Hindutva ವೃಕ್ಷದಲ್ಲಿ ಸಾಕಷ್ಟು ರಂಬೆ-ಕೊಂಬೆಗಳಿವೆ : ವಚನಾನಂದ ಸ್ವಾಮೀಜಿ
ಮುಂದೆ ಜನಗಣತಿ ಬರುತ್ತದೆ. ಆಗ ಚರ್ಚೆ ಮಾಡಿ...
Team Udayavani, Aug 3, 2024, 7:05 PM IST
ದಾವಣಗೆರೆ: ವೀರಶೈವ – ಲಿಂಗಾಯತರು ಹಿಂದುಗಳು ಎನ್ನುವುದು ಚರ್ಚೆ ಮಾಡುವ ವಿಚಾರ. ನಾವು ಎಲ್ಲಿ ಇದ್ದೇವೆ? ನಾವು ಯಾವ ರಾಷ್ಟ್ರದಲ್ಲಿ ಇದ್ದೇವೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ನಾವು ಈ ರಾಷ್ಟ್ರವನ್ನು ಯಾವ ರೀತಿ ಬೆಳೆಸಬೇಕು ಎಂದು ಯೋಚಿಸಬೇಕು ಎಂದು ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಹಿಂದೂ ಎನ್ನುವುದು ಅತ್ಯಂತ ಶ್ರೇಷ್ಠ ವಾದ ಸತ್ಯ ಸನಾತನವಾದದ್ದು ಹಿಂದುತ್ವದ ವೃಕ್ಷದಲ್ಲಿ ಸಾಕಷ್ಟು ರಂಬೆ-ಕೊಂಬೆಗಳಿವೆ. ಅಲ್ಲಿ ಅಲ್ಲಮಪ್ರಭು ಬಸವಾದಿ ಶರಣರು, ಗೌತಮ ಬುದ್ಧ ಸೇರಿದಂತೆ ಹಲವು ಮಹನೀಯರು ಇದ್ದಾರೆ ಎಂದರು.
‘ನಮ್ಮ ಸರ್ಟಿಫಿಕೇಟ್‌ನಲ್ಲಿ ಹಿಂದೂ ಲಿಂಗಾಯತ ಎಂದು ಬರೆಸಿದ್ದರು. ಎಲ್ಲ ಮಹಾನೀಯರು ಒಂದೇ ಹೇಳಿದ್ದು ಹಿಂದೂ ಎಂದು. ಆದರೆ, ಅಚರಣೆಯಲ್ಲಿ ಒಂದು ರೀತಿಯ ಬದಲಾವಣೆ ಬರಬಹುದು ಅಷ್ಟೇ. ನಾವೆಲ್ಲ ಹಿಂದೂಗಳು. ಹಿಂದೂ ಎನ್ನುವುದು ಮಹಾಸಾಗರ. ನಾವುಗಳು ಅದರಲ್ಲಿ ಸೇರುವ ನದಿಗಳಿದ್ದಂತೆ. ಮುಂದೆ ಜನಗಣತಿ ಬರುತ್ತದೆ. ಆಗ ಚರ್ಚೆ ಮಾಡಿ ಏನು ಬರೆಸಬೇಕು ಎಂದು ತೀರ್ಮಾನ ತೆಗೆದುಕೊಳ್ಳುತ್ತೇವೆ. ವೀರಶೈವ ಲಿಂಗಾಯತ ಎಂದು ಬರೆಸಬೇಕೋ, ವೀರಶೈವ ಎಂದು ಬರೆಸಬೇಕೋ ಎಂದು ತೀರ್ಮಾನ ಮಾಡುತ್ತೇವೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.