ಸರ್ಕಾರಿ ಕಾಲೇಜಿಗೆ ಕುಡುಕರ ಕಾಟ!

Team Udayavani, Feb 25, 2017, 2:18 PM IST

dvg7.jpg

ಜಗಳೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡಕ್ಕೆ ರಕ್ಷಣಾಗೋಡೆ ಹಾಗೂ ಭದ್ರತಾ ಸಿಬ್ಬಂದಿಯ ಸೌಲಭ್ಯವಿಲ್ಲದ ಪರಿಣಾಮ ಕೊಠಡಿಗಳಿಗೆ ಅಳವಡಿಸಲಾಗಿರುವ ಗಾಜಿನ ಕಿಟಕಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಪಟ್ಟಣದ ಅಶ್ವತ್ಥರೆಡ್ಡಿ ನಗರದ ಸಮೀಪದಲ್ಲಿರುವ ಈ ನೂತನ ಕಟ್ಟಡದ ಕೊಠಡಿಗಳಿಗೆ ಅಳವಡಿಸಲಾಗಿರುವ ಗಾಜಿನ ಕಿಟಕಿಗಳು ಕಿಡಿಗೇಡಿಗಳ ಕೃತ್ಯಕ್ಕೆ ದಿನದಿಂದ ದಿನಕ್ಕೆ ಪುಡಿ ಪುಡಿಯಾಗುತ್ತಿವೆ. 

ಒಳ ಮತ್ತು ಹೊರ ಪ್ರಾಂಗಣದಲ್ಲಿನ ಗಾಜಿನ ಕಿಟಕಿಗಳು ಮತ್ತು ವಿದ್ಯುತ್‌ ದೀಪಗಳನ್ನು ಕಿಡಿಗೇಡಿಗಳು ಒಡೆದು ಹಾಕಿದಂತೆ ಪದೇ ಪದೇ ರಿಪೇರಿ ಮಾಡಿಸಿ ಬೇಸತ್ತ ಪ್ರಾಂಶುಪಾಲರು ಇಲ್ಲಿನ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಜಗಳೂರು ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ರಾತ್ರಿ ಕಾವಲುಗಾರರು ಇಲ್ಲದೇ ಇರುವುದರಿಂದ ಪ್ರತಿದಿನ ಸಂಜೆ 6.30ರ ನಂತರ ಬರುವ ಅಪರಿಚಿತರು ಮದ್ಯ ಸೇವಿಸಿ ಖಾಲಿ ಬಾಟಲಿಗಳನ್ನು ಕಾಲೇಜಿನ ಆವರಣದಲ್ಲಿ ಒಡೆದು ಹಾಕುತ್ತಿದ್ದಾರೆ.

 ಅಲ್ಲದೇ ನಶೆಯಲ್ಲಿ ಕಾಲೇಜಿನ ಕೊಠಡಿಗಳಿಗೆ ಅಳವಡಿಸಲಾಗಿರುವ ಗಾಜಿನ ಕಿಟಕಿಗಳನ್ನು ಮತ್ತು ಅಳವಡಿಸಲಾಗಿರುವ ವಿದ್ಯುತ್‌ ಬಲ್ಬಗಳನ್ನು  ಒಡೆದು ಹಾಕಿ ಸರ್ಕಾರದ ಆಸ್ತಿ ಪಾಸ್ತಿಗೆ ನಷ್ಟವುನ್ನುಂಟು ಮಾಡುತ್ತಿದ್ದಾರೆ. ಇಂತವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಪ್ರಾಂಶುಪಾಲರು ಜಗಳೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. 2007ರಲ್ಲಿ ಜಗಳೂರಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಜೂರಾಯಿತು.

ಸುಮಾರು ನಾಲ್ಕೈದು  ವರ್ಷಗಳ ಕಾಲ ಇಲ್ಲಿನ ಸರ್ಕಾರಿ ಬಾಲಕರ ಶಾಲೆಯ ಖಾಲಿ ಕೊಠಡಿಗಳು ಮತ್ತು ಹಳೆ ಕ್ಷೇತ್ರಶಿಕ್ಷಣಾಧಿಧಿಕಾರಿಗಳ ಕಚೇರಿಯ ಕೊಠಡಿಯಲ್ಲಿ ತರಗತಿಗಳು ನಡೆದವು. ಆದರೆ ವರ್ಷದಿಂದ ವರ್ಷಕ್ಕೆ ದಾಖಲಾಗುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಾ ಹೋಯಿತು. ಇತ್ತ ಸರ್ಕಾರ 8 ಕೊಠಡಿಗಳ ಮಂಜೂರು ಮಾಡಿತು. 2015ರ ವೇಳೆಗೆ ಕಾಮಗಾರಿ ಮುಕ್ತಾಯ ಕಂಡಿತು. 

ಕೊಠಡಿಗಳ ಕೊರೆತೆಯಿಂದಾಗಿ ನೂತನ ಕಟ್ಟಡವನ್ನು ತರಗತಿಗಳಿಗೆ ಬಳಸಿಕೊಂಡಿದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಕೊಠಡಿಗಳಿಗೆ ರಕ್ಷಣಾಗೋಡೆ ಮತ್ತು ಭದ್ರತಾ ಸಿಬ್ಬಂದಿಯ ಸೌಲಭ್ಯ ಇಲ್ಲದ ಪರಿಣಾಮ ಕೊಠಡಿಗಳಿಗೆ ಅಳವಡಿಸಲಾಗಿರುವ ಗಾಜಿನ ಕಿಟಕಿಗಳು ದಿನೇ ದಿನೆ ಪುಡಿ ಪುಡಿಯಾಗುತ್ತಿರುವುದು ಸಹಜವಾಗಿ ಪ್ರಾಂಶುಪಾಲರು ಮತ್ತು ಸಿಬ್ಬಂದಿ ಬೇಸತ್ತು ಹೋಗಿದ್ದಾರೆ. ಸಂಬಂಧಪಟ್ಟ ಪೊಲೀಸ್‌ ಇಲಾಖೆಯ ಪದೇ ಪದೇ ನಡೆಯುತ್ತಿರುವ ಕಿಡಿಗೇಡಿಗಳ ಕೃತ್ಯಕ್ಕೆ ಕಡಿವಾಣ ಹಾಕುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. 

* ಸಿ.ಬಸವರಾಜ್‌  

ಟಾಪ್ ನ್ಯೂಸ್

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.