ಗುತ್ತಿಗೆ ನೌಕರರಿಂದ ಮೊಂಬತ್ತಿ ಮೆರವಣಿಗ
Team Udayavani, Aug 16, 2018, 11:34 AM IST
ದಾವಣಗೆರೆ: ಕಾಯಮಾತಿಗೆ ಒತ್ತಾಯಿಸಿ ಸರ್ಕಾರಿ ಗುತ್ತಿಗೆ ನೌಕರರು ಬುಧವಾರ ಸಂಜೆ ಜಯದೇವ ವೃತ್ತದಲ್ಲಿ ಕ್ಯಾಂಡೆಲ್ ಲೈಟ್ ಮೆರವಣಿಗೆ ನಡೆಸಿದರು. ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಅನೇಕ ವರ್ಷದಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವರು ಕೆಲಸದ ಭದ್ರತೆ ಇಲ್ಲದೆ ಅಕ್ಷರಶಃ ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಗುತ್ತಿಗೆ ಆಧಾರಿತ ನೌಕರರ ಕಾರಣಕ್ಕಾಗಿಯೇ ಸರ್ಕಾರದ ಆಡಳಿತ ಅತ್ಯಂತ ಸುಸೂತ್ರವಾಗಿ ನಡೆಯುತ್ತಿದೆ. ಆದರೆ, ಅದಕ್ಕೆ ಕಾರಣವಾಗುತ್ತಿರುವರ ಬದುಕು ಮಾತ್ರ ಸುಸೂತ್ರವಾಗಿಲ್ಲ ಎಂದು ಗುತ್ತಿಗೆ ಆಧಾರಿತ ನೌಕರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರಿ ಗುತ್ತಿಗೆ ನೌಕರರ ಸಮಸ್ಯೆ ಹಲವಾರು ವರ್ಷಗಳಿಂದ ಜೀವಂತವಾಗಿವೆ. ಈ ಕ್ಷಣಕ್ಕೂ ಸಮಸ್ಯೆಗೆ ಪರಿಹಾರ ಎಂಬುದು ದೊರೆತಿಲ್ಲ. ಸದಾ ಅಭದ್ರ ಸ್ಥಿತಿಯಲ್ಲೇ ಜೀವನ ನಿರ್ವಹಣೆ ಮಾಡಬೇಕಿದೆ. ದೇಶ 72ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದೆ. ಸರ್ಕಾರಿ ಗುತ್ತಿಗೆ ನೌಕರರಿಗೆ ಆಧುನಿಕ ಜೀತಪದ್ಧತಿಯಿಂದ ಸ್ವಾತಂತ್ರ್ಯ ದೊರೆತಿಲ್ಲ ಮಾತ್ರವಲ್ಲ ದೊರೆಯುವ ಲಕ್ಷಣವೂ ಕಾಣುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸೇವೆ ಕಾಯಂಗೆ ಒತ್ತಾಯಿಸಿ ಸ್ವಾತಂತ್ರ್ಯ ದಿನಾಚರಣೆಯಂದು, ದೇಶಕ್ಕೆ ಸ್ವಾತಂತ್ರ್ಯ ಬಂದು 72 ವರ್ಷಗಳಾಗಿವೆ ನಮ್ಮನ್ನೇಕೆ ಜೀತಪದ್ಧತಿಗೆ ದೂಡುತ್ತಿದ್ದೀರಿ… ಎಂಬ ಘೋಷವಾಕ್ಯದೊಂದಿಗೆ ಒತ್ತಾಯಿಸುತ್ತಿದ್ದೇವೆ. ಸರ್ಕಾರ ಈಗಲಾದರೂ ಕಣ್ಣು ತೆರೆದು, ಕಾಯಂ ಮಾಡಬೇಕು ಎಂದು ಒತ್ತಾಯಿಸಿದರು. ಆದಿಲ್‌ಖಾನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.