ಅಪಾಯದ ಅಂಚಿನಲ್ಲಿದೆ ದೇಶದ ಪ್ರಜಾಪ್ರಭುತ್ವ
Team Udayavani, Mar 10, 2019, 7:23 AM IST
ದಾವಣಗೆರೆ: ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದ ಅಂಚಿನಲ್ಲಿದೆ ಎಂದು ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ವಿ ಲೋಕೇಶ್ ಆತಂಕ ವ್ಯಕ್ತಪಡಿಸಿದ್ದಾರೆ. ಶನಿವಾರ, ನಗರದ ರೋಟರಿ ಬಾಲಭವನದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಮಂಡಳಿ ಆಯೋಜಿಸಿದ್ದ ಸಿಪಿಐ ರಾಜಕೀಯ ಸಮಾವೇಶ ಉದ್ಘಾಟಿಸಿ, ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಯಲು ಬಿಜೆಪಿ ಹೊರತಾಗಿ ಮತದಾನ ಮಾಡಬೇಕು ಎಂದರು.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ನಡೆ ಹೆಚ್ಚಾಗಿದೆ. ಸಾಮಾನ್ಯ ಜನರ ಬದುಕು ಕಸಿಯುವ ಪ್ರಯತ್ನ ನಡೆಯುತ್ತಿದೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವ ರಕ್ಷಣೆಯಾಗಬೇಕಾದರೆ ಬಿಜೆಪಿ ಅಧಿಕಾರಕ್ಕೆ ಬರಬಾರದು. 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣ ಕೇವಲ ಶೇ. 31ರಷ್ಟು ಮಾತ್ರ ಮತದಾನ ನಡೆದಿರುವುದು.
ಬಿಜೆಪಿಗೆ ಶೇ. 90ರಷ್ಟು ಜನ ವಿರೋಧಿಗಳಿದ್ದಾರೆ. ಬಿಜೆಪಿ ವಿರೋಧಿ ಮತಗಳನ್ನು ಒಗ್ಗೂಡಿಸುವ ಪ್ರಯತ್ನ ಮಾಡಿದರೆ ಮಾತ್ರ ದೇಶದಲ್ಲಿ ಬದುಕುವ ಹಕ್ಕು ಉಳಿಯಲು ಸಾಧ್ಯ ಎಂದು ಅವರು ಹೇಳಿದರು. ನರೇಂದ್ರ ಮೋದಿಯವರು 2014ರಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ
ಈವರೆಗೂ ಈಡೇರಿಸಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಿಲ್ಲ, ರೈತರ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಇಲ್ಲ. ಡಾ| ಸ್ವಾಮಿನಾಥನ್ ವರದಿ ಜಾರಿಯಾಗಿಲ್ಲ.
ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇವೆ. ಜಿಎಸ್‌ಟಿ ಜಾರಿ, ನೋಟು ಬ್ಯಾನ್, ಆಧಾರ್ ಕಡ್ಡಾಯ ಇವು ಚುನಾವಣಾ ಪ್ರಣಾಳಿಕೆಯಲ್ಲಿರಲಿಲ್ಲ. ಬಿಜೆಪಿ ಹೇಳುವುದು ಒಂದು, ಮಾಡುವುದು ಇನ್ನೊಂದು ಎಂದು ಅವರು ವ್ಯಂಗ್ಯವಾಡಿದರು.
ಪ್ರಧಾನಿ ಮೋದಿಯವರು ಸ್ವಯಂ ವೈಭವೀಕರಣಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ. ರಾಮ ಮಂದಿರ ನಿರ್ಮಾಣದ ಹೆಸರೇಳಿಕೊಂಡು ಚುನಾವಣೆ ಎದುರಿಸಲು ಮುಂದಾಗಿದ್ದಾರೆ. ಉಗ್ರರ ದಾಳಿ ವಿಷಯ ಬಳಸಿಕೊಂಡು ಜನರನ್ನು ಮತ್ತೂಮ್ಮೆ ದಾರಿ ತಪ್ಪಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು. ಭ್ರಷ್ಟಾಚಾರ ನಿರ್ಮೂಲನೆ ಮಾಡುವುದಾಗಿ ಹೇಳುವ ಪ್ರಧಾನಿ ಮೋದಿ, ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ನೀಡುವುದಿಲ್ಲ.
ನ್ಯಾಯಾಲಯ ರಫೆಲ್ ಬಗ್ಗೆ ತನಿಖೆ ನಡೆಸಲು ಎಲ್ಲಿ ಹೇಳುತ್ತದೆಯೋ ಎಂಬ ಆತಂಕದಿಂದ ದಾಖಲೆಗಳೇ ಕಳೆದಿವೆ ಎಂಬುದಾಗಿ ಸುಳ್ಳು ಹೇಳುತ್ತಾರೆಂದು ಅವರು ಆಪಾದಿಸಿದರು. ಸಿಪಿಐ ಮುಖಂಡ ಎಚ್. ಕೆ ರಾಮಚಂದ್ರಪ್ಪ, ಆವರಗೆರೆ ವಾಸು,ಆನಂದರಾಜ್, ಪಾಲಿಕೆ ಸದಸ್ಯ ಎಚ್.ಜಿ ಉಮೇಶ್, ಎಂ.ಬಿ ಶಾರದಮ್ಮ ಇತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.