ಅಭಿವೃದ್ಧಿ ಸೋಗಲ್ಲಿ ಪರಿಸರ ನಾಶ ಸಲ್ಲ
Team Udayavani, Dec 9, 2018, 2:54 PM IST
ದಾವಣಗೆರೆ: ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಮಾಡುವ ಬದಲು ವೈಜ್ಞಾನಿಕವಾಗಿ ಅಭಿವೃದ್ಧಿ ಕಂಡುಕೊಳ್ಳುವ ಬಗ್ಗೆ ವಿದ್ಯಾರ್ಥಿಗಳು ಆವಿಷ್ಕಾರಗಳಲ್ಲಿ ತೊಡಗಬೇಕಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ ಹೇಳಿದ್ದಾರೆ.
ಶನಿವಾರ, ಶಿರಮಗೊಂಡನಹಳ್ಳಿ ಗ್ರಾಮದ ಅನ್ ಮೋಲ್ ಶಾಲೆಯಲ್ಲಿ ರಾಜ್ಯ ವಿಜ್ಞಾ ನ ಪರಿಷತ್ ಜಿಲ್ಲಾ ಸಮಿತಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ 26ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ಉದ್ಘಾಟಿಸಿ, ಅವರು ಮಾತನಾಡಿದರು.
ಪ್ರಪಂಚದಲ್ಲಿ ಕೋಟ್ಯಾಂತರ ಪ್ರಾಣಿ, ಪಕ್ಷಿಗಳು ಹುಟ್ಟುತ್ತಿದ್ದರೂ ಅವು ಯಾವುದೇ ರೀತಿ ನಿಸರ್ಗ ಹಾಗೂ ಮನುಷ್ಯನಿಗೆ ತೊಂದರೆ ಕೊಡುತ್ತಿಲ್ಲ. ಆದರೆ, ಬುದ್ಧಿಜೀವಿ ಮಾನವ ತನ್ನ ಸ್ವಾರ್ಥಕ್ಕಾಗಿ ಪಕೃತಿಗೆ ಹಾನಿ ಮಾಡುತ್ತಿದ್ದಾನೆ. ಇದರಿಂದ ಸಾಕಷ್ಟು ಸಮಸ್ಯೆಗಳು ಉಲ್ಬಣ ಆಗುವುದರಿಂದ ಮೊದಲು ಅಭಿವೃದ್ಧಿ ಹೆಸರಿನಲ್ಲಿ ಪ್ರಕೃತಿ ಹಾಳು ಮಾಡುವುದನ್ನು ನಿಲ್ಲಿಸಬೇಕು. ಅಭಿವೃದ್ಧಿ ಕೆಲಸಕ್ಕೆ ಪರ್ಯಾಯ ಮಾರ್ಗ ಕಂಡುಕೊಳ್ಳುವ ಬಗ್ಗೆ ಚಿಂತನೆ ನಡೆಯಬೇಕು ಎಂದರು.
ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ಆತ್ಮವಿಶ್ವಾಸವಿಟ್ಟು ಸರಿಯಾದ ಮಾರ್ಗದರ್ಶನ ಪಡೆದು ಹೊಸ ಆವಿಷ್ಕಾರಕ್ಕೆ ಒತ್ತು ನೀಡಬೇಕು. ಸ್ವತ್ಛ ಹಸಿರು ಮತ್ತು ಆರೋಗ್ಯವಂತ ರಾಷ್ಟ್ರ ನಿರ್ಮಾಣಕ್ಕಾಗಿ ವಿಜ್ಞಾನ, ತಂತ್ರಜ್ಞಾನದ ಮೂಲಕ ಉತ್ತಮ ಆವಿಷ್ಕಾರಗಳನ್ನು ಮಾಡುವ ಮೂಲಕ ರಾಜ್ಯ, ರಾಷ್ಟ್ರಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತರುವ ಕೆಲಸವಾಗಬೇಕು ಎಂದು ಹೇಳಿದರು.
ಜಿಲ್ಲಾ ಪರಿಸರ ಅಧಿಕಾರಿ ಕೆ.ಬಿ. ಕೊಟ್ರೇಶ್ ಮಾತನಾಡಿ, ಸ್ವತ್ಛತೆ, ಹಸಿರು, ಆರೋಗ್ಯಕ್ಕೆ ಸಂಬಂಧಿಸಿದಂತೆ ವಿಜ್ಞಾನ, ತಂತ್ರಜ್ಞಾನದ ಆವಿಷ್ಕಾರಗಳು ಹೆಚ್ಚೆಚ್ಚು ಆಗಬೇಕು. ಆ ಮೂಲಕ ದೇಶವನ್ನು ಆರೋಗ್ಯಪೂರ್ಣವಾಗಿಡಲು ಯುವ ವಿಜ್ಞಾನಿಗಳು ಶ್ರಮಿಸಬೇಕು. ಸ್ಥಳೀಯವಾಗಿ ಮನೆ ಕಸ, ಆಸ್ಪತ್ರೆ, ಕೈಗಾರಿಕಾ ತ್ಯಾಜ್ಯ ಮರು ಬಳಕೆ ಕೇಂದ್ರ ಸ್ಥಾಪನೆ ಮಾಡುವ ಕಾರ್ಯ ಆಗಬೇಕಿದೆ ಎಂದರು.
ರಾಜ್ಯದಲ್ಲಿ ಪ್ರತಿನಿತ್ಯ 15 ಸಾವಿರ ಟನ್‌ನಷ್ಟು ತ್ಯಾಜ್ಯ ಉತ್ಪತ್ತಿ ಆಗುತ್ತಿದ್ದು, ಆದರ ಮರು ಬಳಕೆ ಪ್ರಮಾಣ ಕೇವಲ 4 ಸಾವಿರ ಟನ್‌ನಷ್ಟು ಮಾತ್ರ ಆಗುತ್ತಿದೆ. ಉಳಿದ ಕಸವೆಲ್ಲ ಗುಂಡಿಗಳು ಸೇರಿದಂತೆ ಎಲ್ಲೆಂದರಲ್ಲಿ ಉಳಿಯುತ್ತಿದೆ. ಈ ಅನುಪಯುಕ್ತ ತ್ಯಾಜ್ಯಪುನರ್ ಬಳಕೆಗೆ ಇಂದಿನ ಯುವ ಸಮೂಹ ಹೊಸ ಆವಿಷ್ಕಾರ ಕೈಗೊಳ್ಳಬೇಕಿದೆ. ಸ್ವತ್ಛ, ಸುಂದರ ನಗರ ನಿರ್ಮಾಣಕ್ಕೆ ತಮ್ಮದೇ ಆದ ಪಾತ್ರ ವಹಿಸಬೇಕಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಅಧ್ಯಕ್ಷ ಡಾ| ಬಿ.ಇ. ರಂಗಸ್ವಾಮಿ ಮಾತನಾಡಿದರು. ರಾಜ್ಯ ವಿಜ್ಞಾನ ಪರಿಷತ್‌ನ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಉದಯರತ್ನಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ವಿಜ್ಞಾನ ವಿಷಯ ಪರಿವೀಕ್ಷಕ ಆರ್.ಬಿ. ವಸಂತಕುಮಾರಿ,ಎನ್.ಎಂ.ಕೆ. ಲೋಕೇಶ್, ಎನ್.ಎಚ್. ನಂದಿನಿ ಅನಮೋಲ್ ವಿದ್ಯಾಸಂಸ್ಥೆ ಅಧ್ಯಕ್ಷ ಸಿ.ಜಿ. ದಿನೇಶ್, ರಾಜ್ಯ ವಿಜ್ಞಾನ ಪರಿಷತ್ ಕಾರ್ಯದರ್ಶಿ ಎಂ. ಗುರುಸಿದ್ದಸ್ವಾಮಿ, ಅಂಗಡಿ ಸಂಗಪ್ಪ, ವೆಂಕಟೇಶ್ ಮೂರ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.