ಶ್ರದ್ಧೆಯಿಂದ ಜವಾಬ್ದಾರಿ ನಿರ್ವಹಿಸಿ


Team Udayavani, Sep 6, 2020, 5:28 PM IST

ಶ್ರದ್ಧೆಯಿಂದ ಜವಾಬ್ದಾರಿ ನಿರ್ವಹಿಸಿ

ದಾವಣಗೆರೆ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿರ್ವಹಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್‌ ಕರೆ ನೀಡಿದರು.

ನಗರದ ಸರ್ಕಾರಿ ನೌಕರರಸಮುದಾಯ ಭವನದಲ್ಲಿ ಶನಿವಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ ಜನ್ಮದಿನದ ಪ್ರಯುಕ್ತ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶ ಪ್ರಗತಿಯತ್ತ ಸಾಗಲು ಶಿಕ್ಷಕರೇ ಕಾರಣ. ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯ ಹಾಗೂ ಅರಿವು ಬೆಳೆಸುವ ಶಕ್ತಿ ಶಿಕ್ಷಕರಲ್ಲಿದೆ. ಶಿಕ್ಷಣ ಹಾಗೂ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರಮುಖ್ಯವಾಗಿದ್ದು, ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ಹಿಂದೆ ಗುರು, ಮುಂದೆ ಗುರಿ ಇರಬೇಕು. ಆಗ ಮಾತ್ರ ಜೀವನದಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯ. ಒಬ್ಬ ವ್ಯಕ್ತಿಯ ಜೀವನದಲ್ಲಿ ತಂದೆ, ತಾಯಿ ಹಾಗೂ ಗುರುಗಳು ಬಹಳ ಮುಖ್ಯ. ರಾಧಾಕೃಷ್ಣನ್‌ ಅವರು ಒಬ್ಬ ಶಿಕ್ಷಕರಾಗಿ, ಶಿಕ್ಷಣ ತಜ್ಞರಾಗಿ, ರಾಷ್ಟ್ರಪತಿಯಾಗಿ ಹಲವಾರು ಹುದ್ದೆ ಅಲಂಕರಿಸುವ ಮೂಲಕ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಘನತೆ ಹೆಚ್ಚಿಸಿದ್ದಾರೆ ಎಂದು ಸ್ಮರಿಸಿದರು. ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಶಿಲ್ಪಿ ಹೇಗೆ ಕಲ್ಲನ್ನು ಕೆತ್ತಿ ಕೆತ್ತಿ ವಿಗ್ರಹ ಮಾಡುತ್ತಾನೋ ಅದೇ ರೀತಿ ಶಿಕ್ಷಕರು ವಿದ್ಯಾರ್ಥಿಗಳನ್ನು ತಿದ್ದಿ ಸಮಾಜದಲ್ಲಿ ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸಬೇಕು ಎಂದರು.

ಮಾಯಕೊಂಡ ಶಾಸಕ ಪ್ರೊ| ಲಿಂಗಣ್ಣ ಮಾತನಾಡಿ, ಶಿಕ್ಷಕ ವೃತ್ತಿ ಬಹಳ ಶ್ರೇಷ್ಠವಾದ ವೃತ್ತಿ. ಸಮಾಜದಲ್ಲಿ ಬದಲಾವಣೆ ಆಗಬೇಕಾದರೆ ಶಿಕ್ಷಕನ ಪಾತ್ರ ಅತಿ ಮುಖ್ಯವಾಗಿದೆ. ಯಾವುದೇ ಭೇದವಿಲ್ಲದೆ, ರಾಜಕೀಯ ಒತ್ತಡಕ್ಕೆಮಣಿಯದೆ ಎಲ್ಲ ವಿದ್ಯಾರ್ಥಿಗಳನ್ನು ತಿದ್ದುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ 23 ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೋವಿಡ್‌ ಕಾರಣದಿಂದಾಗಿ ಆಮಂತ್ರಿತ ಶಿಕ್ಷಕರ ಸಮ್ಮುಖದಲ್ಲಿ ಸಮಾರಂಭ ಸರಳವಾಗಿ ನಡೆಯಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀಪಾ ಜಗದೀಶ್‌, ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ ನಾಯ್ಕ, ತಾಪಂ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಜಿಪಂ ಸಿಇಒ ಪದ್ಮಾ ಬಸವಂತಪ್ಪ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ರಾಜೀವ್‌, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್‌ ಮುದಜ್ಜಿ, ದಾವಣಗೆರೆ ತಾಲೂಕು ತಹಶೀಲ್ದಾರ್‌ ಗಿರೀಶ್‌ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.