ರಂಗಕಲೆ ಶಿಕ್ಷಣದ ಕಲಿಕೆಯ ಭಾಗ


Team Udayavani, Feb 26, 2017, 12:51 PM IST

dvg4.jpg

ದಾವಣಗೆರೆ: ರಂಗಕಲೆ ಶಿಕ್ಷಣದ ಕಲಿಕೆಯ ಒಂದು ಭಾಗ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಧಿಕಾರಿ ಜಿ.ಎಂ. ಬಸವಲಿಂಗಪ್ಪ ಹೇಳಿದರು. ನಗರದ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಶನಿವಾರ ಸಮಾನ ಮನಸ್ಕ ಸಂಘಟನೆಗಳ ಗೆಳೆಯರ ಬಳಗ ಏರ್ಪಡಿಸಿದ್ದ ದಾವಣಗೆರೆ ತಾಲೂಕಿನ ನರಗನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಪ್ರಕಾಶ್‌ ಕೊಡಗನೂರ್‌ ವಿರಚಿತ ಇಂಗ್ಲಿಷ್‌ ನಾಟಕಗಳ ರಂಗ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. 

ರಂಗಕಲೆ ಶಿಕ್ಷಣ ಪಠ್ಯದ ಒಂದು ಭಾಗವಾಗಿದೆ.  ಆದ್ದರಿಂದ ಮಕ್ಕಳು ಪಠ್ಯದಲ್ಲಿರುವ ಪಾತ್ರಗಳನ್ನು ರೂಢಿಸಿಕೊಂಡರೆ ಕಲಿಕಾ ನ್ಯೂನತೆ ಹೋಗಲಾಡಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು. ಗ್ರೀಕ್‌ ದೇಶ  ಹೊರತುಪಡಿಸಿದರೆ, ಭಾರತದಲ್ಲಿ ಮಾತ್ರ ಹೆಚ್ಚಾಗಿ ರಂಗಕಲೆ ಪ್ರಚಲಿತವಾಗಿದೆ.

ದೇಶದಲ್ಲಿ ರಾಮಾಯಣ-ಮಹಾಭಾರತದ ಕಾಲದಿಂದಲೂ ರಂಗ ಕಲೆ ಜೀವಂತವಾಗಿದ್ದು,  ಹಿಂದೆ ನಾಟಕ ಅಭಿನಯ ಮನೋಜ್ಞವಾಗಿ ಹಾಗೂ ರೂಢಿಗತವಾಗಿರುತ್ತಿತ್ತು ಎಂದು ಅವರು ಸ್ಮರಿಸಿದರು. ಶಿಕ್ಷಕ ಪ್ರಕಾಶ್‌ ಕೊಡಗನೂರ್‌ ಮನಸ್ಸು ಮಾಡಿದರೆ, ರೋಲ್‌ಪ್ಲೆಯ್ಸ  ಅನ್ನು ಧಾರವಾಹಿಯ ಹಂತಕ್ಕೆ ಕೊಂಡೊಯ್ದು ನರಗನಹಳ್ಳಿಯ ಮಕ್ಕಳನ್ನು ಕಿರುತೆರೆಗೆ ಪರಿಚರಿಸಬಹುದಾಗಿದೆ.

ಅವರು ಈ ರಂಗಪ್ರದರ್ಶನ ಸಿಡಿ ಮಾಡಿಸಿ, ಶಿಕ್ಷಣ ಇಲಾಖೆಗೆ  ನೀಡಿದರೆ, ಇಲಾಖೆಯ ನಲಿಕಲಿ ವಿಭಾಗಕ್ಕೆ ಕಳುಹಿಸಿಕೊಟ್ಟು, ನಲಿಕಲಿ ಯೋಜನೆಯಡಿ ರಾಜ್ಯದ ಎಲ್ಲ ಶಾಲಾ ಮಕ್ಕಳಿಗೂ ರಂಗಕಲೆಯ ಬಗ್ಗೆ ಪರಿಚಯಿಸಿಕೊಡಲಾಗುವುದು  ಎಂದು ಅವರು ತಿಳಿಸಿದರು. ಲಯನ್ಸ್‌ ಕ್ಲಬ್‌ನ ಪ್ರಾದೇಶಿಕ ಅಧ್ಯಕ್ಷ ವಾಸುದೇವ್‌ ರಾಯ್ಕರ್‌ ಮಾತನಾಡಿ, ವರನಟ ಡಾ| ರಾಜ್‌ಕುಮಾರ್‌ ಅವರಿಂದ ಹಿಡಿದು ಮೇರು ನಟರು ಚಿತ್ರರಂಗಕ್ಕೆ ಬಂದಿರುವುದು ರಂಗಕಲೆಯ ಮೂಲಕವೇ.

ಆದರೆ, ಇಂದಿನ ಹೊಡಿಬಡಿ ಸಂಸ್ಕೃತಿಯ ನಟರ ಹಾವಳಿಯ ಮಧ್ಯೆ, ರಂಗಭೂಮಿಯಿಂದ ಚಿತ್ರರಂಗಕ್ಕೆ ಬಂದ  ನಟರು ಕಣ್ಮರೆಯಾಗುತ್ತಿದ್ದಾರೆ ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎನ್‌.ಆರ್‌. ಅಣ್ಣೇಶಪ್ಪ, ನಿವೃತ್ತ ಮುಖ್ಯಶಿಕ್ಷಕ ಎಚ್‌. ಚಿನ್ನಪ್ಪ, ಮುಖ್ಯೋಪಾಧ್ಯಾಯ ಯಲ್ಲಪ್ಪ  ಕಡೇಮನಿ, ಕೆ.ಎಂ. ನಾಗರಾಜ್‌ ಇತರರು ಈ ಸಂದರ್ಭದಲ್ಲಿದ್ದರು. ನರಗನಹಳ್ಳಿ ಶಾಲೆಯ 80 ಮಕ್ಕಳು ನಾಟಕ ಪ್ರದರ್ಶಿಸಿದರು. 

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.