ಕಾಂಗ್ರೆಸ್‌ ಸರ್ಕಾರದಿಂದ ಅನ್ಯಾಯ

Team Udayavani, Mar 27, 2017, 1:20 PM IST

dvg7.jpg

ಹರಿಹರ: ಹಿಂದುಳಿದ ಹಾಗೂ ದಲಿತ ಸಮುದಾಯಗಳ ಅಭಿವೃದ್ಧಿಗಾಗಿ ಮೀಸಲಿರುವ ಅನುದಾನ ಬಳಸಿಕೊಳ್ಳದೇ ರಾಜ್ಯ ಕಾಂಗ್ರೆಸ್‌ ಸರ್ಕಾರ ಅನ್ಯಾಯವೆಸಗಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಆರೋಪಿಸಿದರು. ನಗರ ಹೊರವಲಯದ ಬೆಳ್ಳೂಡಿ ಕಾಗಿನೆಲೆ ಕನಕ ಶಾಖಾ ಮಠದ ಆವರಣದಲ್ಲಿ ಭಾನುವಾರ ನಡೆದ ವಾರ್ಷಿಕೋತ್ಸವ, ಕನಕ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರದಲ್ಲಿ ಹಿಂದುಳಿದ, ದಲಿತ ವರ್ಗಗಳಿಗೆ 98 ಕೋಟಿ ರೂ. ಅನುದಾನ ಬಳಕೆ ಮಾಡಿದ್ದರೆ, ಈಗಿನ ಸರ್ಕಾರ ಇದರಲ್ಲಿ ಶೇ.53ರಷ್ಟು ಅನುದಾನ ಮಾತ್ರ ಬಳಕೆ ಮಾಡಿದೆ ಎಂದರು. ಅನುದಾನ ಬಳಸಿಕೊಳ್ಳದ ಬಗ್ಗೆ ಸಿಎಂ ಹಾಗೂ ಸಮಾಜ ಕಲ್ಯಾಣ ಸಚಿವರು ಬೇಡಿಕೆ ಬಂದಿಲ್ಲ, ಯಾರೂ ಅರ್ಜಿ ಸಲ್ಲಿಸಿಲ್ಲ ಎನ್ನುತ್ತಿದ್ದು, ಹಿಂದುಳಿದ ಮಠಾಧೀಶರ ಒಕ್ಕೂಟದ ಅಧ್ಯಕ್ಷರಾಗಿರುವ ಕಾಗಿನೆಲೆ ಶ್ರೀಗಳು ಕೂಡಲೇ ಒಕ್ಕೂಟದ ಸಭೆ ನಡೆಸಿ ಸರಕಾರಕ್ಕೆ ಅರ್ಜಿ ಹಾಕಿಸಬೇಕು.

ನಾನು ಕೂಡ ಅನುದಾನ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ. ಸರ್ಕಾರ ಹಿಂದುಳಿದ, ದಲಿತ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಕ್ರಿಯಾಶೀಲವಾಗಿ ಕೆಲಸ ಮಾಡಬೇಕು ಎಂದರು. ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಕನಕ ಶಾಖಾ ಮಠದಲ್ಲಿ ಐಎಎಸ್‌, ಕೆಎಎಸ್‌ ತರಬೇತಿ ಕೇಂದ್ರ ಆರಂಭಿಸಿರುವುದು ಗ್ರಾಮೀಣ ಭಾಗದ ಯುವಕರಿಗೆ ಅನುಕೂಲವಾಗಿದೆ. 

ತರಬೇತಿಗೆಂದು ಮಹಾನಗರಗಳಿಗೆ ವಲಸೆ ಹೋಗುವುದು ತಪ್ಪಿದಂತಾಗಿದೆ. ಹಿಂದೆ ಮಠದ ಜಾಗದ ಖರೀದಿಗೆ 20 ಲಕ್ಷ ರೂ. ಅನುದಾನ ನೀಡಿದ್ದೆ, ಈಗ ಹೆಚ್ಚುವರಿಯಾಗಿ 5 ಲಕ್ಷ ರೂ. ಅನುದಾನ ನೀಡುವುದಾಗಿ ವಾಗ್ಧಾನ ಮಾಡಿದರು. ಸಾನ್ನಿಧ್ಯ ವಹಿಸಿದ್ದ ನಿರಂಜನಾನಂದಪುರಿ ಶ್ರೀಗಳು ಮಾತನಾಡಿ, ಶಾಖಾ ಮಠವು ವರ್ಷದ ಅವಧಿಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ. ತರಬೇತಿ ಕೇಂದ್ರದ ಕಟ್ಟಡ ನಿರ್ಮಿಸಲಾಗುತ್ತಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ 4 ಕೋಟಿ ರೂ. ಅನುದಾನ ನೀಡಿದ್ದಾರೆ.

ವಿವಿಧ ಪಕ್ಷಗಳ ರಾಜಕಾರಣಿಗಳು ನೀಡಿದ 98 ಲಕ್ಷ ರೂ. ಗಳಲ್ಲಿ ಜಮೀನು ಖರೀದಿಸಿ, ಭಕ್ತರು ನೀಡಿದ ಹಣದಲ್ಲಿ ಕಟ್ಟಡ ನಿರ್ಮಿಸಲಾಗಿದೆ. 2ನೇ ವರ್ಷಾಚರಣೆ ವೇಳೆ ಸಿಎಂ ಕರೆಸಿ ತರಬೇತಿ ಕೇಂದ್ರ ಉದ್ಘಾಟಿಸುವುದಾಗಿ ತಿಳಿಸಿದರು. ಹೊಸಹಳ್ಳಿ ವೇಮನಾನಂದ ಶ್ರೀ, ನಂದಿಗುಡಿ ಸಿದ್ದರಾಮೇಶ್ವರ ಶ್ರೀ, ಶಾಖಾ ಮಠದ ಈಶ್ವರಾನಂದ ಶ್ರೀ, ಶಿವಾನಂದಪುರಿ ಶ್ರೀ, ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪುರ,

ಎಚ್‌. ವಿಶ್ವನಾಥ್‌, ಜಿ.ಕರುಣಾಕರ ರೆಡ್ಡಿ, ಮಾಜಿ ಶಾಸಕ ಬಸವರಾಜ ನಾಯ್ಕ, ನಗರಸಭಾ ಅಧ್ಯಕ್ಷೆ, ಆಶಾ ಮರಿಯೋಜಿರಾವ್‌, ಕಾಂಗ್ರೆಸ್‌ ಮುಖಂಡ ಎಸ್‌.ರಾಮಪ್ಪ, ಬಿ.ರೇವಣಸಿದ್ದಪ್ಪ, ಜಿಪಂ ಸದಸ್ಯರಾದ ಜಯಶೀಲ, ಪರಮೇಶ್ವರಪ್ಪ, ವೃತ್ತ ನಿರೀಕ್ಷಕ ಕುಣಿಬೆಳೆಕೆರೆ ದೇವೇಂದ್ರಪ್ಪ, ಎಂ.ನಾಗೇಂದ್ರಪ್ಪ, ಕುಂಬಳೂರು ವಿರೂಪಾಕ್ಷಪ್ಪ, ಸಿ.ಎನ್‌. ಹುಲಗೇಶ್‌, ಡಾ| ಮಹೇಶ್ವರಪ್ಪ, ಎಚ್‌.ಕೆ. ಕನ್ನಪ್ಪ ಮತ್ತಿತರರಿದ್ದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.