28ಕ್ಕೆ ಬಲಿಜ ಸಮಾಜ ರಾಜ್ಯಮಟ್ಟದ ಸಮಾವೇಶ
Team Udayavani, May 23, 2017, 1:21 PM IST
ದಾವಣಗೆರೆ: ಬಲಿಜ ಸಮಾಜಕ್ಕೆ ಪುನಾಃ ಪ್ರವರ್ಗ-2 ಎ ಮೀಸಲಾತಿ ಒದಗಿಸುವುದು ಒಳಗೊಂಡಂತೆ ವಿವಿಧ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಮೇ. 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಬೃಹತ್ ಬಲಿಜ ಸಮ್ಮೇಳನದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸರ್ಕಾರಕ್ಕೆ ಸಮಾಜದ ಶಕ್ತಿ ತೋರಿಸಬೇಕು ಎಂದು ಸಂಸದ, ಕರ್ನಾಟಕ ಬಲಿಜ ಮಹಾಸಭಾದ ರಾಜ್ಯ ಅಧ್ಯಕ್ಷ ಪಿ.ಸಿ. ಮೋಹನ್ ಮನವಿ ಮಾಡಿದ್ದಾರೆ.
ರಾಜ್ಯ ಮಟ್ಟದ ಬೃಹತ್ ಬಲಿಜ ಸಮ್ಮೇಳನದ ಹಿನ್ನೆಲೆಯಲ್ಲಿ ಸೋಮವಾರ ಬಲಿಜ ವಿದ್ಯಾರ್ಥಿ ನಿಲಯದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದಿನ ಸಮ್ಮೇಳನದಲ್ಲಿ 10 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವರು. ದಾವಣಗೆರೆ ಜಿಲ್ಲೆಯ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದರು.
ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಕ್ಷೇತ್ರದಲ್ಲಿ ಹಿಂದುಳಿದಿರುವುದ ಮನಗಂಡು ಬಲಿಜ ಸಮಾಜಕ್ಕೆ ಪ್ರವರ್ಗ-2ಎ ಮೀಸಲಾತಿ ಕಲ್ಪಿಸಲಾಗಿತ್ತು. 2014ರ ನಂತರ ಏಕಾಏಕಿ ಪ್ರವರ್ಗ-2ಎ ಮೀಸಲಾತಿ ಪಟ್ಟಿಯಿಂದ ಕೈ ಬಿಡಲಾಗಿದೆ. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಸಮಾಜವನ್ನ ಪ್ರವರ್ಗ-2ಎ ಮೀಸಲಾತಿ ಪಟ್ಟಿಗೆ ಸೇರಿಸಲು ಆದೇಶಿಸಿದ್ದರು.
ಆದರೆ, ಈವರೆಗೆ ಪಟ್ಟಿಯಲ್ಲಿ ಸೇರ್ಪಡೆಯಾಗಿಲ್ಲ. ಬೆಂಗಳೂರು ಸಮ್ಮೇಳನದ ಮೂಲಕ ಸಮಾಜಕ್ಕೆ ಮತ್ತೆ ಪ್ರವರ್ಗ-2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಲಾಗುವುದು ಎಂದು ತಿಳಿಸಿದರು. ಬಲಿಜ ಸಮಾಜದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ 25 ದಿನಗಳ ಹಿಂದೆಯಷ್ಟೇ ಕರ್ನಾಟಕ ಬಲಿಜ ಮಹಾಸಭಾ ಅಸ್ತಿತ್ವಕ್ಕೆ ಬಂದಿದೆ.
ಮಹಾಸಭಾದಲ್ಲಿ ಪ್ರತಿ ಜಿಲ್ಲೆಯವರೆಗೂ ಸೂಕ್ತ ಪ್ರಾತಿನಿಧ್ಯ, ಸ್ಥಾನಮಾನ ನೀಡಲಾಗುವುದು. ಸಮಾಜದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ನೀಡಲಾಗುವ ಅತ್ಯಮೂಲ್ಯ ಸಲಹೆಗಳನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ತಿಳಿಸಿದರು. ರಾಜಕೀಯ ಕ್ಷೇತ್ರದಲ್ಲಿ ಬಲಿಜ ಸಮಾಜಕ್ಕೆ ಸೂಕ್ತ ಸ್ಥಾನಮಾನ ದೊರೆಯುತ್ತಿಲ್ಲ.
ಅನೇಕ ಕಡೆ ಕಡಿಮೆ ಸಂಖ್ಯೆಯಲ್ಲಿ ಸಮಾಜ ಬಾಂಧವರು ಇರುವ ಹಿನ್ನೆಲೆಯಲ್ಲಿ ಜಿಲ್ಲಾ, ತಾಲೂಕು, ಗ್ರಾಮ ಪಂಚಾಯತಿ, ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚಿ ಪ್ರತಿನಿಧಿಗಳು ಇಲ್ಲದಂತಾಗಿದೆ. ಬಲಿಜ ಸಮಾಜಕ್ಕೆ ರಾಜಕೀಯವಾಗಿ ಸೂಕ್ತ ಸ್ಥಾನಮಾನ, ಪ್ರಾತಿನಿಧ್ಯ ದೊರೆಯುವಂತಾಗಬೇಕಾದಲ್ಲಿ ರಾಜಕೀಯ ಮೀಸಲಾತಿ ಅತ್ಯಗತ್ಯ.
ಸರ್ಕಾರ ಬಲಿಜ ಸಮಾಜಕ್ಕೆ ರಾಜಕೀಯದ ಜೊತೆಗೆ ಉದ್ಯೋಗ ಕ್ಷೇತ್ರದಲ್ಲೂ ಮೀಸಲಾತಿ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ಬಲಿಜ ಸಮಾಜಕ್ಕೆ ಸೇರಿದ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳ ಸಂಖ್ಯೆ ತೀರಾ ಕಡಿಮೆ. ಯಾರು ಐಎಎಸ್, ಐಪಿಎಸ್, ಕೆಎಎಸ್ ಮಾಡಲು ಇಚ್ಚಿಸುತ್ತಾರೋ
-ಅಂತಹವರನ್ನು ದತ್ತು ತೆಗೆದುಕೊಂಡು ಐಎಎಸ್, ಐಪಿಎಸ್, ಕೆಎಎಸ್‌ಗೆ ಉಚಿತ ಕೋಚಿಂಗ್ ಕೊಡಿಸುವ ಜೊತೆಗೆ ಪರೀಕ್ಷೆ ಬರೆದು, ಅಧಿಕಾರಿಯಾಗುವರೆಗೆ ಎಲ್ಲ ರೀತಿಯ ನೆರವು, ಸಹಕಾರ ನೀಡಲು ಕರ್ನಾಟಕ ಬಲಿಜ ಮಹಾಸಭಾ ನಿರ್ಧರಿಸಿದೆ. ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳಾದವರು ದೇಶ, ರಾಜ್ಯದ ಸೇವೆ ಮಾಡುವ ಜೊತೆಗೆ ಹುಟ್ಟಿದ ಸಮಾಜದ ಅಭಿವೃದ್ಧಿಗೆ ಶ್ರಮಿಸಲಿ ಎಂಬುದು ಸಮಾಜ ಬಾಂಧವರ ಆಶಯ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಅಭ್ಯಾಸ ಮಾಡಲಿಕ್ಕೆ ಬರುವಂತಹ ಹೊರ ಜಿಲ್ಲೆಯವರಿಗೆ ಈಗಿರುವ ವಿದ್ಯಾರ್ಥಿ ನಿಲಯದಲ್ಲಿ ಹೆಚ್ಚಿನ ಪ್ರವೇಶ ನೀಡಲಿಕ್ಕೆ ಆಗುತ್ತಿಲ್ಲ. ಹಾಗಾಗಿ ಸುಸಜ್ಜಿತ ಕಟ್ಟಡವನ್ನು ಬಾಡಿಗೆಗೆ ತೆಗೆದುಕೊಂಡು ಅಲ್ಲಿ ವ್ಯವಸ್ಥೆ ಮಾಡಿಕೊಡಲಾಗುವುದು. ಸಮಾಜದವರು ಉತ್ತಮ ವಿದ್ಯಾರ್ಥಿಗಳಾಗಿ ಹೊರ ಹೊಮ್ಮಬೇಕು.
ಸಮಾಜದ ಸೇವೆ ಮಾಡಬೇಕು ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಭೀಮಣ್ಣ ತಹಶೀಲ್ದಾರ್ ಮಾತನಾಡಿ, ಜಿಲ್ಲೆಯ ಸಮಾಜ ಬಾಂಧವರು ಮೇ. 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಬೃಹತ್ ಬಲಿಜ ಸಮ್ಮೇಳನದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದರು.
ಕರ್ನಾಟಕ ಬಲಿಜ ಮಹಾಸಭಾದ ರಾಜ್ಯ ಸಂಚಾಲಕಿ ಪ್ರಮೀಳಾನಾಯ್ಡು, ಪ್ರಧಾನ ಕಾರ್ಯದರ್ಶಿ ರಾಮಲಿಂಗಪ್ಪ, ಶಂಕರಪ್ಪ, ಬಾಲಾಜಿ, ಶ್ರೀನಿವಾಸ್, ದಿನೇಶ್‌ಬಾಬು, ಶಂಕರಪ್ಪ, ಎನ್.ಬಿ. ಶಿವಕುಮಾರ್, ರಘುನಾಯ್ಡು, ವೈ.ಸಿ. ತಿಪ್ಪೇಸ್ವಾಮಿ ಇತರರು ಇದ್ದರು. ಗದಿಗೇಶ್ ಕೆ. ಶಿರಸಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.