12ರಂದು ಸವಿತಾ ಮಹರ್ಷಿ ಜಯಂತಿ ಆಚರಣೆಗೆ ನಿರ್ಧಾರ
Team Udayavani, Feb 2, 2019, 5:25 AM IST
ಹೊನ್ನಾಳಿ: ಸವಿತಾ ಮಹರ್ಷಿ ಜಯಂತ್ಯುತ್ಸವವನ್ನು ಫೆ. 12ರಂದು ಪ.ಪಂ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ತುಷಾರ ಬಿ.ಹೊಸೂರು ಹೇಳಿದರು.
ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಸಮಿತಿ ಹಾಗೂ ತಾಲೂಕು ಸವಿತಾ ಸಮಾಜ ಸಂಯುಕ್ತಾಶ್ರಯದಲ್ಲಿ ತಾಲೂಕು ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತ್ಯುತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಸರ್ಕಾರದಿಂದ ಸವಿತಾ ಮಹರ್ಷಿ ಜಯಂತಿ ಆಚರಣೆಗೆ ಅಧಿಕೃತ ಘೋಷಣೆಯಾಗಿದೆ. ಸಮಾಜದ ಬಾಂಧವರು ಈ ಬಾರಿ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜನೆಗೆ ಒಪ್ಪಿಗೆ ನೀಡಿದ್ದು, ಸರಳ, ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಎನ್.ಎಲ್. ರವಿ ಮಾತನಾಡಿ, ಸರ್ಕಾರ ಸವಿತಾ ಸಮಾಜವನ್ನು ಗುರ್ತಿಸಿ ದಾರ್ಶನಿಕ ಸವಿತಾ ಮಹರ್ಷಿ ಜಯಂತಿಗೆ ಚಾಲನೆ ನೀಡಿರುವುದಕ್ಕೆ ಅಭಿನಂದಿಸಿದರು. ಪ್ರಥಮ ಬಾರಿಗೆ ಸರ್ಕಾರದ ವತಿಯಿಂದ ಆಚರಿಸುವ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಸಮಾಜದ ಎಲ್ಲಾ ಬಾಂಧವರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅವರು ವಿನಂತಿಸಿದರು. ಸವಿತಾ ಸಮಾಜದ ನಿರ್ದೇಶಕರಾದ ಗೋವಿಂದರಾಜ್, ಎನ್.ಕೆ.ತಿಪ್ಪಣ್ಣ, ಎನ್.ಆರ್. ಕೃಷ್ಣಮೂರ್ತಿ, ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.