
ಸಪ್ತ ಮಾತೃಕೆಯರ ಪವಿತ್ರ ಕೊಳದ ಉದ್ಘಾಟನೆ ಇಂದು
Team Udayavani, Feb 10, 2019, 6:36 AM IST

ಕಲಬುರಗಿ: ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನಲ್ಲಿರುವ ಸೂರಗೊಂಡನಕೊಪ್ಪದಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿ ಪಡಿಸಲಾಗಿರುವ ಸಪ್ತ ಮಾತೃಕೆಯರ ಪವಿತ್ರ ಕೊಳದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಉದ್ಘಾಟಿಸುತ್ತಿರುವ ಪ್ರಯುಕ್ತ ಜಿಲ್ಲೆಯಿಂದ ಕಾರ್ಯಕ್ರಮಕ್ಕೆ ಹೊರಟಿರುವ ಲಂಬಾಣಿ ಸಮಾಜದ ಮುಖಂಡರಿಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಶುಭ ಹಾರೈಸಿದರು.
ಸೂರಗೊಂಡನಕೊಪ್ಪಕ್ಕೆ ಲಂಬಾಣಿ ಜನಾಂಗದ ಮುಖಂಡರನ್ನು ಕರೆದುಕೊಂಡು ಹೋಗಲು ತಾಂಡಾ ಅಭಿವೃದ್ಧಿ ನಿಗಮದಿಂದ ಜಿಲ್ಲೆಯಿಂದ ಒಟ್ಟು ಎಂಟು ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಚಿತ್ತಾಪುರ ತಾಲೂಕಿನಿಂದ ಐದು ಬಸ್ಸು, ಆಳಂದ, ಅಫಜಲಪುರ, ಕಲಬುರ್ಗಿಯಿಂದ ತಲಾ ಒಂದು ಬಸ್ಸು ಈ ಕಾರ್ಯಕ್ರಮಕ್ಕಾಗಿ ತೆರಳುತ್ತಿವೆ.
ಲಂಬಾಣಿ ಜನಾಂಗದ ಸಂತ ಎಂದೇ ಪ್ರಖ್ಯಾತಿಯಾಗಿರುವ ಸೇವಾಲಾಲ ಜನ್ಮಸ್ಥಳ ಸೂರಗೊಂಡನಕೊಪ್ಪದಲ್ಲಿ ಇರುವ ಕೊಳದಲ್ಲಿ ಸಪ್ತ ದೇವತೆಗಳು ಸ್ನಾನ ಮಾಡಿ ಜನ್ಮ ನೀಡಿದ ಸೇವಾಲಾಲರನ್ನು ಆಶೀರ್ವದಿಸಿದರು ಎಂದು ಇತಿಹಾಸದಲ್ಲಿ ಉಲ್ಲೇಖಗಳಿವೆ. ಈ ಪವಿತ್ರ ಕೊಳವನ್ನು ತಾಂಡಾ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿಪಡಿಸಲಾಗಿದೆ. ಮುಜರಾಯಿ ಖಾತೆ ಸಚಿವ ಪಿ.ಟಿ. ಪರಮೇಶ್ವರ್ ಹಾಗೂ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ದೇವಿ ಪ್ರತಿಷ್ಠಾಪನೆ ಮಾಡುವ ಮೂಲಕ ಸಪ್ತ ಮಾತೃಕೆಯರ ಪವಿತ್ರ ಕೊಳದ ಉದ್ಘಾಟನೆ ಕೈಗೊಳ್ಳುತ್ತಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಸತೀಶ, ಲಂಬಾಣಿ ಸಮಾಜದ ಮುಖಂಡರಾದ ಡಾ| ಶಾರದಾ ಯಾಕಾಪುರ, ಪಾರ್ವತಿ ಬಾಯಿ, ಅಮರನಾಥ ಚವ್ಹಾಣ, ಲಕ್ಷ್ಮಣ ರಾಠೊಡ, ಶಂಕರ ರಾಠೊಡ ಮತ್ತಿತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.