ವಿದ್ಯಾರ್ಥಿಗೆ ಸಮಸ್ಯೆಯಾದಲ್ಲಿ ಮುಖ್ಯ ಶಿಕ್ಷಕರೇ ನೇರ ಹೊಣೆ
Team Udayavani, Jun 14, 2017, 1:27 PM IST
ದಾವಣಗೆರೆ: ಮಕ್ಕಳ ರಕ್ಷಣೆ, ಹಕ್ಕುಗಳ ವಿಷಯದಲ್ಲಿ ಸಮಾಜ ಹಾಗೂ ಸಾರ್ವಜನಿಕರು ಸದಾ ಜಾಗೃತರಾಗಿರಬೇಕಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಎಂದಿದ್ದಾರೆ. ಮಂಗಳವಾರ ಅಪರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಸಲಹಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳ ರಕ್ಷಣೆ ಮತ್ತು ಹಕ್ಕುಗಳ ರಕ್ಷಿಸುವ ಕಾರ್ಯ ಸರ್ಕಾರ ಅಥವಾ ಸಂಘ ಸಂಸ್ಥೆಗಳಿಗೆ ಮಾತ್ರವೇ ಸೀಮಿತ ಅಲ್ಲ. ಎಲ್ಲಾ ಮಕ್ಕಳ ರಕ್ಷಣೆ ಸಮಾಜದ ಹೊಣೆ ಎಂದರು. ವಿದ್ಯಾರ್ಥಿಯೊಬ್ಬ 2-3 ದಿನಗಳಿಂದ ಗೈರು ಹಾಜರಾದರೆ ಆ ಶಾಲೆಯ ಮುಖ್ಯೋಪಾಧ್ಯಾಯರು ತಕ್ಷಣ ಆತ ಗೈರು ಆಗುತ್ತಿರುವ ಕಾರಣದ ಪೋಷಕರಿಂದ ಮಾಹಿತಿ ಪಡೆಯಬೇಕು. ಗೈರಾಗುವ ಮಕ್ಕಳ ಬಗ್ಗೆ ಶಿಕ್ಷಕರು ಗಮನ ಹರಿಸಬೇಕು.
ಒಂದೊಮ್ಮೆ ವಿದ್ಯಾರ್ಥಿಗೆ ಯಾವುದೇ ರೀತಿ ಸಮಸ್ಯೆ, ತೊಂದರೆ ಕಂಡು ಬಂದಲ್ಲಿ ಸಂಬಂಧಿತ ಶಾಲಾ ಮುಖ್ಯೋಪಾಧ್ಯಾಯರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಎಚ್ಚರಿಸಿದ ಅವರು, ಯಾವುದೇ ಮಕ್ಕಳ ವಿಷಯಕ್ಕೆ ಸಂಬಂಧಿಸಿದ ಇಲಾಖೆಗಳು ತ್ವರಿತವಾಗಿ ಕಾರ್ಯಪ್ರವೃತ್ತರಾಗಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಾಮೂಹಿಕ ವಿವಾಹಗಳಲ್ಲಿ ವಯೋಮಿತಿಗೆ ಮೊದಲು ಮದುವೆಯಾಗುವ ಹೆಣ್ಣು ಮಕ್ಕಳ ರಕ್ಷಣೆ, ಆ ಹೆಣ್ಣುಮಕ್ಕಳಿಗೆ ಪುನರ್ವಸತಿ ಅಥವಾ ಬಾಲಮಂದಿರಗಳಲ್ಲಿ ಇರಿಸುವ ವ್ಯವಸ್ಥೆ ಬಗ್ಗೆ ಚರ್ಚಿಸಲಾಯಿತು. ಒಂದೊಮ್ಮೆ ಬಾಲ್ಯವಿವಾಹ ಕಂಡು ಬಂದಲ್ಲಿ ಮುದ್ರಣಾಲಯ, ಕಲ್ಯಾಣ ಮಂಟಪ, ಪುರೋಹಿತರು, ಅಡುಗೆ ಭಟ್ಟರನ್ನು ಕೂಡ ಶಿಕ್ಷಿಸಲು ಕಾಯ್ದೆಯಲ್ಲಿ ಅವಕಾಶವಿದೆ.
ಕಾಯ್ದೆ ಸರಿಯಾಗಿ ಅನುಷ್ಠಾನವಾಗಬೇಕು ಹಾಗೂ ಬಾಲ್ಯ ವಿವಾಹಗಳನ್ನು ತಡೆಯುವುದು ಸಂಬಂಧಿ ಸಿದ ಕಾರ್ಯ ವ್ಯಾಪ್ತಿಯ ಪೊಲೀಸರ ಜವಾಬ್ದಾರಿ. ಹಾಗಾಗಿ ಸರಿಯಾದ ಕಣ್ಗಾವಲಿರಬೇಕು ಎಂದು ತಿಳಿಸಿದರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಬಾಲ್ಯ ವಿವಾಹಗಳನ್ನ ತಡೆದ ಮೇಲೆ ಮುಂದೆ ಆ ಮಕ್ಕಳ ಸ್ಥಿತಿ ಏನಾಗುತ್ತದೆ ಎಂಬುದೇ ತಿಳಿಯುತ್ತಿಲ್ಲ. ಯಾರಿಗೂ ಸರಿಯಾದ ಮಾಹಿತಿ ಸಿಗುತ್ತಿಲ್ಲ ಎಂದರು.
ಅದಕ್ಕೆ ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಎಚ್. ವಿಜಯಕುಮಾರ್, ಎಲ್ಲಾ ಪ್ರಕರಣಗಳನ್ನು ಗಂಭೀರವಾಗಿಯೇ ತೆಗೆದುಕೊಳ್ಳಲಾಗುತ್ತಿದೆ. ಈಗಾಗಲೇ ಅಂತಹ 2 ಹೆಣ್ಣು ಮಕ್ಕಳು ಬಾಲಮಂದಿರದಲ್ಲಿದ್ದಾರೆ. ಅವರಿಗೆ ಟೈಲರಿಂಗ್ ಹಾಗೂ ದಾನಿಗಳಿಂದ ಕಂಪ್ಯೂಟರ್ ಪಡೆದು ತರಬೇತಿ ನೀಡಲು ಕ್ರಮ ವಹಿಸಲಾಗಿದೆ ಎಂದರು.
ಮಕ್ಕಳ ಕಲ್ಯಾಣ ಸಂಸ್ಥೆಯ ಸಂಯೋಜಕ ಟಿ.ಎಂ. ಕೊಟ್ರೇಶ್, ಗ್ರಾಮ ಪಂಚಾಯತ್ ಮಟ್ಟದಿಂದ ಸಾರ್ವಜನಿಕರಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಗ್ರಾಮ ಪಂಚಾಯ್ತಿಗಳಲ್ಲಿ ಪ್ರತಿ 3 ತಿಂಗಳಿಗೊಮ್ಮೆ ಮಕ್ಕಳ ಗ್ರಾಮಸಭೆ ನಡೆಸಬೇಕು ಎಂಬ ಸರ್ಕಾರದ ಆದೇಶ ಇದೆ. ಆದರೆ, ಸಭೆಗಳು ನಡೆಯುತ್ತಿಲ್ಲ. ಈ ಕುರಿತಂತೆ ಗ್ರಾಮ ಪಂಚಾಯತ್ ಸದಸ್ಯರಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕಳೆದ ಸಾಲಿನಲ್ಲಿ ಮಕ್ಕಳ ಸಮಸ್ಯೆಗೆ ಸಂಬಂಧಿಸಿದಂತೆ ಮಕ್ಕಳ ಸಹಾಯವಾಣಿಗೆ 3,887 ಕರೆ ಬಂದಿದ್ದು, ಹಲವು ಮಕ್ಕಳ ವಿಳಾಸ ಪತ್ತೆ ಹಚ್ಚಿ ಅವರ ಪೋಷಕರ ಜೊತೆ ಸೇರಿಸಲಾಗಿದೆ.ಅದರಲ್ಲಿ ಹೊರ ಜಿಲ್ಲೆಯ ಕೆಲವು ಮಕ್ಕಳು ಸೇರಿದ್ದಾರೆ. ವಿಳಾಸ ಪತ್ತೆ ಆಗದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದರು.
ಮಕ್ಕಳ ರಕ್ಷಣಾ ಘಟಕದ ಸದಸ್ಯ ಕೆ.ಬಿ. ರೂಪ್ಲಾನಾಯ್ಕ, ತ್ಯಾವಣಗಿ ಪಂಚಾಯತಿಯಲ್ಲಿ ವಿಶೇಷ ಚೇತನ ಸೌಲಭ್ಯದಡಿ ಅವಶ್ಯವಿರುವ ಸಾಧನಗಳನ್ನು ಬಿಟ್ಟು ಮಂಚಗಳನ್ನು ನೀಡಲಾಗಿದೆ ಎಂಬುದನ್ನು ಸಭೆ ಗಮನಕ್ಕೆ ತಂದಾಗ ಜಿಲ್ಲಾ ಧಿಕಾರಿ, ಹಾಗಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಬಸ್, ರೈಲ್ವೆ ನಿಲ್ದಾಣದಲ್ಲಿ ಸಿಗುವ ಮಕ್ಕಳನ್ನು ಗುರುತಿಸಿ ಅವರ ಪೋಷಕರ ವಿಳಾಸ ಪತ್ತೆ ಹಚ್ಚುವುದು,
ಮಕ್ಕಳಿಗೆ ಪುನರ್ವಸತಿ ಕಲ್ಪಿಸುವುದು ಮತ್ತು ಮಕ್ಕಳ ಸಹಾಯವಾಣಿಗೆ ಬರುವ ದೂರುಗಳನ್ನು ತ್ವರಿತ ಗಮನಹರಿಸುವ ಬಗ್ಗೆ ಸಂಬಂಧಿತ ಇಲಾಖೆ ಅಧಿಕಾರಿಗಳು ಗಮನ ನೀಡಬೇಕು ಎಂದು ಜಿಲ್ಲಾಧಿಕಾರಿ ರಮೇಶ್ ಸೂಚಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಬಸನಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಎಚ್.ಎಂ. ಪ್ರೇಮಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ವಿ. ಸದಾಶಿವ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
MUST WATCH
ಹೊಸ ಸೇರ್ಪಡೆ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.