತ್ತಿದೆ ಎಂದರು.
ಪ. ವರ್ಗಗಳ ಕಲ್ಯಾಣಾಧಿಕಾರಿ ಬಿ.ಮಹೇಶ್ವರಪ್ಪ ವರದಿ ಮಂಡಿಸಿ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾದ 7 ಮಂದಿಗೆ ಶುಚಿ ಮತ್ತು ರುಚಿ ಊಟ ನೀಡಲಾಗುತ್ತಿದ್ದು ಯಾವುದೇ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು. ತಾಲೂಕು ವೈದ್ಯಾಧಿಕಾರಿ ನಾಗರಾಜ್ ಮಾತನಾಡಿ, ಕೊಟ್ಟೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ತಾಲೂಕಿನ ಗೌರಿಪುರ ಗ್ರಾಮದ ವ್ಯಕ್ತಿಗೆ ಕೋವಿಡ್ ಸೋಂಕು ಕಂಡು ಬಂದಿದ್ದು, ಅವರ ಕುಟುಂಬ ವರ್ಗದವರನ್ನು ಕ್ವಾರಂಟೈನ್‌ನ್‌ನಲ್ಲಿ ಇರಿಸಲಾಗಿದೆ ಎಂದರು.
ತಾಪಂ ಅಧ್ಯಕ್ಷೆ ಮಂಜುಳಾ ಶಿವಾನಂದಪ್ಪ, ಉಪಾಧ್ಯಕ್ಷ ಮುದೇಗೌಡ್ರು ಬಸವರಾಜಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ದೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.