ಸುದೀರ್ಘ ಅವಧಿ ನಂತರ ರೈಲು ಬಂತು
Team Udayavani, May 23, 2020, 6:16 AM IST
ದಾವಣಗೆರೆ: ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣ ಹಿನ್ನೆಲೆಯಲ್ಲಿ ದೇಶಾದ್ಯಂತ ಸ್ಥಗಿತಗೊಳಿಸಿದ್ದ ರೈಲು ಸಂಚಾರ ಆರಂಭವಾಗಿದ್ದು, ಶುಕ್ರವಾರ ನಗರದ ರೈಲ್ವೆ ನಿಲ್ದಾಣಕ್ಕೆ ಬೆಂಗಳೂರು-ಬೆಳಗಾವಿ ವಿಶೇಷ ರೈಲು ಆಗಮಿಸಿತು.
ಬೆಂಗಳೂರಿನಿಂದ ಹಲವು ಪ್ರಮಾಣಿಕರು ನಗರಕ್ಕೆ ಆಗಮಿಸಿದರೆ, ಹಲವರು ಹುಬ್ಬಳ್ಳಿ ಹಾಗೂ ಬೆಳಗಾವಿ ಕಡೆಗೆ ಪ್ರಯಾಣ ಬೆಳೆಸಿದರು. ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ನಿನ್ನೆಯಿಂದ (ಮೇ 22)ರಿಸರ್ವೇಷನ್ ಟಿಕೆಟ್ ಕೌಂಟರ್ ಪ್ರಾರಂಭಿಸಲಾಗಿದ್ದು, ಜೂ. 1 ರಿಂದ ಪ್ರಾರಂಭವಾಗುವ 100 ಜೋಡಿ ರೈಲು ಸೇವೆಗಳಿಗೆ ಕಾಯ್ದಿರಿಸಿದ ಟಿಕೆಟ್ ಬುಕ್ ಮಾಡಲು ಪಿಆರ್‌ಎಸ್ ಕೌಂಟರ್ ಕಾರ್ಯ ನಿರ್ವಹಿಸಲಿವೆ.
ಲಾಕ್‌ಡೌನ್ ಸಂದರ್ಭದಲ್ಲಿ ರದ್ದುಪಡಿಸಲಾಗಿದ್ದ ರೈಲುಗಳ ಟಿಕೆಟ್ ಹೊಂದಿರುವ ಪ್ರಯಾಣಿಕರ ಹಣ ಮರುಪಾವತಿಯ ಸೌಲಭ್ಯವನ್ನು ಸಹ ಈ ಕೌಂಟರ್‌ಗಳಲ್ಲಿ ಮೇ 25 ರಿಂದ ಪಡೆಯಬಹುದು. ಬೆಂಗಳೂರಿನಿಂದ ಬೆಳಗಾವಿಗೆ (ವಾರದಲ್ಲಿ ಮೂರು ದಿನ) ವಿಶೇಷ ರೈಲು ಸಂಚಾರ ಪ್ರಾರಂಭಿಸಲಾಗಿದೆ. ಸಾಮಾಜಿಕ ಅಂತರ ಮತ್ತು ಇತರೆ ನಿಗದಿತ ಕೋವಿಡ್ -19 ಕ್ರಮ ವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಬುಕಿಂಗ್ ಕಚೇರಿ ಸೇರಿದಂತೆ ರೈಲು ನಿಲ್ದಾಣ ಆವರಣದಲ್ಲಿ ಸ್ವತ್ಛತೆ, ನೈರ್ಮಲ್ಯ ಕಾಪಾಡಿಕೊಳ್ಳಲು ಪ್ರಯಾಣಿಕರು ಸಹಕರಿಸಬೇಕು ಎಂದು ಪ್ರಕಟಣೆ ಮೂಲಕ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್
Davanagere: ಮಹಾನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಹೋರ್ಡಿಂಗ್ ತೆರವು
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Davanagere ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಪ್ರಾರಂಭಕ್ಕೆ ತಿಕ್ಕಾಟ; ಕೊನೆಗೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.