ಬಿಜೆಪಿ ಸರ್ಕಾರ ವಿಫಲ
Team Udayavani, Mar 11, 2019, 8:56 AM IST
ದಾವಣಗೆರೆ: ಬಿಜೆಪಿ ನೇತೃತ್ವದ ಸರ್ಕಾರ ಯುವ ಜನಾಂಗಕ್ಕೆ ಉದ್ಯೋಗ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆನಗೋಡು ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಎಸ್. ಬಸವಂತಪ್ಪ ದೂರಿದ್ದಾರೆ.
ಭಾನುವಾರ ನಲ್ಕುದುರೆ ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆದ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಬೂತ್ ಮಟ್ಟದ ಲೋಕಸಭಾ ಚುನಾವಣಾ ಸಿದ್ಧತಾ ಶಿಬಿರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಯುವ ಜನಾಂಗಕ್ಕೆ ಉದ್ಯೋಗ ಒದಗಿಸುವ ಮೂಲಕ ದೇಶದ ಸಂಪತ್ತು ಸೃಷ್ಟಿಗೆ ಯುವ ಜನಾಂಗವನ್ನು ಬಳಸಿಕೊಳ್ಳಲೇ ಇಲ್ಲ ಎಂದು ದೂರಿದರು.
ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಯುವ ಜನಾಂಗದ ಅಭ್ಯುದಯಕ್ಕೆ ಹಲವಾರು ಯೋಜನೆ ಜಾರಿಗೆ ತಂದಿದೆ. ಯುವ ಜನಾಂಗ ಬಿಜೆಪಿಯ ಪ್ರಚೋದನಕಾರಿ ಹೇಳಿಕೆಗಳಿಗೆ ಮಾರು ಹೋಗದೆ ಉದ್ಯೋಗ, ಇತರೆ ಸಮಾಜಮುಖೀ ಕಾರ್ಯದಲ್ಲಿ
ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ಜನರು ಕೆಲಸ ಅರಸುತ್ತಾ ಗುಳೇ ಹೋಗುವುದು ತಪ್ಪಿಸುವ ಉದ್ದೇಶದಿಂದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೊಳಿಸಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಸರಿಯಾಗಿ ಅನುದಾನ ಬಿಡುಗಡೆ ಮಾಡಿಲ್ಲ ಎಂದು ದೂರಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಅಲ್ಪಮತಗಳ ಅಂತರದಲ್ಲಿ ಸೋಲನ್ನು ಅನುಭವಿಸಿರುವ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಗೆಲ್ಲಿಸುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಕೆಪಿಸಿಸಿ ಸಿದ್ಧತಾ ಶಿಬಿರದ ತರಬೇತುದಾರ ಚಂದ್ರಶೇಖರ ರೆಡ್ಡಿ, ರಾಜಣ್ಣ, ಬಸವಾಪಟ್ಟಣ ಬ್ಲಾಕ್ ಅಧ್ಯಕ್ಷ ಬಿ.ಜಿ. ನಾಗರಾಜ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಜಿ. ಗೋವಿಂದಸ್ವಾಮಿ, ಆರ್.ಜಿ. ಹಳ್ಳಿ ನರೇಂದ್ರ ಇತರರು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.