ಮುಂದಿನ ಚುನಾವಣೆಯಲ್ಲಿ ಗೆಲುವು ನಮ್ಮದೇ
Team Udayavani, May 21, 2017, 12:47 PM IST
ದಾವಣಗೆರೆ: ಜಿಲ್ಲೆಯಲ್ಲಿನ ಪಕ್ಷದ ಬಲ, ಕಾರ್ಯಕರ್ತರ ಉತ್ಸಾಹ ನೋಡಿದರೆ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಎಐಸಿಸಿ ಕಾರ್ಯದರ್ಶಿ ಮಧು ಯಾಕ್ಷಿಗೌಡ ಹೇಳಿದ್ದಾರೆ. ಬಾಪೂಜಿ ಅತಿಥಿ ಗೃಹದಲ್ಲಿ ಶನಿವಾರ ಕಾರ್ಯಕರ್ತರ, ಪದಾಧಿಕಾರಿಗಳ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ದಾವಣಗೆರೆ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ 7ರಲ್ಲಿ ಕಾಂಗ್ರೆಸ್ ಗೆದ್ದಿದೆ. ಆ ಮೂಲಕ ಸರ್ಕಾರದ ರಚನೆಗೆ ತನ್ನದೇ ಆದ ಕೊಡುಗೆ ನೀಡಿದೆ. ಇಲ್ಲಿನ ಕಾರ್ಯಕರ್ತರ ಉತ್ಸಾಹ ನೋಡಿದರೆ ನಾವು ಮುಂದಿನ ಚುನಾವಣೆ ಗೆಲ್ಲುವುದರಲ್ಲಿ ಯಾವುದೇ ಅನುಮಾನ ಇಲ್ಲ. ಇದೇ ಸಂದೇಶವನ್ನು ನಾನು ಪಕ್ಷದ ಅಧ್ಯಕ್ಷ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ನೀಡಲಿದ್ದೇನೆ ಎಂದರು.
ಭ್ರಷ್ಟಾಚಾರ ವಿರುದ್ಧ ಮಾತನಾಡುವ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದು 3 ವರ್ಷ ಕಳೆದರೂ ಇದುವರೆಗೆ ಲೋಕಪಾಲ ನೇಮಕಕ್ಕೆ ಮುಂದಾಗಿಲ್ಲ. ಇನ್ನು ರಾಜ್ಯದಲ್ಲಿ ಈ ಹಿಂದೆ ಸಿಎಂ ಆಗಿದ್ದಾಗಲೇ ಭ್ರಷ್ಟಾಚಾರದ ಆರೋಪದಡಿ ಜೈಲಿಗೆ ಹೋಗಿ ಬಂದ ನಾಯಕನನ್ನು ಮತ್ತೆ ಕರೆತಂದು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ.
ಇದನ್ನೆಲ್ಲಾ ಜನ ನೋಡುತ್ತಿದ್ದಾರೆ ಎಂದು ಅವರು ಹೇಳಿದರು. ಪಕ್ಷದ ವರಿಷ್ಠರ ನಿರ್ದೇಶನದಂತೆ ನಾನು ಇಲ್ಲಿಗೆ ಮಾಹಿತಿ ಸಂಗ್ರಹಕ್ಕೆ ಬಂದಿದ್ದೇನೆ. ವರಿಷ್ಠರ ಪ್ರಕಾರ ಸತತವಾಗಿ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಸವಲತ್ತು ಕೊಡಿಸಬೇಕು. ಅವರ ಕುಟುಂಬಗಳು ನೆಮ್ಮದಿಯ ಜೀವನ ಕಟ್ಟಿಕೊಳ್ಳುವಂತೆ ಆಗಬೇಕು.
ಇದಕ್ಕೆ ಯೋಜನೆ ರೂಪಿಸಬೇಕಿದೆ. ಕಾರ್ಯಕರ್ತರು ತಮ್ಮ ಸಲಹೆ, ಸೂಚನೆಗಳನ್ನು ನಮಗೆ ಯಾವುದೇ ಸಂಕೋಚ ಇಲ್ಲದೆ ನೀಡಬೇಕು ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ಸತತ ಮೂರು ವರ್ಷಗಳ ಬರಗಾಲವಿದ್ದಾಗಲೂ ರಾಜ್ಯದ ಜನರು ಹಸಿವಿನಿಂದ ಬಳಲದಿರಲು ಅನ್ನಭಾಗ್ಯ ಯೋಜನೆ ಸಹಕಾರಿಯಾಗಿದೆ.
ಕೇಂದ್ರ ಸರ್ಕಾರದ ಅಸಹಕಾರದ ಮಧ್ಯೆಯೂ ರಾಜ್ಯ ಸರ್ಕಾರ ಸಮರ್ಥವಾಗಿ ಬರ ಪರಿಸ್ಥಿತಿ ನಿರ್ವಹಿಸಿದೆ. ಆದರೆ, ಸರ್ಕಾರದ ಎಲ್ಲಾ ಕಾರ್ಯಕ್ರಮ, ಯೋಜನೆ ಕುರಿತು ಪ್ರಚಾರದ ಕೊರತೆ ಇದೆ. ಜೊತೆಗೆ ವಿಪಕ್ಷದವರು ಅಪ ಪ್ರಚಾರ ಮಾಡುತ್ತಿದ್ದಾರೆ. ಕಾರ್ಯಕರ್ತರು ಇದನ್ನ ಸರಿಪಡಿಸುವತ್ತ ಗಮನ ಹರಿಸಬೇಕು.
ನಮ್ಮ ಸರ್ಕಾರದ ಸಾಧನೆಯನ್ನು ಜನರಿಗೆ ಮುಟ್ಟಿಸಲು ಮುಂದಾಗಬೇಕು ಎಂದು ಅವರು ಕರೆ ನೀಡಿದರು. ಪ್ರಸ್ತುತ ಕರ್ನಾಟಕ ರಾಜ್ಯ ಅಭಿವೃದ್ಧಿಯ ನಾಗಾಲೋಟದಲ್ಲಿದೆ. ಉದ್ಯೋಗ ಸೃಷ್ಟಿ, ಅಭಿವೃದ್ಧಿಯಲ್ಲಿ ಗುಜರಾತನ್ನು ಹಿಂದಿಕ್ಕಿದೆ. ಆದರೆ, ಬಿಜೆಪಿಯವರು ಇದಕ್ಕೆ ಬ್ರೇಕ್ ಹಾಕಲು ತಂತ್ರ ರೂಪಿಸುತ್ತಿದ್ದಾರೆ.
ಇದನ್ನು ತಡೆಯುವ ನಿಟ್ಟಿನಲ್ಲಿ ನಮ್ಮ ಕಾರ್ಯಕರ್ತರು ಶ್ರಮಿಸಬೇಕು. ಯಾವುದೇ ಕಾರಣಕ್ಕೂ ಬಿಜೆಪಿಯವರ ಒಡೆದು ಆಳುವ ನೀತಿ ಇಲ್ಲಿ ಕೆಲಸ ಮಾಡದಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು. ಬಿಜೆಪಿಯವರಿಗೆ ಪ್ರಜಾಪ್ರಭುತ್ವದ ಬಗ್ಗೆ ನಂಬಿಕೆ ಇಲ್ಲ.
ಧರ್ಮದ ಹೆಸರಲ್ಲಿ ರಾಜಕೀಯ ಮಾಡುವುದು ಅವರ ಗುರಿ ಎಂದ ಅವರು, ಇಂದು ನಮ್ಮ ಪಕ್ಷದ ಯುವ ಮುಸ್ಲಿಂ ನಾಯಕರು ಕಾಂಗ್ರೆಸ್ ಪಕ್ಷ ನಮಗೇನು ಮಾಡಿದೆ ಎಂಬ ಪ್ರಶ್ನೆ ಕೇಳುತ್ತಿದ್ದಾರೆ. ಅವರಿಗೆ ನಾವು ಬುದ್ಧಿ ಹೇಳಬೇಕಿದೆ. ಕಾಂಗ್ರೆಸ್ ಪಕ್ಷ ದೇಶದ ಅಖಂಡತೆಗಾಗಿ ದುಡಿದಿದೆ.
ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ ವೀರಪ್ಪ ಮೊಯಿಲಿ ಸಿಎಂ ಆಗಿದ್ದಾಗ ಮುಸ್ಲಿಂರಿಗೆ ಮೀಸಲಾತಿ ಕಲ್ಪಿಸಲಾಗಿದೆ. ಇಂತಹ ಹಲವು ಕೆಲಸಗಳನ್ನು ನಮ್ಮ ಪಕ್ಷ ಮಾಡಿರುವುದನ್ನು ಅವರಿಗೆ ಮನವರಿಕೆ ಮಾಡಿಕೊಡಬೇಕಿದೆ ಎಂದು ಅವರು ಹೇಳಿದರು. ಶಾಸಕರಾದ ವಡ್ನಾಳ್ ರಾಜಣ್ಣ, ಡಿ.ಜಿ. ಶಾಂತನಗೌಡ, ಎಂ.ಪಿ. ರವೀಂದ್ರ, ಕೆ. ಶಿವಮೂರ್ತಿ ನಾಯ್ಕ,
ಪಕ್ಷದ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ, ದಾವಣಗೆರೆ ಜಿಲ್ಲಾ ವೀಕ್ಷಕ ಹುಚ್ಚಪ್ಪ, ಮೇಯರ್ ಅನಿತಾ ಬಾಯಿ, ವಿಧಾನ ಪರಿಷತ್ ಮಾಜಿ ಸದಸ್ಯೆ ಜಲಜಾ ನಾಯ್ಕ, ಮುಖಂಡರಾದ ಅಸಗೋಡು ಜಯಸಿಂಹ, ಕೆಎಸ್‌ಐಸಿ ಮಾಜಿ ಅಧ್ಯಕ್ಷ ಡಿ. ಬಸವರಾಜ, ಪಕ್ಷದ ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ಬಿ.ಎಚ್. ವೀರಭದ್ರಪ್ಪ ಇತರರು ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.