ಮುಖ್ಯಮಂತ್ರಿಗೆ ಮನವಿಗಳ ಮಹಾಪೂರ-ಪರಿಹರಿಸುವ ಭರವಸೆ


Team Udayavani, Nov 18, 2018, 5:31 PM IST

dvg-1.jpg

ದಾವಣಗೆರೆ: ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಎಸ್‌.ಎಸ್‌. ಕನ್ವೆನ್‌ಷನ್‌ ಹಾಲ್‌ನಲ್ಲಿ ಆಯೋಜಿರುವ 29ನೇ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ರಾಜ್ಯ ಮಟ್ಟದ ಸಮ್ಮೇಳನದ ಉದ್ಘಾಟನೆಗೆ ಆಗಮಿಸಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮನವಿಗಳ ಮಹಾಪೂರವೇ ಹರಿದು ಬಂದಿತು.

ಶನಿವಾರ ಬೆಳಗ್ಗೆ 10ಕ್ಕೆ ಬೆಂಗಳೂರಿನ ಎಚ್‌ .ಎ.ಎಲ್‌. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ ನಲ್ಲಿ ಹೊರಟು 11ಕ್ಕೆ ದಾವಣಗೆರೆಯ ಸರ್ಕಾರಿ ಐಟಿಐ ಹೆಲಿಪ್ಯಾಡ್‌ಗೆ ಆಗಮಿಸುವರು ಎಂಬ ಸುದ್ದಿ ತಿಳಿದ ನೂರಾರು ಜನರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿಕ್ಕಾಗಿ ಬಂದಿದ್ದರು.

11 ಗಂಟೆಯ ವೇಳೆಗೆ ಬರಬೇಕಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಎರಡೂವರೆ ಗಂಟೆಯಷ್ಟು ಕಾಲ ತಡವಾಗಿ ಬಂದರೂ ಸಾರ್ವಜನಿಕರು, ವಿಕಲ ಚೇತನರು, ರೈತ ಸಂಘ, ದಲಿತ ಸಂಘರ್ಷ ಸಮಿತಿ, ಅತಿಥಿ ಉಪನ್ಯಾಸಕರು, ವಿವಿಧ ಕಾರ್ಮಿಕ ಸಂಘಟನೆಗಳವರು, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು ಕಾದಿದ್ದೂ ಕುಮಾರಸ್ವಾಮಿಗೆ ಮನವಿ ಸಲ್ಲಿಸಿದರು. ಹೆಲಿಪ್ಯಾಡ್‌ನಿಂದು ಇಳಿದು ಗೌರವ ರಕ್ಷೆ ಸ್ವೀಕರಿಸಿ, ಮುಖಂಡರೊಂದಿಗೆ ಕುಶಲೋಪರಿ ಮಾತುಕತೆಯ ನಂತರ ನೇರವಾಗಿ ಮನವಿ ಸ್ವೀಕರಿಸಲು ತೆರಳಿದ ಮುಖ್ಯಮಂತ್ರಿ ಕುಮಾರಸ್ವಾಮಿ ನಾಮಕಾವಸ್ಥೆಗೆ ಮನವಿ ಸ್ವೀಕರಿಸದೇ ಸಮಾಧಾನದಿಂದ ಪ್ರತಿಯೊಬ್ಬರ ಆಹವಾಲು, ಸಮಸ್ಯೆ ಆಲಿಸಿದರು. ಕೆಲವೊಂದಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಿದರು. ಕೆಲವೊಂದಕ್ಕೆ ಷರಾ ಬರೆದು, ಸಂಬಂಧಿತ ಇಲಾಖೆ ಅಧಿಕಾರಿಗಳಿಗೆ ಅಗತ್ಯ ಕ್ರಮದ ಬಗ್ಗೆ ಸೂಚನೆ ನೀಡಿದರು.

ದಾವಣಗೆರೆ ತಾಲೂಕಿನ ಎಲೇಬೇತೂರಿನಿಂದ ತಮ್ಮ ಚಿಕ್ಕಮ್ಮನೊಂದಿಗೆ ಬಂದಿದ್ದ ಇಬ್ಬರು ಅಂಧ ಸಹೋದರರಿಯರಾದ ಎಂ.ಎಸ್‌. ಸೌಮ್ಯ ಮತ್ತು ಎಂ.ಎಸ್‌. ನಾಗರತ್ನ ಅವರು, ಮೂವರು ಅಕ್ಕ-ತಂಗಿಯರು ಹುಟ್ಟು ಕುರುಡರು. ಅಂಧತ್ವದ ನಡುವೆಯೂ ಬಿಎ, ಬಿಬಿಎ ಪೂರೈಸಿದ್ದೇವೆ. ಸರ್ಕಾರಿ ಕೆಲಸ ಕೊಡಿಸುವ ಮೂಲಕ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂಬ ಮನವಿಗೆ ಕುಮಾರಸ್ವಾಮಿ ಸಕರಾತ್ಮಕವಾಗಿ ಸ್ಪಂದಿಸಿದರು.

ನಾಪತ್ತೆಯಾಗಿರುವ ಪತಿ ಹುಡುಕಿಕೊಡುವಂತೆ ಮಹಿಳೆಯೊಬ್ಬರು ಕಣೀರು ಹಾಕುತ್ತಾ ಮನವಿ ಮಾಡಿಕೊಂಡರು. ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್‌ ಇಲಾಖೆ ಅಧಿಕಾರಿಗಳಿಗೆ ಕುಮಾರಸ್ವಾಮಿ ಸೂಚಿಸಿದರು. ಕೆಲಸ ಖಾಯಂಗೆ ಒತ್ತಾಯಿಸಿ ಗುತ್ತಿಗೆ ಆಧಾರಿತ ಮಹಿಳಾ ಪೌರ ಕಾರ್ಮಿಕರು ಕಣೀರು ಹಾಕಿದರು. ಸಂಬಂಧಿತರೊಡನೆ ಚರ್ಚೆ ನಡೆಸಿ, ಅಗತ್ಯ ಕ್ರಮಕ್ಕೆ ಸೂಚಿಸಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.

ರೈತರ ಸಾಲ ಮನ್ನಾದಂತೆ ಕೊಳವೆ ಬಾವಿ ಸಾಲ ಮನ್ನಾ ಮಾಡಬೇಕು ಎಂದು ಕೆಲ ರೈತರಿಂದ ಒತ್ತಾಯ ಕೇಳಿ ಬಂದಾಗ, ಆಯ್ತಣ್ಣ ನೋಡೊಣ… ಎಂದು ನಸು ನಗುತ್ತಾ ಮುನ್ನಡೆದರು. 10 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಡಾ| ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ನಿವೇಶನ ಹಾಗೂ ಹಳೇಚಿಕ್ಕನಹಳ್ಳಿ ಎರಗುಂಟೆ ಗ್ರಾಮದ ದಲಿತರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ (ಪ್ರೊ| ಬಿ.ಕೃಷ್ಣಪ್ಪ) ಜಿಲ್ಲಾ ಸಮಿತಿ ಕಾರ್ಯಕರ್ತರು, ಹಾಸ್ಟೆಲ್‌ ಹೊರಸಂಪನ್ಮೂಲ ನೌಕರರಿಗೆ ನಿವೃತ್ತಿವರೆಗೆ ಸೇವಾ ಭದ್ರತೆ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಜಿಲ್ಲಾ ಸಮಿತಿ ಕಾರ್ಯಕರ್ತರು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಕೇರಳ ಮಾದರಿಯಲ್ಲಿ ಮೆಕ್ಕೆಜೋಳ, ಭತ್ತಮ ಹತ್ತಿ, ಸೂರ್ಯಕಾಂತಿಗೆ ಬೋನಸ್‌ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್‌ ಬಣ)ದ ಕಾರ್ಯಕರ್ತರು, ಬೆಂಬಲ ಬೆಲೆಯ ಖರೀದಿ ಕೆಂದ್ರ, ರೈತರ ರಾಷ್ಟ್ರೀಕೃತ ಬ್ಯಾಂಕಿನ ಸಾಲಮನ್ನಾ, ದಲ್ಲಾಲರಿಂದ ವಂಚನೆಗೊಳಗಾದ ರೈತರಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಸಲಾಯಿತು. 

ಬಾಪೂಜಿ ಆಸ್ಪತ್ರೆ ಮುಂಭಾಗದ ಸಿ.ಜೆ. ಆಸ್ಪತ್ರೆ ಕಾಂಪೌಂಡ್‌ಗೆ ಪುಟ್‌ಪಾತ್‌ಗಳಲ್ಲಿ ವ್ಯಾಪಾರ ಮಾಡಿಕೊಳ್ಳಲು ಮಳಿಗೆ ಕಟ್ಟಿಸಿಕೊಟ್ಟು ಶಾಶ್ವತ ಪರಿಹಾರ ದೊರಕಿಸಿಕೊಡುವಂತೆ ಒತ್ತಾಯಿಸಿ ಜಿಲ್ಲಾ ಫುಟ್‌ಪಾತ್‌ ವ್ಯಾಪಾರಿಗಳ ಸಂಘ, ನಿರ್ಗತಿಕ ಬಡ ಅಂಗವಿಕಲರಿಗೆ ಆಶ್ರಯ ಮನೆ ಕಲ್ಪಿಸಿಕೊಡುವಂತೆ ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘ, ಯುಬಿಡಿಟಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಒಂದು ವರ್ಷ ಗುತ್ತಿಗೆ ಆಧಾರದ ಮೇಲೆ ನಿಯೋಜಿಸಬೇಕು ಹಾಗೂ ಪ್ರತೀ ವರ್ಷ ಅರ್ಜಿ ಕರೆದು ಸಂದರ್ಶನ ಮಾಡದೇ, ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕಾರ್ಯಾನಿರ್ವಹಿಸಿದವರನ್ನೇ ಮುಂದುವರೆಸಿ ನಿಯೋಜಿಸುವಂತೆ ಯುಬಿಡಿಟಿ ಇಂಜಿನಿಯರಿಂಗ್‌ ಕಾಲೇಜು ಅತಿಥಿ ಉಪನ್ಯಾಸಕರು ಸಿಎಂಗೆ ಮನವಿ ಸಲ್ಲಿಸಿದರು.

ದಾವಣಗೆರೆಯಲ್ಲಿ ಕೈಗಾರಿಕೆಗಳನ್ನು ಹಾಕಬೇಕೆಂದು ಒತ್ತಾಯಿಸಿ ಆಲ್‌ ಇಂಡಿಯಾ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌ ಜಿಲ್ಲಾ ಸಮಿತಿ, ಅಕ್ಷರ ದಾಸೋಹ ಬಿಸಿಯೂಟ ತಯಾರಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ ರಾಜ್ಯ ಸಮಿತಿ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಜಾರಿ ಹಾಗೂ ವೀರಶೈವ ಜಂಗಮರಿಗೆ ಬೇಡ ಜಂಗಮ ಎಂದು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವುದನ್ನು ತಡೆಯುವಂತೆ ಒತ್ತಾಯಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಜಿಲ್ಲಾ ಸಮಿತಿ ಕಾರ್ಯಕರ್ತರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ಕಿಡ್ನಿ ವೈಫಲ್ಯದಿಂದ ಡಯಾಲಿಸಿಸ್‌ ಗೆ ಒಳಗಾಗಿರುವ ರೋಗಿಗಳಿಗೆ ಮಸಾಶನ ನೀಡುವಂತೆ ತುಮಕೂರು ಶ್ರೀ ಸಿದ್ಧಗಂಗಾಮಠದ ಅಧ್ಯಕ್ಷ ಶ್ರೀ ಸಿದ್ಧಲಿಂಗಸ್ವಾಮಿ, ಉಪನ್ಯಾಸಕ ಹಾಗೂ ಪ್ರಾಂಶುಪಾಲರ ವೇತನಕ್ಕೆ ಸಂಬಂಧಿಸಿದಂತೆ ಕುಮಾರ್‌ ನಾಯಕ್‌ ವರದಿ ಶಿಫಾರಸು ಯಥಾವತ್ತಾಗಿ ಜಾರಿ ಮತ್ತು ಉಪನ್ಯಾಸಕರ ಹಾಗೂ ಪ್ರಾಂಶುಪಾಲರ ಕಾಲ್ಪನಿಕ ವೇತನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಕಾರ್ಯಕರ್ತರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. 

ಟಾಪ್ ನ್ಯೂಸ್

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.