ಹರಿಹರದಲ್ಲಿ ಶೀಘ್ರ ಮಹಾ ರುದ್ರಯಾಗ: ಆನಂದ ಗುರೂಜಿ
Team Udayavani, Feb 2, 2019, 5:20 AM IST
ಹರಿಹರ: ರಾಜ್ಯದ ಕೇಂದ್ರಸ್ಥಾನವಾದ ಹರಿಹರ ಸೇರಿದಂತೆ ಮಧ್ಯ ಕರ್ನಾಟಕದ ಸಮಸ್ತ ಜನರ ಅಭಿವೃದ್ಧಿ, ಏಳ್ಗೆಗಾಗಿ ಶೀಘ್ರದಲ್ಲೇ ಮಹಾ ರುದ್ರಯಾಗ ಹಮ್ಮಿಕೊಳ್ಳಲಾಗುವುದು ಎಂದು ಡಾ|ಮಹರ್ಷಿ ಆನಂದ ಗುರೂಜಿ ಹೇಳಿದರು.
ನಗರದ ಗಾಂಧಿ ಮೈದಾನದಲ್ಲಿ ಕರುನಾಡ ಕದಂಬ ರಕ್ಷಣಾ ವೇದಿಕೆ 63ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಆಯೋಜಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹ ಮಹೋತ್ಸವದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು, ದಕ್ಷಿಣ ಕಾಶಿ ಎಂದೇ ಖ್ಯಾತಿ ಗಳಿಸಿರುವ ಐತಿಹಾಸಿಕ, ಸಾಂಸ್ಕೃತಿಕ ನಗರ ಹರಿಹರದಲ್ಲಿ ಯಾಗ ಹಮ್ಮಿಕೊಳ್ಳಲಾಗುವುದು ಎಂದರು.
ವೇದಿಕೆ ರಾಜ್ಯೋತ್ಸವ ನಿಮಿತ್ತ ಬಡವರಿಗೆ ವರದಾನವಾಗುವ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ. ಪ್ರತಿ ವರ್ಷ ವೇದಿಕೆ ಇಂತಹ ಸಮಾಜಮುಖೀ ಕಾರ್ಯಕ್ರಮಗಳನ್ನು ಏರ್ಪಡಿಸುವಂತಾಗಲಿ ಎಂದು ಆಶಿಸಿದರು.
ಮಾಜಿ ಶಾಸಕ ಬಿ.ಪಿ. ಹರೀಶ್ ಮಾತನಾಡಿ, ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿರುವ ಮಹಿಳೆಯರು ಆನಂದ ಗುರೂಜಿಯವರ ಜನಪ್ರಿಯತೆಗೆ ಸಾಕ್ಷಿಯಾಗಿದ್ದಾರೆ. ಗುರೂಜಿ ಮಹಿಳೆಯರಿಗೆ ಹೇಳುವ ಸಾಂತ್ವನದ ಮಾತುಗಳು ಮಹತ್ವ ಪಡೆದಿವೆ. ಇಂತಹ ಮಹರ್ಷಿಗಳ ಸಮ್ಮುಖದಲ್ಲಿ ನವದಂಪತಿಗಳು ಹಸೆಮಣೆ ಏರುತ್ತಿದ್ದು, ಅವರ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು.
ವೇದಿಕೆಯ ಅಧ್ಯಕ್ಷ ಎಚ್.ಸುಧಾಕರ ಮಾತನಾಡಿ, ಕಳೆದ ಹಲವು ವರ್ಷಗಳಿಂದ ವೇದಿಕೆ ಸಮಾಜಮುಖೀ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ. ಈಗಾಗಲೇ ಹಲವು ಸಾಧಕರನ್ನು ವೇದಿಕೆ ಸನ್ಮಾನಿಸಿದ್ದು, ಈ ಬಾರಿ ಸಾಮೂಹಿಕ ವಿವಾಹ ಏರ್ಪಡಿಸಿದ್ದೇವೆ ಎಂದರು.
ಕೊಡಿಯಾಲ ಹೊಸಪೇಟೆ ಪುಣ್ಯಕೋಟಿ ಮಠದ ಜಗದೀಶ್ವರ ಶ್ರೀ, ಕವಲೆತ್ತು ಬಸವ ಕೇಂದ್ರದ ಮುಕ್ತಾ ಶರಣೆ, ಗುತ್ತೂರು ನೇಕಾರ ಪೀಠದ ಪ್ರಭುಲಿಂಗ ಶ್ರೀ, ಬಾಗಲಕೋಟೆ ದಸ್ತಗಿರಿ ಬಾಬಾ, ಚಿತ್ರದುರ್ಗ ಬಂಜಾರ ಗುರುಪೀಠದ ಸೇವಾಲಾಲ್ ಸರ್ದಾರ್ ಶ್ರೀ, ಸಿದ್ದರಾಮಯ್ಯ ಶಾಸ್ತ್ರಿ, ಮಹಂತೇಶ್ ಶಾಸ್ತ್ರಿ, ತಾಪಂ ಅಧ್ಯಕ್ಷೆ ಶ್ರೀದೇವಿ ಮಂಜಪ್ಪ, ಉಪಾಧ್ಯಕ್ಷೆ ಬಸವಲಿಂಗಮ್ಮ, ನಗರಸಭೆ ಅಧ್ಯಕ್ಷೆ ಸುಜಾತಾ ರೇವಣಿಸಿದ್ದಪ್ಪ, ಸದಸ್ಯರಾದ ಶಂಕರ್ ಖಟಾವಕರ್, ಬಿ. ರೇವಣಸಿದ್ದಪ್ಪ, ಮುಖಂಡರಾದ ಚಂದ್ರಶೇಖರ ಪೂಜಾರ್, ಎಚ್.ಕೆ. ಕೊಟ್ರಪ್ಪ, ವೇದಿಕೆಯ ಕವಿತಾ ಎಸ್.ಪೇಟೆಮಠ, ಎಪಿಎಂಸಿ ಸದಸ್ಯ ಮಂಜುನಾಥ್ ಪಾಟೀಲ್, ರುದ್ರಾಚಾರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.