ಅತಿಥಿ ಉಪನ್ಯಾಸಕರ ಬದುಕು ಇನ್ನೂ ಅತಂತ್ರ
Team Udayavani, Feb 12, 2021, 2:38 PM IST
ದಾವಣಗೆರೆ: ಕೋವಿಡ್ ಲಾಕ್‌ಡೌನ್ ಅವಧಿಯಲ್ಲಿ ಕಾಲೇಜುಗಳು ಬಂದ್ ಆಗಿದ್ದರಿಂದ ಇತ್ತ ಕೆಲಸವೂ ಇಲ್ಲ, ಅತ್ತ ಸಂಭಾವನೆಯೂ ಇಲ್ಲದೆ ಅಕ್ಷರಶಃ ಬೀದಿಗೆ ಬಂದಿದ್ದ ರಾಜ್ಯದ ಸರ್ಕಾರಿ ಕಾಲೇಜುಗಳ ಅತಿಥಿಉಪನ್ಯಾಸಕರ ಬದುಕು ಈಗಲೂ ಅತಂತ್ರವಾಗಿಯೇ ಮುಂದುವರಿದಿದೆ.
ಕೋವಿಡ್ ಲಾಕ್‌ಡೌನ್ ಹಂತ ಹಂತವಾಗಿ ತೆರವುಗೊಂಡು ಎಲ್ಲ ಔದ್ಯೋಗಿಕ ರಂಗಗಳಲ್ಲಿ ಚಟುವಟಿಕೆ ಚುರುಕುಗೊಳ್ಳುತ್ತಿವೆ. ಆದರೆ ಸರ್ಕಾರಿಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಬದುಕಿನಲ್ಲಿ ಮಾತ್ರ ಯಾವ ಚೇತರಿಕೆಯೂ ಕಂಡು ಬಂದಿಲ್ಲ. ಸರ್ಕಾರದ ಕಠೊರ ನಡೆಯಿಂದ ಸಾವಿರಾರು ಅತಿಥಿ ಉಪನ್ಯಾಸಕರು ಇರುವ ಕೆಲಸವನ್ನುಕಳೆದುಕೊಂಡು ಸಂಕಷ್ಟದ ಸುಳಿಗೆ ಸಿಲುಕಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಸರ್ಕಾರಿ ಪದವಿ ಕಾಲೇಜುಗಳು ಕಾರ್ಯಾರಂಭ ಮಾಡಿದ್ದು ಪ್ರಸಕ್ತ ಸಾಲಿನಲ್ಲಿ ಶೇ.50ರಷ್ಟು ಮಾತ್ರ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ, ಅನುಮತಿ ನೀಡಿದ್ದರಿಂದ ಇನ್ನುಳಿದ ಅರ್ಧದಷ್ಟು ಉಪನ್ಯಾಸಕರ ಕೆಲಸಕ್ಕೆ ಕತ್ತರಿ ಬಿದ್ದಿದೆ.
ಇವರ ದುಡಿಮೆಯನ್ನೇ ನಂಬಿಕೊಂಡ ಇವರ ಕುಟುಂಬಗಳು ಬೀದಿಗೆ ಬಂದಿವೆ. ರಾಜ್ಯದಲ್ಲಿ 430 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಿದ್ದು, 14,183 ಅತಿಥಿ ಉಪನ್ಯಾಸಕರು ಪಾಠ ಮಾಡುತ್ತಿದ್ದರು. ಈಗ ಸರ್ಕಾರ ಶೇ.50ರಷ್ಟು ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಆದೇಶ ಮಾಡಿದ್ದರಿಂದ ರಾಜ್ಯದ 7091 ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವಂತಾಗಿದೆ. ಬೋಧನೆಯನ್ನೇ ಜೀವನ ವೃತ್ತಿಯನ್ನಾಗಿಸಿಕೊಂಡ ಇವರು ಲಾಕ್‌ಡೌನ್ ಅವಧಿಯಲ್ಲಿ ಮಾಡಿದಂತೆ ವ್ಯಾಪಾರ, ಕೂಲಿಯಂಥ ಇತರೆ ಕೆಲಸಗಳತ್ತ ಮುಖ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.
ಡಿಸಿಎಂ ಆದೇಶಕ್ಕಿಲ್ಲ ಸಮ್ಮತಿ: ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಅವರು 11-11-2020ರಂದು ಆದೇಶ ಹೊರಡಿಸಿ 2019-20ರಲ್ಲಿ ಕಾಲೇಜು ಶಿಕ್ಷಣ ಇಲಾಖೆಯಡಿ ಬರುವ ಎಲ್ಲ ಸರ್ಕಾರಿ ಕಾಲೇಜುಗಳು ಮತ್ತು ತಾಂತ್ರಿಕ ಇಲಾಖೆಯ ಅಡಿಯಲ್ಲಿ ಬರುವ ಎಲ್ಲ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಅತಿಥಿ ಶಿಕ್ಷಕರನ್ನು 2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 17-11-202020ರಿಂದ ಅನ್ವಯಿಸುವಂತೆ ಅತಿಥಿ ಶಿಕ್ಷಕರ ಹುದ್ದೆಯಲ್ಲಿ ಮುಂದುವರೆಸಬೇಕು ಎಂದು ಆದೇಶಿಸಿದ್ದರು.
ಇದನ್ನೂ ಓದಿ:ಕಳ್ಳರ ಅಟ್ಟಹಾಸಕ್ಕೆ ನಲುಗಿದ ಕುಂದಾನಗರಿ
ಈ ಆದೇಶದ ಪ್ರಕಾರ ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳು ನವೆಂಬರ್‌ನಿಂದಲೇ ಅತಿಥಿ ಉಪನ್ಯಾಸಕರನ್ನು ಮುಂದುವರಿಸಿ ಸೇವೆ ಪಡೆಯುತ್ತಿವೆ. ಆದರೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಶೇ.50ರಷ್ಟು ಮಾತ್ರ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದರಿಂದ ಈ ಆದೇಶ ಪಾಲನೆಗೆ ಅಡ್ಡಿಯಾಗಿದೆ. ಸಚಿವರ ಆದೇಶಕ್ಕೆ ಆರ್ಥಿಕಇಲಾಖೆ ಸಮ್ಮತಿ ನೀಡಿಲ್ಲ ಎಂಬ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಆಯುಕ್ತರು ಜ.19ರಂದು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಅಧ್ಯಯನಕ್ಕೂ ಅಡ್ಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಶೇ.70ರಷ್ಟು ಅತಿಥಿ ಉಪನ್ಯಾಸಕರಿದ್ದು ಶೇ.30ರಷ್ಟು ಮಾತ್ರ ಕಾಯಂ ಉಪನ್ಯಾಸಕರಿದ್ದಾರೆ.ಪ್ರಾಂಶುಪಾಲರು ಹಾಗೂ ಕಾಯಂ ಉಪನ್ಯಾಸಕರಿಗ ಎನ್‌ಸಿಸಿ, ಎನ್‌ಎಸ್‌ಎಸ್, ಕಾಲೇಜು ಶಿಕ್ಷಣ ಇಲಾಖೆ ಹಾಗೂ ನ್ಯಾಕ್ ಚಟುವಟಿಕೆ ಕಾರ್ಯಭಾರ ಹೆಚ್ಚಾಗಿರುವುದರಿಂದ ಬಹುತೇಕ ಕಾಲೇಜುಗಳು ಬೋಧನೆಗೆ ಅತಿಥಿ ಉಪನ್ಯಾಸಕರನ್ನೇ ಅವಲಂಬಿಸಿವೆ. ಈಗಾಗಲೇ ಇಲಾಖೆ ಪಠ್ಯಕ್ರಮ ಪೂರ್ಣಗೊಳಿಸಲು ಸಹ ಗಡುವು ನಿಗದಿಪಡಿಸಿದೆ. ಹೀಗಾಗಿ ಅತಿಥಿ ಉಪನ್ಯಾಸಕರನ್ನು ಕಡಿತಗೊಳಿಸಿದಷ್ಟು ವಿದ್ಯಾರ್ಥಿಗಳ ಅಧ್ಯಯನಕ್ಕೆ ಹೊಡೆತ ಬೀಳಲಿದೆ.
ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.