ಕೂಲಿ ಕಾರ್ಮಿಕರ ಅನುಕೂಲಕ್ಕೆ ಗಂಜಿ ಕೇಂದ್ರ ಆರಂಭಕ್ಕೆ ಚಿಂತನೆ
Team Udayavani, Mar 31, 2020, 11:28 AM IST
ಜಗಳೂರು: ಯುದ್ಧದ ಸಂದರ್ಭದಲ್ಲಿ ಸೈನಿಕರು ಯಾವ ರೀತಿ ಕೆಲಸ ಮಾಡುತ್ತಾರೋ ಅವರಂತೆ ನಾವು ಕೂಡ ಕೊರೊನಾ ವಿರುದ್ಧ ಹೊರಾಟ ಮಾಡಬೇಕಾಗಿದೆ ಎಂದು ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ಹೇಳಿದರು.
ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪಿಡಿಒಗಳು ಮತ್ತು ಗ್ರಾಮಲೆಕ್ಕಾಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಟಾಸ್ಕ್ಪೋರ್ಸ್ ರಚಿಸಲಾಗಿದೆ. ಈ ಸಮಿತಿಯವರು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಸಂತೆ, ಜಾತ್ರೆ, ಹಬ್ಬಗಳನ್ನು ಆಚರಿಸುವುದನ್ನು ತಡೆಗಟ್ಟಬೇಕು ಹಾಗೂ ಗ್ರಾಮದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.ಗ್ರಾಮಗಳಲ್ಲಿ ಊಟದ ಸಮಸ್ಯೆ ಎದುರಿಸುತ್ತಿರುವ ಕೂಲಿ ಕಾರ್ಮಿಕರ ಪಟ್ಟಿ ನೀಡಿದರೆ ಪಟ್ಟಣದಲ್ಲಿ ಗಂಜಿ ಕೇಂದ್ರ ಆರಂಭಿಸಲಾಗುವುದು ಎಂದರು.
ತಾಪಂ ಇಒ ಮಲ್ಲಾ ನಾಯ್ಕ ಮಾತನಾಡಿ, ಪಿಡಿಒಗಳು ಪಂಚಾಯತ್ ಕೇಂದ್ರ ಸ್ಥಾನದಲ್ಲಿರಬೇಕು ಮತ್ತು ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಧ್ವನಿವರ್ಧಕಗಳ ಮೂಲಕ ಕೋವಿಡ್ 19 ಬಗ್ಗೆ ಜಾಗೃತಿ ಮೂಡಿಸಬೇಕು. ಕೆಲವು ಗ್ರಾಮಗಳ ರೇಷನ್ ಅಂಗಡಿಗಳಲ್ಲಿ ಕೃತಕ ಆಭಾವ ಸೃಷ್ಟಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳಿದ್ದು, ಅವುಗಳ ಬಗ್ಗೆ ಗಮನ ನೀಡುವಂತೆ ಸೂಚಿಸಿದರು. ಸಭೆಯಲ್ಲಿ ಉಪತಹಶಿಲ್ದಾರ್ ರಾಮಚಂದ್ರ, ರೇವಣ್ಣ, ಸಿದ್ದಿಕ್, ಪಿಡಿಒಗಳು, ಗ್ರಾಮಲೆಕ್ಕಾಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.