ನಗರದಲ್ಲಿ ಬೃಹತ್ ಯೋಗ ಜಾಥಾ
Team Udayavani, Jun 18, 2018, 12:50 PM IST
ದಾವಣಗೆರೆ: ಜೂ.21 ರಂದು ನಡೆಯಲಿರುವ ನಾಲ್ಕನೇ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಭಾನುವಾರ ಬೃಹತ್ ಯೋಗ ಜಾಥಾ ನಡೆಯಿತು.
ಯೋಗದ ಮಹತ್ವ, ಜೀವನದಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಸಾರ್ವಜನಿಕರು, ಯುವ, ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಜೊತೆಗೆ ವಿಶ್ವ ಯೋಗ ದಿನವನ್ನು ವಿನೂತನವಾಗಿ ಆಚರಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಜಿಲ್ಲಾ ಯೋಗ ಒಕ್ಕೂಟ, ತಪೋವನ ಹಾಗೂ ಅಶ್ವಿನಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಪತಂಜಲಿ ಯೋಗ ಸಂಸ್ಥೆ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ, ರಾಷ್ಟ್ರೀಯ ಸೇವಾದಳ, ಎಎಫ್‌ಐ, ಎನ್‌ಐಎಂಎ,ಎನ್‌ಸಿಸಿ, ಎನ್‌ಎಸ್‌ಎಸ್, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಮತ್ತು ಇಲಾಖೆಗಳು ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮದ ಭಾಗವಾಗಿ ಹಮ್ಮಿಕೊಂಡಿದ್ದ ಯೋಗ ಜಾಥಾ ಸಾರ್ವಜನಿಕರ ಗಮನ ಸೆಳೆಯಿತು.
ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಜಾಥಾಕ್ಕೆ ಚಾಲನೆ ನೀಡಿದರು. ಮೋತಿ ವೀರಪ್ಪ ಕಾಲೇಜಿನಿಂದ ಪ್ರಾರಂಭವಾದ
ಬೃಹತ್ ಯೋಗ ಜಾಥಾ, ವಿದ್ಯಾರ್ಥಿ ಭವನ ವೃತ್ತ, ಕೆಇಬಿ ವೃತ್ತ, ಜಯದೇವ ವೃತ್ತ, ಮಹಾನಗರಪಾಲಿಕೆ, ಮಹಾತ್ಮಗಾಂಧಿ ವೃತ್ತ, ಪಿಜೆ ಹೋಟೆಲ್, ಎವಿಕೆ ಕಾಲೇಜು ರಸ್ತೆ, ರಾಂ ಅಂಡ್ ಕೋ ವೃತ್ತ, ಚರ್ಚ್ ರಸ್ತೆ ಮೂಲಕ ಮೋತಿ ವೀರಪ್ಪ ಕಾಲೇಜು ಆವರಣದಲ್ಲಿ ಮುಕ್ತಾಯಗೊಂಡಿತು.
ವಿಶ್ವ ಯೋಗ ದಿನಾಚರಣೆ, ಮಹತ್ವ, ಜೀವನದಲ್ಲಿ ಯೋಗ ಅಳವಡಿಕೆ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಮ್ಮ ನಡಿಗೆ ಆರೋಗ್ಯದೆಡೆಗೆ… ಎಂಬ ಘೋಷವಾಕ್ಯ, ಯೋಗದ ಮಹತ್ವ ಸಾರುವ ಘೋಷಣೆ ಮೊಳಗಿದವು. ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಯೋಗ ಜಾಗೃತಿ ರಥ ಅತ್ಯಾಕರ್ಷಕವಾಗಿತ್ತು.
ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ದಾವಣಗೆರೆ ಕೇಂದ್ರ ಸಂಚಾಲಕಿ ಬಿ.ಕೆ. ಲೀಲಾಜೀ, ಜಿಲ್ಲಾ ಯೋಗ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎನ್. ವಾಸುದೇವ ರಾಯ್ಕರ್, ಜಿಲ್ಲಾ ಆಯುಷ್ ಅಧಿಕಾರಿ ಡಾ| ಯು. ಸಿದ್ದೇಶ್,
ಜಯಣ್ಣ ಬಾದಾಮಿ, ಅನಿಲ್ ರಾಯ್ಕರ್, ರಾಜು ಎಲ್. ಬದ್ಧಿ ಒಳಗೊಂಡಂತೆ ವಿವಿಧ ಯೋಗ ಸಂಸ್ಥೆ ಪದಾಧಿಕಾರಿಗಳು, ಯೋಗಾಸಕ್ತರು ಪಾಲ್ಗೊಂಡಿದ್ದರು.
ಯೋಗ ದಿನಾಚರಣೆಯ ಅಂಗವಾಗಿ ಇಂದು ಸೋಮವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 123 ರವರೆಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯೋಗ ಮತ್ತು ಆರೋಗ್ಯ… ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ಮೊ: 94496-29061, 98440-40813 ಗೆ ಸಂಪರ್ಕಿಸುವಂತೆ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.