ಬರ ಪರಿಹಾರ ಕಾರ್ಯಕ್ಕೆ ಹಣದ ಕೊರತೆ ಇಲ್ಲ

Team Udayavani, Jan 14, 2019, 5:38 AM IST

dvg-2.jpg

ದಾವಣಗೆರೆ: ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ಜಿಲ್ಲೆಯಲ್ಲಿ ಬರ ಪರಿಹಾರ ಕಾರ್ಯ ಕೈಗೊಳ್ಳಲು ಅನುದಾನದ ಕೊರತೆ ಇಲ್ಲ ಎಂದು ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷ ಶಿವಶಂಕರ ರೆಡ್ಡಿ ಹೇಳಿದ್ದಾರೆ.

ಬರ ಪರಿಸ್ಥಿತಿ ಅಧ್ಯಯನ ಹಾಗೂ ನಿರ್ವಹಣೆ ಪ್ರಗತಿ ಪರಿಶೀಲನೆ ಹಿನ್ನೆಲೆಯಲ್ಲಿ ಭಾನುವಾರ ತಂಡದೊಂದಿಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಅವರು, ದಾವಣಗೆರೆ ತಾಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿ ಟ್ಯಾಂಕರ್‌ನಲ್ಲಿ ಕುಡಿಯವ ನೀರು ಪೂರೈಕೆಗೆ ಚಾಲನೆ ನೀಡಿ ಮಾತನಾಡಿ, ಬರ ಪರಿಹಾರ ಕಾಮಗಾರಿ ಹಾಗೂ ಕಾರ್ಯ ಅನುಷ್ಠಾನಕ್ಕೆ ಅನುದಾನದ ತೊಂದರೆಯೇ ಇಲ್ಲ ಎಂದರು.

ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು, ಹಿಂಗಾರು ಎರಡೂ ಹಂಗಾಮದಲ್ಲೂ ಮಳೆ ಕೊರತೆಯಾಗಿ, ಬರ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು, ವಾಸ್ತವ ಅರಿಯಲು, ಅಧಿಕಾರಿಗಳು ಏನೇನು ಕ್ರಮ ವಹಿಸಿದ್ದಾರೆಂಬುದನ್ನು ಅಧ್ಯಯನ ಮಾಡಲು ಸಿಎಂ ಕುಮಾರಸ್ವಾಮಿ ನಮ್ಮ ತಂಡಕ್ಕೆ ಸೂಚಿಸಿದ್ದಾರೆ. ಹಾಗಾಗಿ ಸಮಸ್ಯೆ ತಿಳಿದು, ಪ್ರಾಮಾಣಿಕವಾಗಿ ಸ್ಪಂದಿಸಲು ಬಂದಿದ್ದೇವೆ ಎಂದು ಹೇಳಿದರು.

ಕಳೆದ ಸಾಲಿನ ಎರಡೂ ಹಂಗಾಮದಲ್ಲೂ ಬೆಳೆ ನಷ್ಟವಾಗಿರುವ ಬಗ್ಗೆ ಈಗಾಗಲೇ ನಮ್ಮ ಇಲಾಖೆ ಸಮೀಕ್ಷೆ ನಡೆಸಿದೆ. 52 ಕೋಟಿ ರೂ.ನಷ್ಟು ಜಿಲ್ಲೆಯಲ್ಲಿ ಬೆಳೆ ನಷ್ಟ ಸಂಭವಿಸಿದೆ. ರಾಜ್ಯದಲ್ಲಿ ಒಟ್ಟಾರೆ 1,600 ಕೋಟಿಯಷ್ಟು ಬೆಳೆ ನಷ್ಟವಾಗಿದೆ. 2 ತಿಂಗಳ ಹಿಂದೆಯೇ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಕೇಂದ್ರ ನಮ್ಮ ಮನವಿಗೆ ಸ್ಪಂದಿಸುವ ನಿರೀಕ್ಷೆ ಇದೆ. ನೆರವು ಬಿಡುಗಡೆಯಾದ ತಕ್ಷಣ ಬರ ಪರಿಹಾರ ಸಂಬಂಧ ಮತ್ತಷ್ಟು ಕಾರ್ಯಗಳನ್ನ ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹುಣಸೆಕಟ್ಟೆ ಗ್ರಾಮದಲ್ಲಿದ್ದ 6 ಕೊಳವೆಬಾವಿ ಒಣಗಿವೆ. ಅಲ್ಲದೆ ಮತ್ತೆ ಕೊರೆಯಿಸಿದ ನಾಲ್ಕು ಕೊಳವೆಬಾವಿಯಲ್ಲಿ ನೀರು ಸಿಕ್ಕಿಲ್ಲ. ಹಾಗಾಗಿ ಈ ಗ್ರಾಮಕ್ಕೆ ಟ್ಯಾಂಕರಲ್ಲಿ ನೀರು ಪೂರೈಸಲಾಗುವುದು. ಜಿಲ್ಲೆಯ ಕೆಲವು ಗ್ರಾಮಗಳಲ್ಲೂ ಇದೇ ಪರಿಸ್ಥಿತಿ ಇದೆ. ಎಲ್ಲಿ ಸಮಸ್ಯೆ ಇದೆಯೋ ಆ ಗ್ರಾಮದಲ್ಲಿ ತಕ್ಷಣ ನೀರು ಸರಬರಾಜಿಗೆ ಕ್ರಮ ವಹಿಸಲಾಗುವುದು. 1000 ಅಡಿ ಕೊರೆದಾದರೂ ಸಹ ನೀರು ಪೂರೈಕೆಗೆ ಮುಂದಾಗುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಜತೆಗೆ ಜಾನುವಾರುಗಳಿಗೂ ನೀರು-ಮೇವಿನ ಬಗ್ಗೆಯೂ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಸಮಿತಿ ಸದಸ್ಯರಾದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಆರ್‌. ವಾಸು, ಕಾರ್ಮಿಕ ಸಚಿವ ವೆಂಕಟರಮಣಪ್ಪ, ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ, ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಜಿಪಂ ಸಿಇಒ ಎಸ್‌. ಅಶ್ವತಿ, ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧಿಕಾರಿ ಉದೇಶ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್‌, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಟಿ.ಆರ್‌. ವೇದಮೂರ್ತಿ, ತಹಶೀಲ್ದಾರ್‌ ಸಂತೋಷಕುಮಾರ್‌, ಇತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

2-davangere

Davangere: ಮಹಿಳೆಯ ಮೇಲೆ ಕರಡಿ ದಾಳಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.