ಪುಲ್ವಾಮಾ ಘಟನೆ ಪ್ರಶ್ನಿಸಿದರೆ ದೇಶದ್ರೋಹಿ ಪಟ್ಟ


Team Udayavani, Mar 7, 2019, 8:53 AM IST

dvg-3.jpg

ದಾವಣಗೆರೆ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಘಟನೆಯ ಜವಾಬ್ದಾರಿ ಮತ್ತು ಹೊಣೆಗಾರಿಕೆಯ ಬಗ್ಗೆ ಪ್ರಶ್ನಿಸಿದವರಿಗೆ ದೇಶದ್ರೋಹಿ, ರಾಷ್ಟ್ರ ವಿರೋಧಿ ಚಟುವಟಿಕೆಯ ಪಟ್ಟ ಕಟ್ಟಲಾಗುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿ ಮುರುಳೀಧರ್‌ ಹಾಲಪ್ಪ ದೂರಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ಬಾಪೂಜಿ ಎಂಬಿಎ ಸಭಾಂಗಣದಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಸಿದ್ಧತಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಪುಲ್ವಾಮಾದ ಘಟನೆ ಕುರಿತಂತೆ ಟಿವಿ, ರೇಡಿಯೋ, ಸಾಮಾಜಿಕ ಜಾಲತಾಣದಲ್ಲಿ ಬಗೆಬಗೆಯ ಚರ್ಚೆ ನಡೆಯುತ್ತಿವೆ. ಈ ಕ್ಷಣದವರೆಗೆ ಆ ಘಟನೆಗೆ ಮೂಲ ಕಾರಣರು ಯಾರು ಎಂಬುದರ ವಿಷಯವಾಗಿ ಜವಾಬ್ದಾರಿ ಸ್ಥಾನದಲ್ಲಿರುವ ಯಾರೊಬ್ಬರು ಸಹ ಅಧಿಕೃತ ಹೇಳಿಕೆಯನ್ನೇ ನೀಡಿಲ್ಲ. ಯಾವುದೇ ಸಂಬಂಧವೇ ಇಲ್ಲದ ಅಮಿತ್‌ ಶಾ ಹೇಳಿಕೆ ಕೊಡುತ್ತಾರೆ. ಪುಲ್ವಾಮಾ ಘಟನೆಯ ಬಗ್ಗೆ
ಹೇಳಿಕೆ ನೀಡಲು ಅವರಿಗೆ ಯಾವುದಾದರೂ ಸಂವಿಧಾನತ್ಮಕ ಜವಾಬ್ದಾರಿ ನೀಡಲಾಗಿದೆಯೇ ಎಂದು ಪ್ರಶ್ನಿಸಿದರು.

ಪುಲ್ವಾಮಾ ಘಟನೆ ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಲೆ ತಗ್ಗಿಸುವ ವಿಚಾರ. ಪುಲ್ವಾಮಾದ ಘಟನೆಯಲ್ಲಿ 44 ಜನ ಸಿಆರ್‌ಪಿಎಫ್‌ ಯೋಧರು ಹುತಾತ್ಮರಾಗಲಿಕ್ಕೆ ಆಡಳಿತ, ಗುಪ್ತಚರ ಇಲಾಖೆ ವೈಫಲ್ಯವೋ ಏನೂ ಗೊತ್ತಿಲ್ಲ. ಆ ಘಟನೆಯ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರ ಮೂವರು ಸಲಹೆಗಾರಾಗಲಿ, ಜವಾಬ್ದಾರಿಯ ಸ್ಥಾನದಲ್ಲಿರುವ ಯಾರೂ ಸಹ ಅಧಿಕೃತ ಹೇಳಿಕೆಯನ್ನೇ ಕೊಟ್ಟಿಲ್ಲ. ಎಂದು ಹೇಳಿದರು. 

ಫೆ. 14 ರಂದು ಮಧ್ಯಾಹ್ನ 3 ಗಂಟೆ 8 ನಿಮಿಷಕ್ಕೆ ಪುಲ್ವಾಮಾದ ಘಟನೆ ನಡೆದಿದ್ದರೂ ದೇಶದ ಮಹಾನ್‌ ಕಾವಲುಗಾರ, ಭಾರತ ಮಾತ್ರವಲ್ಲ ವಿಶ್ವಮಾನ್ಯರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿಕೆ ಕೊಟ್ಟಿದ್ದು ಸಂಜೆ 6ಕ್ಕೆ. ಉತ್ತರಾಂಚಲ್‌ ಪ್ರದೇಶದ ನೈನಿತಾಲ್‌ ಅರಣ್ಯಧಾಮದಲ್ಲಿ
ಶೂಟಿಂಗ್‌ನಲ್ಲಿ ನಿರತರಾಗಿದ್ದಂತಹ ದೇಶದ ಮಹಾನ್‌ ಕಾವಲುಗಾರ 4 ಗಂಟೆಗಳ ಕಾಲ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಪುಲ್ವಾಮಾದ ಘಟನೆಯಲ್ಲಿ ಹುತಾತ್ಮರ ಶವದ ಪೆಟ್ಟಿಗೆಗಳನ್ನು ಪಾಲಂ ವಿಮಾನ ನಿಲ್ದಾಣಕ್ಕೆ ತರಲಿಕ್ಕೂ ದೇಶದ ಮಹಾನ್‌ ಕಾವಲುಗಾರ ಒಂದು ಗಂಟೆ ಕಾಯಿಸಿದರು.

ಇಡೀ ದೇಶ ಶೋಕಾಚರಣೆ ನಡೆಸುತ್ತಿದ್ದರೆ ಮೋದಿಯವರು ಪುಲ್ವಾಮಾ ಘಟನೆಯನ್ನೇ ಎನ್‌ಕ್ಯಾಷ್‌ ಮಾಡಿಕೊಳ್ಳುವ ಉದ್ದೇಶದಿಂದ ರಾಜಕೀಯ ರ್ಯಾಲಿಯಲ್ಲಿ ತೊಡಗಿದ್ದರು ಎಂದು ಆರೋಪಿಸಿದರು. ಅಧಿಕಾರಕ್ಕೆ ಬಂದ 4 ವರ್ಷ 7 ತಿಂಗಳಲ್ಲಿ ಮೋದಿ 61 ದೇಶಗಳ ಪ್ರವಾಸ ಮಾಡಿದ್ದಾರೆ. ಅವರಂತಹ ವಿದೇಶ ಪ್ರವಾಸದ ಎಕ್ಸ್‌ಪರ್ಟ್‌…. ಇನ್ನೊಬ್ಬರಿಲ್ಲ ಎಂದು ವ್ಯಂಗ್ಯವಾಡಿದರು.

ಪುಲ್ವಾಮಾ ಮಾತ್ರವಲ್ಲ ಉರಿ, ಉದಾಂಪುರ, ಪಠಾಣ್‌ಕೋಟ್‌, ಡೊಕ್ಲಾಮಾ… ಘಟನೆಗಳ ಬಗ್ಗೆ ಯಾರಾದರೂ ಯಾವುದಾದರೂ ಪ್ರಶ್ನೆ ಕೇಳಿದರೆ ಅವರಿಗೆ ದೇಶದ್ರೋಹದ ಪಟ್ಟ ಕಟ್ಟಲಾಗುತ್ತದೆ. ಯುವಕರು, ಮಹಿಳೆಯರು ಆ ಘಟನೆಗಳ ಬಗ್ಗೆ ಪ್ರಶ್ನೆ ಕೇಳಬೇಕು ಎಂದು ತಿಳಿಸಿದರು. 

ಡಾ| ಶಿವಕುಮಾರ ಸ್ವಾಮಿ ಲಿಂಗೈಕ್ಯರಾದ ಸಂದರ್ಭದಲ್ಲಿ ದೆಹಲಿ ಬಿಜೆಪಿಯ ಯಾವುದೇ ಮುಖಂಡರು ಸಿದ್ಧಗಂಗೆಯತ್ತ ಸುಳಿಯಲೇ ಇಲ್ಲ. ರಾಜ್ಯ ನಾಯಕರು ಕೈ ಕಾಲು ಹಿಡಿದುಕೊಂಡಿದ್ದಕ್ಕೆ ಕೊನೆಯದಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಎಲ್ಲಾ ಮುಗಿಯುವಾಗ ಬಂದರು.
ಕೇಂದ್ರ ಸರ್ಕಾರ ವೀರಶೈವ, ಲಿಂಗಾಯತರನ್ನ ಯಾಕೆ ಸಚಿವರನ್ನಾಗಿ ಮಾಡಿಲ್ಲ ಎಂದು ಪ್ರಶ್ನಿಸಿದ ಒಕ್ಕಲಿಗ ಸಮುದಾಯದ ಸದಾನಂದಗೌಡರಿಂದ ರೈಲ್ವೆ ಖಾತೆಯನ್ನ ಕಿತ್ತುಕೊಂಡರು ಎಂದರು. 

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ. ಮಂಜಪ್ಪ ಮಾತನಾಡಿ, ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ರವರೇ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ. ಅವರನ್ನ ಗೆಲ್ಲಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
 
ಕಪಿಸಿಸಿ ಕಾರ್ಯದರ್ಶಿಗಳಾದ ರಾಜು ಜಮಖಂಡಿ, ಖಾದರ್‌ ಮೊಹಿದ್ದೀನ್‌ ಶೇಖ್‌, ಮೇಯರ್‌ ಶೋಭಾ ಪಲ್ಲಾಗಟ್ಟೆ, ಮುದೇಗೌಡ್ರ ಗಿರೀಶ್‌, ಅಮೃತೇಶ್ವರಸ್ವಾಮಿ, ಬಿ.ಕೆ. ಪರಶುರಾಮ್‌, ಬಿ.ಎಸ್‌. ನಂಜಾನಾಯ್ಕ, ಕೆ.ಸಿ. ಲಿಂಗರಾಜ್‌, ಡೋಲಿ ಚಂದ್ರು, ಯತಿರಾಜ್‌, ಅಲಿ ರಹಮತ್‌, ಎ. ನಾಗರಾಜ್‌, ಕೆ.ಜಿ. ಶಿವಕುಮಾರ್‌, ಇತರರು ಇದ್ದರು. ದಿನೇಶ್‌ ಕೆ. ಶೆಟ್ಟಿ ಸ್ವಾಗತಿಸಿದರು. 

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.