ನಾಯಕನ ಆಯ್ಕೆಗೆ ಸೂಕ್ತ ಸಮಯ

Team Udayavani, Mar 15, 2019, 7:00 AM IST

dvg-2.jpg

ಹೊನ್ನಾಳಿ: ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಮತದಾರ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಬೇಕು ಎಂದು ದಾವಣಗೆರೆ ಲೋಕಸಭಾ ಚುನಾವಣೆ ವ್ಯಾಪ್ತಿಯ ಹೊನ್ನಾಳಿ ವಿಧಾನಸಭಾ ಕ್ಷೇತ್ರ ಸಹಾಯಕ ಚುನಾವಣಾಧಿಕಾರಿ ಸುರೇಶ್‌ರೆಡ್ಡಿ ಹೇಳಿದರು.

ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಚುನಾವಣಾ ಜನ ಜಾಗೃತಿ ಮತ್ತು ಮತದಾನ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿ 5 ವರ್ಷಕ್ಕೊಮ್ಮೆ ಬರುವ ಚುನಾವಣಾ ಪ್ರಕ್ರಿಯಿಯೆಯಲ್ಲಿ ಮತದಾರ ಬಹು ಮುಖ್ಯ ಪಾತ್ರ ವಹಿಸುತ್ತಾನೆ. ತನ್ನ ನಾಯಕನನ್ನು ಆರಿಸಿಕೊಳ್ಳಲು ಸೂಕ್ತ ಸಮಯ ಇದಾಗಿದ್ದು, ಮತದಾನದಿಂದ ತಪ್ಪಿಸಿಕೊಳ್ಳಬಾರದು ಎಂದು ಹೇಳಿದರು.

ಅನೇಕರು ಮತದಾನ ಕೇಂದ್ರಕ್ಕೆ ಆಗಮಿಸಲು ಮೀನ ಮೇಷ ಮಾಡುತ್ತಾರೆ. ಇದು ಸಲ್ಲದು ಎಂದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಮತದಾನ ಪ್ರಕ್ರಿಯೆ ಮಹತ್ವ ಪಡೆದದ್ದು ಎಲ್ಲರೂ ಮತದಾನ ಮಾಡಿದಾಗ ಚುನಾವಣೆಗೆ ಅರ್ಥ ಬರುತ್ತದೆ ಎಂದು ಹೇಳಿದರು.

ಸರ್ಕಾರಿ, ಅರೆಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ಮತದಾನಕ್ಕೆ ಅನುಕೂಲವಾಗಲೆಂದು ಚುನಾವಣಾ ದಿನಾಂಕದಂದು ರಜೆ ನೀಡಲಾಗುತ್ತದೆ. ಇದರಿಂದ ಮತದಾನ ಶೇ. ನೂರರಷ್ಟು ಆಗಬೇಕು ಎಂದು ಹೇಳಿದರು. ತಹಶೀಲ್ದಾರ್‌ ಮಲ್ಲಿಕಾರ್ಜುನ, ಪ.ಪಂ ಮುಖ್ಯಾಧಿಕಾರಿ ಎಸ್‌.ಆರ್‌.ವೀರಭದ್ರಯ್ಯ ಮಾತನಾಡಿದರು.

ಬಿಎಲ್‌ಒಗಳಿಗೆ ತರಬೇತಿ
ಜಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನ ಪ್ರಮಾಣದಲ್ಲಿ ಹೆಚ್ಚಳ ಮಾಡುವ ಸಲುವಾಗಿ ಬಿಎಲ್‌ಓ ಗಳು ಹಾಗೂ ಮತದಾರ ಸಾಕ್ಷರತಾ ಸಂಘಗಳ ಸಂಚಾಲಕರಿಗೆ ಎರಡು ದಿನದ ಕಾರ್ಯಾಗಾರವನ್ನು ಪಟ್ಟಣದ ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಾಕ್ಷರತಾ ಸಂಘಗಳ ಸಂಚಾಲಕರಾದ ಸಮಾಜ ವಿಜ್ಞಾನ ಶಿಕ್ಷರು, ರಾಜ್ಯಶಾಸ್ತ್ರ ಉಪನ್ಯಾಸಕರು ಮತ್ತು ಬೂತ್‌ ಮಟ್ಟದ ಬಿಎಲ್‌ ಒಗಳಿಗೆ ಮತಯಂತ್ರಗಳ ಬಳಕೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು. ಮತದಾನದ ಮಹತ್ವ ಕುರಿತ ಮಸ್ತಿ ದೋಸ್ತಿ ಎಂಬ ಕಿರು ಚಿತ್ರ ಹಾಗೂ ಹಳ್ಳಿಗಳಲ್ಲಿ ಬೀದಿ ನಾಟಕದ ಮೂಲಕ ಮತದಾನ ಮಾಡುವ ಬಗ್ಗೆ ಜನ ಜಾಗೃತಿ ಮೂಡಿಸಬೇಕು. ಸಾರ್ವಜನಿಕರಲ್ಲಿ ಸಂವಿಧಾನ ನೀಡಿರುವ ಮತದಾನದ ಹಕ್ಕಿನ ಬಗ್ಗೆ ಅರಿವು ಮೂಡಿಸಿ, ಮತದಾನ ಪ್ರಮಾಣದಲ್ಲಿ ಹೆಚ್ಚಳ ಮಾಡಬೇಕು ಎಂದು ತರಬೇತುದಾರರು ತಿಳಿಸಿದರು.

ಕಾರ್ಯಾಗಾರದಲ್ಲಿ ಬ್ಲಾಕ್‌ ಮಟ್ಟದ 130 ಬಿಎಲ್‌ಒಗಳು ಭಾಗವಹಿಸಿದ್ದರು. ಇಸಿಒ ಶಿವಣ್ಣ, ಕೊಟ್ರೇಶ್‌, ಕೃಷ್ಣಪ್ಪ, ಮಂಜಣ್ಣ ಸೇರಿದಂತೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಹಾಜರಿದ್ದರು. 

ರೈತರಿಗೆ ಮತದಾನ ಜಾಗೃತಿ
ಹರಿಹರ: ವಿವಿಧ ಕೆಲಸ ಕಾರ್ಯಗಳಿಗೆಂದು ನಗರದ ಕೃಷಿ ಇಲಾಖೆಗೆ ಆಗಮಿಸಿದ್ದ ರೈತರಿಗೆ ಮತದಾನದ ಜಾಗೃತಿ ಮೂಡಿಸಲಾಯಿತು. ರೈತರನ್ನು ಕಚೇರಿ ಆವರಣದಲ್ಲಿ ಒಗ್ಗೂಡಿಸಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಪಿ.ಗೋವರ್ಧನ್‌, ಬರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೆ ಮತ ಚಲಾಯಿಸುವಂತೆ ಮನವಿ ಮಾಡಿದರು.

ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು, ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆ. ಮತ್ತು ಚುನಾವಣೆಯಲ್ಲಿ ನಿರ್ಭೀತರಾಗಿ ಮತ ಚಲಾಯಿಸುತ್ತೇವೆ ಎಂದು ರೈತರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕೃಷಿ ಅಧಿಕಾರಿ ಜೀವನ್‌ ಸಾಬ್‌, ಮಲ್ಲಿಕಾರ್ಜುನ ಹುಣಿಸಿಕಟ್ಟಿ, ದೇವೇಂದ್ರಪ್ಪ, ಪ್ರಸಾದ್‌ ಗಂಗನರಸಿ ಮತ್ತಿತರರಿದ್ದರು.

ಮತದಾನ ಜಾಗೃತಿಗೆ ರಂಗೋಲಿ ಸ್ಪರ್ಧೆ
ಹರಿಹರ: ನಗರದ ವಿದ್ಯಾದಾಯಿನಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗುರುವಾರ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮತದಾನ ಜಾಗೃತಿ ಮೂಡಿಸಲು ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಬಿ.ಇಡಿ. ಪ್ರಶಿಕ್ಷಣಾರ್ಥಿಗಳು ಮತದಾನದ ಮಹತ್ವ ಸಾರುವ ಭಿನ್ನ ಭಿನ್ನ ಚಿತ್ತಾಕರ್ಷಕ ರಂಗೋಲಿ ಬಿಡಿಸಿದ್ದರು. ಪ್ರಜಾಪ್ರಭುತ್ವದ ಯಶಸ್ಸಿನಲ್ಲಿ ಮತದಾನದ ಪಾತ್ರವನ್ನು ಸಾರುವ ಘೋಷ ವಾಕ್ಯಗಳ ರಂಗೋಲಿಗಳು ಎಲ್ಲರ ಗಮನ ಸೆಳೆದವರು. ಅತ್ಯುತ್ತಮವಾಗಿ ರಂಗೋಲಿ ರಚಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ವಿದ್ಯಾಸಂಸ್ಥೆಯ ಅಧ್ಯಕ್ಷ ಡಿ.ಜಿ.ರಘುನಾಥ್‌, ಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಸದೃಢ ಭಾರತ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಕರೆ ನೀಡಿದರು. 

ವಿದ್ಯಾರ್ಥಿನಿಯರಾದ ಮಧು ಆರ್‌.ಡಿ., ಮಂಗಳಾ ಎಚ್‌. ಪ್ರಥಮ ಸ್ಥಾನವನ್ನು, ನಂದಿನಿ ಜಿ.ಎಸ್‌., ನಿಲುಫರ್‌ ಕಣನಕೇರಿ, ಲತಾ, ವೀಣಾ ದ್ವಿತೀಯ ಸ್ಥಾನ, ರೂಪ ಎಂ.ಎಸ್‌., ಸಹನಾ ಎಂ. ತೃತೀಯ ಸ್ಥಾನ ಗಳಿಸಿದರು.

ಬಿಎಲ್‌ಒಗಳಿಗೆ ತರಬೇತಿ
ಜಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನ ಪ್ರಮಾಣದಲ್ಲಿ ಹೆಚ್ಚಳ ಮಾಡುವ ಸಲುವಾಗಿ ಬಿಎಲ್‌ಓ ಗಳು ಹಾಗೂ ಮತದಾರ ಸಾಕ್ಷರತಾ ಸಂಘಗಳ ಸಂಚಾಲಕರಿಗೆ ಎರಡು ದಿನದ ಕಾರ್ಯಾಗಾರವನ್ನು ಪಟ್ಟಣದ ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಾಕ್ಷರತಾ ಸಂಘಗಳ ಸಂಚಾಲಕರಾದ ಸಮಾಜ ವಿಜ್ಞಾನ ಶಿಕ್ಷರು, ರಾಜ್ಯಶಾಸ್ತ್ರ ಉಪನ್ಯಾಸಕರು ಮತ್ತು ಬೂತ್‌ ಮಟ್ಟದ ಬಿಎಲ್‌ ಒಗಳಿಗೆ ಮತಯಂತ್ರಗಳ ಬಳಕೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು. ಮತದಾನದ ಮಹತ್ವ ಕುರಿತ ಮಸ್ತಿ ದೋಸ್ತಿ ಎಂಬ ಕಿರು ಚಿತ್ರ ಹಾಗೂ ಹಳ್ಳಿಗಳಲ್ಲಿ ಬೀದಿ ನಾಟಕದ ಮೂಲಕ ಮತದಾನ ಮಾಡುವ ಬಗ್ಗೆ ಜನ ಜಾಗೃತಿ ಮೂಡಿಸಬೇಕು. ಸಾರ್ವಜನಿಕರಲ್ಲಿ ಸಂವಿಧಾನ ನೀಡಿರುವ ಮತದಾನದ ಹಕ್ಕಿನ ಬಗ್ಗೆ ಅರಿವು ಮೂಡಿಸಿ, ಮತದಾನ ಪ್ರಮಾಣದಲ್ಲಿ ಹೆಚ್ಚಳ ಮಾಡಬೇಕು ಎಂದು ತರಬೇತುದಾರರು ತಿಳಿಸಿದರು.

ಕಾರ್ಯಾಗಾರದಲ್ಲಿ ಬ್ಲಾಕ್‌ ಮಟ್ಟದ 130 ಬಿಎಲ್‌ಒಗಳು ಭಾಗವಹಿಸಿದ್ದರು. ಇಸಿಒ ಶಿವಣ್ಣ, ಕೊಟ್ರೇಶ್‌, ಕೃಷ್ಣಪ್ಪ, ಮಂಜಣ್ಣ ಸೇರಿದಂತೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಹಾಜರಿದ್ದರು.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.