ರಾಜ್ಯ ಸರ್ಕಾರದಿಂದ ಜನಪರ ಆಡಳಿತ
Team Udayavani, Mar 5, 2017, 12:44 PM IST
ದಾವಣಗೆರೆ: ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಪ್ರಾಮಾಣಿಕವಾಗಿ ಅಭಿವೃದ್ಧಿ ಹಾಗೂ ಜನಪರ ಆಡಳಿತ ನಡೆಸುತ್ತಿದೆ. ಆದರೂ, ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದವರು. ಅವರ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಸ್ಟೀಲ್ ಬ್ರಿಡ್ಜ್ ನಿರ್ಮಾಣದ ವಿರೋಧವೇ ಬಿಜೆಪಿ ಅಭಿವೃದ್ಧಿ ಪರ ಇಲ್ಲ ಎಂಬುದು ಸಾರ್ವಜನಿಕರಿಗೆ ಗೊತ್ತಾಗಿದೆ ಎಂದು ರಾಜ್ಯ ಸರ್ಕಾರದ ದೆಹಲಿ ಹೆಚ್ಚುವರಿ ಪ್ರತಿನಿಧಿ ಸಲೀಂ ಅಹಮದ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸುಳ್ಳಿನ ಸರದಾರ. ಬರೀ ಭಾಷಣ ಮಾಡುತ್ತಾರೆ. ಜನಹಿತ ಕಾಪಾಡುವ ಕಾಂಗ್ರೆಸ್ ನೇತೃತ್ವದಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಜನಸಾಮಾನ್ಯರು ಬಯಸುತ್ತಿದ್ದಾರೆ ಎಂದರು. ತ್ಯಾಗ-ಬಲಿದಾನದಿಂದ ಕಟ್ಟಿರುವ ಕಾಂಗ್ರೆಸ್ ಪಕ್ಷಕ್ಕೆ 130 ವರ್ಷಗಳ ಇತಿಹಾಸವಿದೆ.
ನಿಷ್ಠಾವಂತ ಕಾರ್ಯಕರ್ತರಿಗೆ ಸ್ಥಾನಮಾನ ಖಚಿತ ಎಂಬುದಕ್ಕೆ ತಾವೇ ಉದಾಹರಣೆ. ಎನ್‌ಎಸ್‌ಯುಐ ಕಾಲೇಜು ಮಟ್ಟದ ಸಂಘಟನೆಯಿಂದ ಹಿಡಿದು ರಾಷ್ಟ್ರೀಯ ಮಟ್ಟದ ಅಧ್ಯಕ್ಷ ಹುದ್ದೆ ನಿರ್ವಹಿಸಿದ್ದ ನಾನೀಗ ರಾಜ್ಯ ಸರ್ಕಾರದ ದೆಹಲಿ ಹೆಚ್ಚುವರಿ ಪ್ರತಿನಿಧಿಯಾಗಿ ನೇಮಕಗೊಂಡಿದ್ದೇನೆ ಎಂದು ಹೇಳಿದರು. ಈ ಹಿಂದೆ ಪ್ರಧಾನಿ ಆಗಿದ್ದ ರಾಜೀವ್ ಗಾಂಧಿಯವರ ದೂರದೃಷ್ಟಿ ಫಲವಾಗಿಯೇ ಇಂದು ಎಲ್ಲರ ಕೈಯಲ್ಲಿ ಮೊಬೈಲ್ ಫೋನ್ ಹಾಗೂ ಲ್ಯಾಪ್‌ಟಾಪ್ ಇರುವಂತಾಗಿದೆ.
18 ವರ್ಷ ತುಂಬಿದವರಿಗೆ ಮತದಾನದ ಹಕ್ಕು ಸಿಕ್ಕಿದ್ದು ಅವರಿಂದಲೇ. ಯುವ ಜನಾಂಗ ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಭಾಗವಹಿಸಬೇಕೆಂಬುದು ರಾಜೀವ್ ಗಾಂಧಿಯವರ ಆಶಯವಾಗಿತ್ತು ಎಂದ ಅವರು, ಸರ್ವ ಜನಾಂಗದ ಅಭಿವೃದ್ಧಿಗಾಗಿ ಕಾಂಗ್ರೆಸ್ ಬದ್ಧ ಎಂಬ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ.
ಕಾರ್ಯಕರ್ತರು ಅವುಗಳನ್ನು ಜನಸಾಮಾನ್ಯರಿಗೆ ಮನವರಿಕೆಮಾಡಿಕೊಡಬೇಕಿದೆ ಎಂದು ಕೋರಿದರು. ರಾಜ್ಯ ಸರ್ಕಾರದ ದೆಹಲಿ ಹೆಚ್ಚುವರಿ ಪ್ರತಿನಿಧಿಯಾಗಿರುವ ತಾವು, ಕೇಂದ್ರ ಸಚಿವರು ಹಾಗೂ ರಾಜ್ಯದ ಸಂಸದರ ಸಹಕಾರದೊಂದಿಗೆ ಸರ್ಕಾರದ ಅಭಿವೃದ್ಧಿ ಯೋಜನೆಗಳ ಜಾರಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ತಿಳಿಸಿದರು.
ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕೈಗೊಳ್ಳುವ ನಿಟ್ಟಿನಲ್ಲಿ ಸರಿಯಾಗಿ ಸ್ಪಂದಿಸುತ್ತಿಲ್ಲ. ಸತತ ಎರಡು ವರ್ಷದ ಬರ ಪರಿಸ್ಥಿತಿಯಿಂದ ಜನರು ತತ್ತರಿಸಿದ್ದು, ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಕೋರಿದ ನೆರವು ಸಹ ಪ್ರಧಾನಿ ನೀಡಿಲ್ಲ. ರಾಜ್ಯ ಸರ್ಕಾರಕ್ಕೆ ತೊಂದರೆ ಕೊಡಬೇಕೆನ್ನುವ ಉದ್ದೇಶ ಕೇಂದ್ರಕ್ಕಿದೆ ಎಂದು ದೂರಿದರು.
ಹರಿಹರ ನಗರಸಭೆ ಮಾಜಿ ಅಧ್ಯಕ್ಷ ರಾಮಜ್ಜ, ಪುಷ್ಪ ಲಕ್ಷ್ಮಣಸ್ವಾಮಿ, ಅರಸೀಕೆರೆ ಅಂಜಿನಪ್ಪ, ಪ್ರಕಾಶ್ ಪಾಟೀಲ್, ಚನ್ನಗಿರಿಯ ಅಮಾನುಲ್ಲಾ ಮಾತನಾಡಿದರು. ಪಾಲಿಕೆ ಸದಸ್ಯರಾದ ತಿಪ್ಪಣ್ಣ, ಮಂಜಮ್ಮ, ಮುಖಂಡ ಆರ್. ಎಸ್. ಶೇಖರಪ್ಪ, ಮಾಜಿ ಮೇಯರ್ ನಾಗಭೂಷಣ್, ಹರಿಹರ ನಗರಸಭೆ ಅಧ್ಯಕ್ಷೆ ಆಶಾ ಮರಿಯೋಜಿರಾವ್ ಇತರರು ವೇದಿಕೆಯಲ್ಲಿದ್ದರು. ಕೆಎಸ್‌ಐಸಿ ಮಾಜಿ ಅಧ್ಯಕ್ಷ ಡಿ.ಬಸವರಾಜ್ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.